ಜನತಾ ದರ್ಶನದಲ್ಲಿ ಜನಜಂಗುಳಿ
Team Udayavani, Jun 12, 2018, 6:25 AM IST
ಬೆಂಗಳೂರು: ಮುಖ್ಯಮಂತ್ರಿಯವರ ಜನತಾ ದರ್ಶನದಲ್ಲಿ ಸೋಮವಾರ ಜನಜಂಗುಳಿಯೇ ಇತ್ತು. ಬೆಳಗ್ಗೆಯಿಂದ ಸಂಜೆವರೆಗೆ ಕಾದ ಸಾರ್ವಜನಿಕರು ನಾಡಿನ ದೊರೆಯ ಮುಂದೆ ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಸೋಮವಾರದ ಜನತಾ ದರ್ಶನದಲ್ಲಿ 350ಕ್ಕೂ ಹೆಚ್ಚು ಜನರು ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು
ಮುಖ್ಯಮಂತ್ರಿಯವರಿಗೆ ಸಲ್ಲಿಸಿದರು.
ಇದೇ ವೇಳೆ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿ ಎಂದು 100ಕ್ಕೂ ಹೆಚ್ಚು ಕಿರಿಯ ಮಹಿಳಾ ಆರೋಗ್ಯ ಸಹಾಯಕಿರು ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ್, ಗಣಿತ ಶಿಕ್ಷಕರ ನೇಮಕಾತಿಗೆ ನಿಗದಿಪಡಿಸಿರುವ ಅಂಕಗಳನ್ನು ಕಡಿತಗೊಳಿಸಬೇಕು ಎಂದು ಹೈದರಾಬಾದ್ ಕರ್ನಾಟಕದ 50ಕ್ಕೂ ಹೆಚ್ಚುಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಬೆಳಗ್ಗೆ 10 ಗಂಟೆಗೆ ಜನತಾ ದರ್ಶನ ನಿಗದಿಯಾಗಿತ್ತು. ಆದರೆ, ಮುಖ್ಯಮಂತ್ರಿ ಬಂದಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ. ಎಲ್ಲರ ಅಹವಾಲುಗಳನ್ನು ಸಮಧಾನದಿಂದ ಆಲಿಸಿದ ಮುಖ್ಯಮಂತ್ರಿಗಳು ಕೆಲವು ಮನವಿಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಗಳನ್ನು ನೀಡಿದರು.
ಬಜೆಟ್ ಮಂಡನೆವರೆಗೆ ಜನತಾ ದರ್ಶನ ಇಲ್ಲ: ಬಜೆಟ್ ಸಿದ್ಧತೆ ಮಾಡಬೇಕಾಗಿರುವುದರಿಂದ ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡನೆವರೆಗೆ ಜನತಾ ದರ್ಶನ ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಪ್ರಕಟಣೆ ಹೊರಡಿಸಿದ್ದು, ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ
ಭೇಟಿಯನ್ನು ಮುಂದೂಡಲಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.