ನಾನೇ ಖುದ್ದು ಫೀಲ್ಡ್‌ಗೆ ಬರ್ತೀನಿ – ಸಿಎಂ !


Team Udayavani, Nov 25, 2021, 9:57 AM IST

BBMP Cm

ಬೆಂಗಳೂರು: “ಎಲ್ಲೆಲ್ಲಿ ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ ಎಂಬುದೇ ನಿಮಗೆ ಗೊತ್ತಿಲ್ಲ. ಹೀಗಿರುವಾಗ, ಫೀಲ್ಡ್‌ ಇನ್‌ಸ್ಪೆಕ್ಷನ್‌ ಹೇಗೆ ಮಾಡಿದ್ದೀರಿ? ಎಲ್ಲೆಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಮತ್ತು ಎಷ್ಟು ಪ್ರಗತಿಯಲ್ಲಿದೆ ಎಂಬ ಮಾಹಿತಿಯೊಂದು ಕೊಟ್ಟಿಡಿ.

ಇನ್ಮುಂದೆ ನಾನೇ ಖುದ್ದು ಪರಿಶೀಲನೆ ಮಾಡ್ತೀನಿ…’! -ಮಳೆ ನೀರುಗಾಲುವೆಗಳ ಪ್ರಗತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚುರುಕು ಮುಟ್ಟಿಸಿದ ಪರಿ ಇದು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್‌ ನೀರುಗಾಲುವೆಗಳ ಕುರಿತು ಕೈಗೊಳ್ಳಬೇಕಾದ ಕ್ರಮಗಳಿಗೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ನಗರದಲ್ಲಿ ಬೃಹತ್‌ ಮಳೆ ನೀರುಗಾಲುವೆಯಲ್ಲಿ ಎಷ್ಟು ಕಿ.ಮೀ. ಕೈಗೆತ್ತಿಕೊಳ್ಳಲಾಗಿದೆ?

ಬರುವ ಜನವರಿಗೆ ಇದು ಪೂರ್ಣಗೊಳ್ಳಬೇಕಿದ್ದು, ಪ್ರಸ್ತುತ ಎಷ್ಟು ಪ್ರಗತಿ ಸಾಧಿಸಲಾಗಿದೆ? ಯಾವ ವಲಯ ಮತ್ತು ಸ್ಥಳದಲ್ಲಿ ಎಷ್ಟು ಮುಗಿದಿದೆ ಹಾಗೂ ಉಳಿದಿದ್ದು ಯಾವ್ಯಾವಾಗ ಪೂರ್ಣಗೊಳ್ಳಲಿದೆ? ಎಂದು ಅಧಿಕಾರಿಗಳ ಮುಂದೆ ಪ್ರಶ್ನೆಗಳ ಸುರಿಮಳೆಗರೆದರು.

ಇದನ್ನೂ ಓದಿ;- ಉತ್ತರಪ್ರದೇಶದ ಐದನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ

ಇದಕ್ಕೆ ಪ್ರತಿಕ್ರಿಯಿಸಲು ಅಧಿಕಾರಿಗಳು ದಡಬಡಾಯಿಸಿದರು. ಆಗ, ಕಾಮಗಾರಿ ಎಲ್ಲೆಲ್ಲಿ ಯಾವ ಹಂತದಲ್ಲಿದೆ ಹಾಗೂ ಯಾವಾಗ ಮುಗಿಯಲಿದೆ ಎಂಬ ನಿಖರ ಮಾಹಿತಿ ನೀಡಲಿಕ್ಕೂ ನಿಮಗೆ ಆಗುತ್ತಿಲ್ಲ. ಎಷ್ಟರಮಟ್ಟಿಗೆ ನೀವು ಸ್ಥಳ ಪರಿಶೀಲನೆ ನಡೆಸಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತದೆ.

ನೀವು ಪ್ರಗತಿಯ ಮಾಹಿತಿ ಕೊಡಿ, ಇನ್ಮುಂದೆ ನಾನೇ ಪರಿಶೀಲನೆ ನಡೆಸುತ್ತೇನೆ ಎಂದ ಮುಖ್ಯಮಂತ್ರಿಗಳು, ಪ್ರತಿ 15 ದಿನಗಳಿಗೊಮ್ಮೆ ಪ್ರಾಥಮಿಕ ನೀರುಗಾಲುವೆಗಳ ಕಾಮಗಾರಿಗಳನ್ನು ಸಿಎಂ ಡ್ಯಾಶ್‌ ಬೋರ್ಡ್‌ನಲ್ಲಿ ಖುದ್ದು ಪರಿಶೀಲನೆ ನಡೆಸುತ್ತೇನೆ. ಅಗತ್ಯಬಿದ್ದರೆ, ಸ್ಥಳಕ್ಕೂ ಭೇಟಿ ನೀಡುತ್ತೇನೆ’ ಎಂದು ತಿಳಿಸಿದರು.

