ಸದಾಶಿವ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 15, 2018, 6:35 AM IST
ಬೆಂಗಳೂರು: ನಿವೃತ್ತ ನ್ಯಾ. ಎ.ಜೆ.ಸದಾಶಿವ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘಟನೆಗಳು ಭಾನುವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು.
ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮೌರ್ಯ ವೃತ್ತದಿಂದ ಹೊರಡಲು ಮುಂದಾದಾಗ ಪೊಲೀಸರು ತಡೆದು ಬ್ಯಾರಿಕೇಡ್ ಅಡ್ಡಹಾಕಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಸಚಿವರಿಗೆ ತರಾಟೆ: ಈ ಮಧ್ಯೆ ಸದಾಶಿವ ಆಯೋಗದ ವರದಿ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಪ್ರತಿಭಟನಾಕಾರರನ್ನು ಭೇಟಿಯಾಗಿ ಅವರ ಮನವೊಲಿಸಲು ಮುಂದಾದರು. ಆದರೆ, ವರದಿ ಜಾರಿ ಹೊರತುಪಡಿಸಿ ಬೇರೆ ಯಾವುದೇ ವಿಚಾರ ಕೇಳಲು ನಾವು ಬಯಸುವುದಿಲ್ಲ ಎಂದು ಪ್ರತಿಭಟನಾಕಾರರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.
ಹೋರಾಟಗಾರರೊಂದಿಗೆ
ಸಿಎಂ ಸಭೆ ಇಂದು
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗಾಗಿ ಪ್ರತಿಭಟಿಸುತ್ತಿರುವ ಹೋರಾಟ ಸಮಿತಿಯೊಂದಿಗೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಲಿದ್ದಾರೆ ಎಂದು ಸಚಿವ ಆಂಜನೇಯ ಸುದ್ದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ನ ದಲಿತ ಮುಖಂಡರೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿಗಳೇ ಖುದ್ದಾಗಿ ಹೋರಾಟಗಾರರನ್ನು ಭೇಟಿ ಮಾಡಿ ಅವರ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ನಿರ್ಧರಿಸಲಾಗಿದೆ. ಹೀಗಾಗಿ ಸೋಮವಾರ ಸಭೆಯ ನಿರ್ಣಯಗಳನ್ನು ಹೋರಾಟ ಸಮಿತಿಯೊಂದಿಗೆ ವಿನಿಮಯ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.