‘ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್’ ಮರುನಾಮಕರಣಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹ ?
Team Udayavani, Sep 2, 2021, 2:11 PM IST
ಬೆಂಗಳೂರು: ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ( ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣಕ್ಕೆ ಒತ್ತಾಯಿಸಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳು ತಿಳಿಸಿವೆ.
ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಬದಲಿಗೆ ಫೀಲ್ಡ್ ಮಾರ್ಷಲ್ ಕೆ.ಕಾರಿಯಪ್ಪ ಅವರು ಹೆಸರು ಇಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆಯಷ್ಟೆ ಹಿಮಾಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಕ್ಯಾಬಿನೆಟ್ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು (ಅಸ್ಸಾಂ ರಾಜ್ಯದಲ್ಲಿರುವ) ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ಬೆಳವಣೆಗೆಯ ಬೆನ್ನಲ್ಲೆ ಕರ್ನಾಟಕದಲ್ಲಿರುವ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣದ ಕೂಗು ಕೇಳಿ ಬಂದಿದೆ.
ಇನ್ನು ಕೆಲ ದಿನಗಳಿಂದ ರಾಜ್ಯದಲ್ಲಿರುವ ‘ಇಂದಿರಾ ಕ್ಯಾಂಟೀನ್’ ಮರುನಾಮಕರಣ ಕೂಗು ಕೇಳಿ ಬರುತ್ತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಇಂದಿರಾ ಕ್ಯಾಂಟೀನ್ ಮರುನಾಮಕರಣಕ್ಕೆ ಒತ್ತಾಯಿಸಿದ್ದರು. ಈ ಬೇಡಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.