ಅಷ್ಟೇ ಅಲ್ಲ, ಕಾಮಗಾರಿ ಪ್ರಗತಿ ಬಗ್ಗೆ ಎಂಜಿನಿಯರ್‌ ಗಳಿಗೆ ಖುದ್ದು ಕರೆ ಮಾಡಿ ವಿಚಾರಿಸಲಾಗುವುದು. ಹಾಗೊಂದು ವೇಳೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ, ಅಂತಹ ಅಧಿಕಾರಿಗಳನ್ನು ಮುಲಾಜಿಲ್ಲದೆ ಅಮಾನತು ಗೊಳಿಸಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದ ಅವರು, ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಎಂಜಿನಿಯರ್‌ಗಳಿಗೆ ಕೆಲಸ ಮರುಹಂಚಿಕೆ ಮಾಡಲಾಗುವುದು ಎಂದರು.

130 ಎಂಜಿನಿಯರ್‌ಗಳ ನೇಮಕ

ತ್ವರಿತ ಕಾಮಗಾರಿಗಳು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗಾಗಿ 130 ಎಂಜಿನಿಯರ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ರಾಜಕಾಲುವೆಗಳ ಹೂಳು ತೆಗೆಯಲಿಕ್ಕೂ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಿಡಿಎ ಬಡಾವಣೆಗಳಲ್ಲಿ ವಿದ್ಯುತ್ಛಕ್ತಿ, ಚರಂಡಿ ಹಾಗೂ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. 2,626 ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿದ್ದು, ಅದರಲ್ಲಿ 1,480 ತೆರವುಗೊಳಿಸಿದ್ದಾರೆ.

ಇನ್ನು 714 ಅನ್ನು ತೆರೆವುಗೊಳಿಸಲು ಕಾನೂನಾತ್ಮಕವಾಗಿ ಕ್ರಮ ಜರುಗಿಸುತ್ತೇವೆ. ಬಡವರಿಗೆ ತೊಂದರೆ ಕೊಡಬಾರದು. ಅವರ ಸ್ಥಳಾಂತರಕ್ಕೆ ಸಮಯ ನೀಡುವಂತೆ ಸೂಚಿಸಲಾಗಿದೆ. ದೊಡ್ಡ ಬಿಲ್ಡರ್‌ಗಳು ಒತ್ತುವರಿ ಮಾಡಿದ್ದರೆ, ಕೂಡಲೇ ಅದನ್ನು ತೆರವುಗೊಳಿಸಲು ಸ್ಪಷ್ಟ ಆದೇಶ ನೀಡಲಾಗಿದೆ ಎಂದು ಪುನರುತ್ಛರಿಸಿದರು. ಸಚಿವರಾದ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ವಿ. ಸೋಮಣ್ಣ, ಎಸ್‌.ಟಿ. ಸೋಮಶೇಖರ್‌, ಬಿ.ಎ. ಬಸವರಾಜ (ಬೈರತಿ), ಕೆ.ಗೋಪಾಲಯ್ಯ, ಮುನಿರತ್ನ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌, ಮುಖ್ಯ ಆಯುಕ್ತ ಗೌರವ್‌ ಗುಪ್ತ ಇದ್ದರು.

ಬಾಕಿ 35 ಕಿ.ಮೀ. ಕಾಲುವೆಗೆ ಜನವರಿ ಗಡುವು

ವೃಷಭಾವತಿ, ಹೆಬ್ಟಾಳ, ಚಲ್ಲಘಟ್ಟ ಮತ್ತು ಕೋರಮಂಗಲ ನಗರದ ನಾಲ್ಕು ವ್ಯಾಲಿಗಳಿಗೆ 842 ಕಿ.ಮೀ. ರಾಜ ಕಾಲುವೆ ಇದೆ. ಈ ಪೈಕಿ 415 ಕಿ.ಮೀ. ಈಗಾಗಲೇ ಪೂರ್ಣಗೊಂಡಿದೆ. 2019-20ರಲ್ಲಿ 75 ಕಿ.ಮೀ. ರಾಜಕಾಲುವೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದ್ದು, ಅದರಲ್ಲಿ 40 ಕಿ.ಮೀ. ಕಾಮಗಾರಿ ಪೂರ್ಣ ಗೊಂಡಿದೆ.

