ಸ್ಪೀಕರ್ ಗದ್ದುಗೆ ; ರಮೇಶ್ ಕುಮಾರ್ ಅವಿರೋಧ ಆಯ್ಕೆ, ಕಲಾಪ ಆರಂಭ
Team Udayavani, May 25, 2018, 11:08 AM IST
ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದ್ದು, ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಕೊನೆ ಕ್ಷಣದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು, ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್ ಅವರನ್ನು ಸೂಚಿಸುತ್ತಿಲ್ಲ ಎಂದು ಹೇಳಿದರು. ಅದಕ್ಕೆ ಸಮ್ಮತಿ ಇರುವುದಾಗಿ ಸುರೇಶ್ ಕುಮಾರ್ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯಗೆ ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಮೇಶ್ ಕುಮಾರ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಸೂಚಿಸಿದರು, ನೂತನ ಡಿಸಿಎಂ ಪರಮೇಶ್ವರ್ ಅವರು ಅದನ್ನು ಅನುಮೋದಿಸಿದರು. ಧ್ವನಿಮತದ ಬಳಿಕ ರಮೇಶ್ ಕುಮಾರ್ ಅವರನ್ನು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಘೋಷಿಸಿದರು. ತದನಂತರ ನೂತನ ಸ್ಪೀಕರ್ ರಮೇಶ್ ಕುಮಾರ್ ಅವರು ಸ್ಪೀಕರ್ ಪೀಠವನ್ನು ಅಲಂಕರಿಸಿದರು.
ವಿಧಾನಸಭೆಯಲ್ಲಿ ಇಂದು ಏನೇನಾಗುತ್ತೆ?
*ಮಧ್ಯಾಹ್ನ 12ಗಂಟೆಗೆ ಕಲಾಪ ಆರಂಭ
*ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರಿಂದ ಸ್ಪೀಕರ್ ಚುನಾವಣೆ ಘೋಷಣೆ
*ಕಾಂಗ್ರೆಸ್ ನಿಂದ ರಮೇಶ್ ಕುಮಾರ್, ಬಿಜೆಪಿಯಿಂದ ಸುರೇಶ್ ಕುಮಾರ್ ಸ್ಪೀಕರ್ ಚುನಾವಣಾ ಅಖಾಡದಲ್ಲಿದ್ದರು.
*ಕೊನೆಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಬಿಜೆಪಿಯ ಸುರೇಶ್ ಕುಮಾರ್
*ಕಾಂಗ್ರೆಸ್ ನ ರಮೇಶ್ ಕುಮಾರ್ ಸ್ಪೀಕರ್ ಆಗಿ ಅವಿರೋಧ ಆಯ್ಕೆ, ನೂತನ ಸ್ಪೀಕರ್ ಗೆ ಅಭಿನಂದನೆ
*ಹೊಸ ಸ್ಪೀಕರ್ ಅವರಿಂದ ವಿಶ್ವಾಸಮತದ ಕಲಾಪ
*ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವಿಶ್ವಾಸಮತ ಪ್ರಸ್ತಾಪ ಮಂಡನೆ
*ಯಾವ ಕಾರಣಕ್ಕಾಗಿ ವಿಶ್ವಾಸಮತ ಯಾಚನೆ ಎಂಬ ಬಗ್ಗೆ ಸಿಎಂ ಘೋಷಣೆ
*ವಿಶ್ವಾಸಮತದ ಪ್ರಸ್ತಾವನೆ ಮತಕ್ಕೆ
ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಪಕ್ಷದ ಶಾಸಕರು:
ವಿಶ್ವಾಸಮತ ಹಾಗೂ ಸ್ಪೀಕರ್ ಆಯ್ಕೆ ಹಿನ್ನೆಲೆಯಲ್ಲಿ ನಡೆಯಲಿರುವ ಕಲಾಪಕ್ಕೆ ಹಿಲ್ಟನ್ ಹೋಟೆಲ್ ನಿಂದ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ವಿಧಾನಸೌಧಕ್ಕೆ ಆಗಮಿಸಿದ ಬಿಜೆಪಿ ಶಾಸಕರು:
ಖಾಸಗಿ ಬಸ್ ಗಳಲ್ಲಿ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಆದರೆ ಸಭೆಯಲ್ಲಿ ಶಾಸಕರಿಗೆ ಬಿಜೆಪಿ ವಿಪ್ ಜಾರಿ ಮಾಡಿಲ್ಲ.
221 ಸದಸ್ಯ ಬಲ
ಮ್ಯಾಜಿಕ್ ನಂಬರ್ 111
ಜೆಡಿಎಸ್ 38+ಕಾಂಗ್ರೆಸ್ 78+ ಪಕ್ಷೇತರರು 02= 117
ಬಿಜೆಪಿ ಒಟ್ಟು ಸದಸ್ಯರ ಬಲ 104
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.