ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ; ಮಳೆಗೆ ಮೂವರು ಬಲಿ
Team Udayavani, May 27, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಕೃತ್ತಿಕಾ ಮಳೆಯ ಅಬ್ಬರ ಮುಂದುವರಿದಿದ್ದು, ಮೂವರು ಸಾವಿಗೀಡಾಗಿದ್ದಾರೆ.
ಮೂಡಬಿದಿರೆ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ಸಿಡಿಲಿಗೆ ತಲಾ ಒಬ್ಬರು ಬಲಿಯಾಗಿದ್ದರೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನೆರೆಗೆ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದಾನೆ. ರಾಜಧಾನಿ ಬೆಂಗಳೂರು, ಮಡಿಕೇರಿ, ದಾವಣಗೆರೆ, ಮೂಡುಬಿದಿರೆ, ಸುಳ್ಯ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ಈ ಮಧ್ಯೆ, ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಳ್ಯದಲ್ಲಿ ರಾಜ್ಯದಲ್ಲಿಯೇ ಅಧಿಕ, 12 ಸೆಂ.ಮೀ.ಗಳಷ್ಟು ಮಳೆ ಸುರಿಯಿತು. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 42.9 ಡಿ.ಸೆ.ತಾಪಮಾನ ದಾಖಲಾಯಿತು.
ರಾಜಧಾನಿ ಬೆಂಗಳೂರಿನ ಕೆಲವೆಡೆ ಸಂಜೆಯ ವೇಳೆ ಮಳೆಯಾಯಿತು. ಇದೇ ವೇಳೆ, ಕೊಡಗು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಸಮೀಪದ ನೆಲ್ಲಿಕಾರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮೂಡುಬಿದಿರೆ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ನಲ್ಲಪ್ಪ ರಾಥೋಡ್ ಅವರ ಪತ್ನಿ, ಸಾವಿತ್ರಿ ರಾಥೋಡ್ (32) ಮೃತಪಟ್ಟಿದ್ದಾರೆ. ಈ ಮಧ್ಯೆ,ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಹೋಬಳಿಯ ರಾಮಪ್ಪನಹಟ್ಟಿಯಲ್ಲಿ ಸುಮಾರು ಸಂಜೆ 4.30ರ ಸುಮಾರಿಗೆ ಕುರಿ ಮೇಯಿಸಲು ತೆರಳಿದ್ದ ಸಮಯದಲ್ಲಿ ಸಿಡಿಲು ಬಡಿದು ಕುರಿಗಾಹಿ ಚಿಕ್ಕಣ್ಣ ಎಂಬುವರು ಮೃತಪಟ್ಟಿದ್ದಾರೆ.
ಚೆಕ್‌ಡ್ಯಾಂ ನೀರಲ್ಲಿ ಕೊಚ್ಚಿಹೋದ:
ದಾವಣಗೆರೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಚನ್ನಗಿರಿ ತಾಲೂಕು ಲಕೀÒ$¾ಸಾಗರ ಗ್ರಾಮದಲ್ಲಿ ಚೆಕ್‌ಡ್ಯಾಂ ನೀರಲ್ಲಿ ಬಸಪ್ಪ (65) ಎಂಬುವರು ಕೊಚ್ಚಿಹೋಗಿದ್ದಾರೆ. ಗ್ರಾಮದ ಹೊರವಲಯದ ಹಿರೇಹಳ್ಳಕ್ಕೆ ಅಡ್ಡಲಾಗಿ ಚೆಕ್‌ಡ್ಯಾಂ ಕಟ್ಟಲಾಗಿದೆ. ಶುಕ್ರವಾರ ಮಧ್ಯಾಹ್ನ 3.30ರ ವೇಳೆಗೆ ಬಸಪ್ಪ, ಹೊಲದಿಂದ ಮನೆಗೆ ವಾಪಸ್ಸಾಗುತ್ತಿದ್ದರು. ಚೆಕ್‌ಡ್ಯಾಂ ಮೇಲೆ ಬರುತ್ತಿರುವಾಗ ಏಕಾಏಕಿ ನೀರಿನ ಹರಿವು ಪ್ರಮಾಣ ಹೆಚ್ಚಾಗಿ, ನೀರಿನಲ್ಲಿ ಕೊಚ್ಚಿಹೋದರು. ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ.