ಉಳಿದ 35 ಕಿ.ಮೀ. ಅನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ. ಹಲವು ತೀವ್ರ ಸಮಸ್ಯೆಗೆ ಕಾರಣವಾಗುವ ಸ್ಥಳಗಳನ್ನು ಗುರುತಿಸಲಾಗಿದ್ದು, ಅಂತಹ ಸುಮಾರು 94 ಸ್ಥಳಗಳಿವೆ. ಅವುಗಳನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

90 ಕಿ.ಮೀ. ನೀರುಗಾಲುವೆ; 900 ಕೋಟಿ ವೆಚ್ಚ

ಬೆಂಗಳೂರು: ನಗರದ 51.5 ಕಿ.ಮೀ. ಬೃಹತ್‌ ಮತ್ತು 38 ಕಿ.ಮೀ. ಉಪ ಪ್ರಮುಖ ಮಳೆ ನೀರುಗಾಲುವೆಗಳನ್ನು 900 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಬರುವ ಮಳೆಗಾಲದ ಒಳಗೆ ಈ ಯೋಜನೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಲ್ಲಘಟ್ಟ ಮತ್ತು ವೃಷಭಾವತಿ ಯಲ್ಲಿಯೂ ಇಂತಹ ತೀವ್ರ ಸಮಸ್ಯಾತ್ಮಕ ಸ್ಥಳಗಳಿವೆ ಎಂಬ ಮಾಹಿತಿಯನ್ನು ಪಡೆದಿದ್ದೇನೆ.

ಸುಮಾರು 51 ಕಿ.ಮೀ. ಬೃಹತ್‌ ನೀರುಗಾಲುವೆಗಳು ಕೂಡಲೇ ಆಗಬೇಕಿವೆ. ಉಳಿದ 38 ಕಿ.ಮೀ. ಉಪ ಮುಖ್ಯ ಚರಂಡಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಇವುಗಳನ್ನು 900 ಕೋಟಿ ವೆಚ್ಚದಲ್ಲಿ ನಿರ್ಮಿಸುವ ಉದ್ದೇಶ ಇದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದು, ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು. ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಜನರಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದರು.

1 ಅಡಿಗಿಂತ ಹೆಚ್ಚು ಆಳದ ಗುಂಡಿಗೆ ಆದ್ಯತೆ

ನಗರದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ರಸ್ತೆಗಳಲ್ಲಿ ಗುಂಡಿ ನಿರ್ಮಾಣವಾಗಿವೆ. ಮಳೆ ನಿಂತ ತಕ್ಷಣ 1 ಅಡಿಗಿಂತ ಹೆಚ್ಚು ಆಳದ ಗುಂಡಿಗಳನ್ನು ಮುಚ್ಚಲು ಮೊದಲ ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜತೆಗೆ, ಹೆಚ್ಚು ವಿಸ್ತೀರ್ಣದಲ್ಲಿ (ಲಾಂಗ್‌ ಸ್ಟ್ರೆಚ್‌) ರಸ್ತೆ ಹಾಳಾಗಿದ್ದರೆ ಅದನ್ನು ಸಂಪೂರ್ಣವಾಗಿ ಮರುಡಾಂಬರೀಕರಣ ಮಾಡಲು ಸೂಚಿಸ ಲಾಗಿದೆ. ವಾಹನ ಸಂಚಾರಕ್ಕೆ ಸಮರ್ಪಕ ರಸ್ತೆ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

ಪಿಎಂ ಆಗಮನ: ಪೂರ್ವ ತಯಾರಿ ಸಭೆ

ಬೆಂಗಳೂರು: ನಗರದ ಡಾ.ಬಿ.ಆರ್‌ ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಯೂನಿವರ್ಸಿಟಿಯ ನೂತನ ಕ್ಯಾಂಪಸ್‌ ಉದ್ಘಾಟನೆಗೆ ಡಿ.6 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಭೆ ನಡೆಸಿದರು. ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕಾರ್ಯಕ್ರಮ ಸಂಬಂಧ ಕೆಲವು ನಿರ್ದೇಶನ ನೀಡಿದರು.. ಸಚಿವರಾದ ಡಾ.ಸಿ.ಎನ್‌ ಅಶ್ವತ್ಥನಾರಾಯಣ, ವಿ.

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.