ಜಯಂತಿಗೆ ಖಾಕಿ ಕಾವಲು
Team Udayavani, Nov 10, 2017, 6:00 AM IST
ಬೆಂಗಳೂರು: ಸಾಕಷ್ಟು ವಿರೋಧದ ನಡುವೆಯೇ ರಾಜ್ಯ ಸರಕಾರದ ವತಿಯಿಂದ ರಾಜ್ಯಾಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಸಹಿತ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶುಕ್ರವಾರ ಟಿಪ್ಪು ಜಯಂತಿ ಆಚರಿಸಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಟಿಪ್ಪು ಜಯಂತಿ ವಿರೋಧಿಸಿ ಹಿಂದೂಪರ ಸಂಘಟನೆಗಳು ಸಹಿತ ಹಲವು ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಕರೆ ನೀಡಿ
ರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುರುವಾರದಿಂದ ಶನಿವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಟಿಪ್ಪು ಜಯಂತಿ ಪರ ಮತ್ತು ವಿರುದ್ಧ ಹೋರಾಟಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಶಾಂತಿಯುತ
ವಾಗಿ ಟಿಪ್ಪು ಜಯಂತಿ ಆಚರಣೆಗೆ ಮಾತ್ರ ಸರಕಾರ ಅವಕಾಶ ಕಲ್ಪಿಸಿದೆ. ಈ ವೇಳೆ ಯಾವುದೇ ರ್ಯಾಲಿ, ಪಾದಯಾತ್ರೆ, ಮೆರವಣಿಗೆ ನಡೆಸುವಂತಿಲ್ಲ. ಅಲ್ಲದೆ, ಟಿಪ್ಪು ಜಯಂತಿ ವಿರುದ್ಧ ಹೋರಾಟಕ್ಕೂ ಅವಕಾಶ ನೀಡಿಲ್ಲ. ನಿಷೇಧಾಜ್ಞೆ ಉಲ್ಲಂ ಸಿ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದು, ಈ ಕುರಿತು ಎಲ್ಲ ಜಿಲ್ಲಾಡಳಿತಗಳಿಗೂ ಸರಕಾರದಿಂದ ನಿರ್ದೇಶ ನೀಡಲಾಗಿದೆ.
ಟಿಪ್ಪು ಜಯಂತಿ ವೇಳೆ ಕಳೆದ ಎರಡು ವರ್ಷ ಕಹಿ ಘಟನೆಗಳು ನಡೆದಿದ್ದು, ಇಬ್ಬರು ಹತ್ಯೆಯಾಗಿದ್ದರು. ಹೊರ ರಾಜ್ಯಗಳಿಂದ ಬಂದಿದ್ದ ದುಷ್ಕರ್ಮಿಗಳು ಹಿಂಸಾಚಾರಕ್ಕೆ ಪ್ರಯತ್ನಿಸಿದ್ದರು. ಹೀಗಾಗಿ ಈ ವರ್ಷ ರಾಜ್ಯದ ಗಡಿ ಭಾಗ ಸಹಿತ ಚೆಕ್‌ಪೋಸ್ಟ್‌ಗಳಲ್ಲಿ ಹೊರ ರಾಜ್ಯದಿಂದ ರಾಜ್ಯಕ್ಕೆ ಬರುತ್ತಿರುವವರ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ.
ಈ ಬಾರಿ ಟಿಪ್ಪು ಜಯಂತಿಗೆ ಬಿಜೆಪಿ ಸಹಿತ ವಿವಿಧ ಸಂಘಟನೆಗಳ ವಿರೋಧ ಹೆಚ್ಚಾಗಿದ್ದು, ಕಳೆದ 3-4 ದಿನಗಳಿಂದ ಬೆಂಗಳೂರು ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ, ವಿಚಾರ ಸಂಕಿರಣಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ಸರಕಾರ ಸೂಚನೆ ನೀಡಿದೆ.
ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಹಿಂದೂಪರ ಸಂಘಟನೆಗಳು, ಕೊಡವ ಸಮಾಜ ಸಹಿತ ಹಲವು ಸಂಘ-ಸಂಸ್ಥೆಗಳು ಕೊಡಗು ಬಂದ್‌ಗೆ ಕರೆ ನೀಡಿವೆ. ಇನ್ನೊಂದೆಡೆ ಕೊಡಗು, ದಕ್ಷಿಣ ಕನ್ನಡ, ಚಿತ್ರದುರ್ಗ ಸಹಿತ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆಗೂ ಕರೆ ನೀಡಲಾಗಿದೆ. ಹೀಗಾಗಿ ಶಾಂತಿಭಂಗವಾಗದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ರುವ ಜಿಲ್ಲಾಡಳಿತಗಳು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿವೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜಿಸಲಾಗಿದೆ.
ದಕ್ಷಿಣ ಕನ್ನಡ
ಜಿಲ್ಲೆಯಲ್ಲಿ ಕಟ್ಟೆಚ್ಚರ
ಒಂದೆಡೆ ಟಿಪ್ಪು ಜಯಂತಿಯಾದರೆ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿಯ ನವಕರ್ನಾಟಕ ನಿರ್ಮಾಣ ಪರಿವರ್ತನ ಯಾತ್ರೆಯೂ ಸಂಚ ರಿಸಲಿದ್ದು, ಮೂರೂ ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರ ಜತೆಗೆ ಕೆಎಸ್‌ಆರ್‌ಪಿ ತುಕಡಿಗಳನ್ನೂ ನಿಯೋಜಿಸಲಾಗಿದೆ. ಅಲ್ಲದೆ, ಪರಿವರ್ತನ ಯಾತ್ರೆ ಯಲ್ಲಿ ಪಾಲ್ಗೊಳ್ಳುವವರು ರ್ಯಾಲಿ, ಮೆರವಣಿಗೆ ಗಳನ್ನು ನಡೆಸದಂತೆ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.