ಕಾವೇರಿ ಕಣಿವೆಯಲ್ಲೂ ಮಳೆ:
ಮಂಡ್ಯ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಿಕ್ಕೇರಿ ಸಮೀಪದ ಮಾರ್ಗೋನಹಳ್ಳಿ ಗ್ರಾಮದಲ್ಲಿ ಮಣ್ಣಿನ ಗೋಡೆ ಬಿದ್ದು ತಿಮ್ಮೇಗೌಡ ಎಂಬುವರ ಹಸುವೊಂದು ಸಾವಿಗೀಡಾಗಿದೆ. ಕುದೂರು ಸುತ್ತಮುತ್ತ ಬಿರುಗಾಳಿ ಮಳೆಗೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಕಳೆದ ನಾಲ್ಕೈದು ದಿನಗಳಿಂದ ಮೈಸೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಒಂಟಿಕೊಪ್ಪಲಿನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಮರದ ಕೊಂಬೆ ಮುರಿದು ಬಿದ್ದು, ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಲವೆಡೆ ಬಿರುಗಾಳಿ ಮಳೆಗೆ ತೆಂಗು, ಅಡಿಕೆ, ಬಾಳೆ ಗಿಡಗಳು ನೆಲಕಚ್ಚಿದ್ದು, ಸಾಕಷ್ಟು ನಷ್ಟ ಉಂಟಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮಳೆಗೆ ದೊಡ್ಡಲಿಂಗಯ್ಯ ಎಂಬುವರ ಮನೆಯ ಮೇಲ್ಛಾವಣಿ ಕುಸಿದಿದ್ದು, ಕುಟುಂಬ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂರು ದಶಕಗಳಿಂದ ತುಂಬದಿದ್ದ ಚಾಮರಾಜನಗರದ ಐತಿಹಾಸಿಕ ದೊಡ್ಡ ಅರಸನ ಕೊಳ ಮಳೆಯಿಂದಾಗಿ ಅರ್ಧ ಭರ್ತಿಯಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಕೆಲವೆಡೆ ಬಿರುಗಾಳಿ ಮಳೆಗೆ ಮನೆಗಳು ಭಾಗಶ: ಹಾನಿಗೀಡಾಗಿವೆ. ಇದೇ ವೇಳೆ, ಕುಣಿಗಲ್, ತುರುವೆಕೆರೆ, ಬೀದರ್, ಔರಾದ್, ಹಟ್ಟಿ ಚಿನ್ನದ ಗಣಿ ಸೇರಿದಂತೆ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.
ಇನ್ನೆರಡು ದಿನ ಮಳೆ:
ಇನ್ನೆರಡು ದಿನ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ನೆಲಕ್ಕುರುಳಿದ 51 ಅಡಿ ಎತ್ತರದ ರೇಣುಕಾಚಾರ್ಯರ ಪ್ರತಿಮೆ
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಸುಕ್ಷೇತ್ರ ರೇವಗ್ಗಿ ಜಗದ್ಗುರು ರೇವಣಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಶನಿವಾರ ಸಂಜೆ ಬಿರುಗಾಳಿ, ಮಳೆಗೆ ಸಿಲುಕಿ ನೆಲಕ್ಕುರುಳಿದೆ. 2017ರ ಮಾ.10ರಂದು ಇದನ್ನು ಪ್ರತಿಷ್ಠಾಪಿಸಲಾಗಿತ್ತು. ಜೊತೆಗೆ, ದೇವಸ್ಥಾನದ ಕಾಂಪೌಡ್, ವಿದ್ಯುತ್ ಕಂಬಗಳು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.