High court: ನಾವೇ ದೂರು ದಾಖಲಿಸಿಕೊಳ್ಳಬೇಕಾದೀತು; ಕೋರ್ಟ್
Team Udayavani, Jan 31, 2024, 10:46 AM IST
ಬೆಂಗಳೂರು: “ರಾಜಧಾನಿ ಬೆಂಗಳೂರಿನ ಬಹುತೇಕ ಕಡೆ ಪಾದಚಾರಿ ಮಾರ್ಗಗಳು ಸಾರ್ವಜನಿಕರ ಸಂಚಾರಕ್ಕೆ ದುರ್ಲಭವಾಗಿವೆ. ಅವುಗಳನ್ನು ತೆರವು ಗೊಳಿಸುವ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಬೇಕಾದೀತು’ ಎಂದು ಹೈಕೋರ್ಟ್ ಬಿಬಿಎಂಪಿಗೆ ಎಚ್ಚರಿಕೆ ನೀಡಿದೆ.
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಗೊಳಿಸದ ಬಿಬಿಎಂಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿದಾಖಲಿಸಿಕೊಂಡು ತೆರವು ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ತ್ಯಾಗರಾಜನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಎಂಬುವರು ಸಲ್ಲಿಸಿದ್ದ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಹಾಗೂ ನ್ಯಾ. ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವ ಬಿಬಿಎಂಪಿ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಬಿಬಿಎಂಪಿ ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುತ್ತಿದೆ. ಸರಿಯಾದ ರಸ್ತೆ, ಪಾದಚಾರಿ ಮಾರ್ಗಗಳಿಗಾಗಿ ತೆರಿಗೆ ಪಾವತಿ ಸಲಾಗುತ್ತಿದೆ. ಆದರೆ, ಪಾಲಿಕೆ ಪಾದಚಾರಿ ಮಾರ್ಗಗಳ ಸುಧಾರಣೆಗೆ ಎಂದಿಗೂ ಮುಂದಾಗುತ್ತಿಲ್ಲ. ನಗರದ ಬಹುತೇಕ ಕಡೆ ಪಾದಚಾರಿ ಮಾರ್ಗ ಗಳು ಸಾರ್ವಜನಿಕರ ಸಂಚಾರಕ್ಕೆ ದುರ್ಲಭವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೆ, ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿ ಕೊಂಡಿರುವ ಕುರಿತಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಎಲ್ಲ ಪಾದ ಚಾರಿ ಮಾರ್ಗಗಳನ್ನು ತೆರವುಗೊಳಿಸುವ ಸಂಬಂಧ ಆದೇಶವನ್ನು ನೀಡಲಾಗುವುದು. ಈ ಪ್ರಕ್ರಿಯೆ ಯಾರ ವಿರುದ್ಧವೂ ಅಲ್ಲ. ಸಾರ್ವಜನಿಕರಿಗೆ ಸಹಕಾರಿಯಾಗುವುದಕ್ಕಾಗಿ ಮಾತ್ರ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿತು.
ಅಲ್ಲದೆ, ಕೆಲವು ಮಂದಿ ಪಾದಚಾರಿ ಮಾರ್ಗದಲ್ಲಿ ವಾಹನಗಳ ನಿಲುಗಡೆಯನ್ನಾಗಿ ಮಾಡಿಕೊಳ್ಳಲಾಗಿದೆ. ತಕ್ಷಣ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವು ಮಾಡಬೇಕು. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಯನ್ನು ಫೆಬ್ರುವರಿ 1ಕ್ಕೆ ಮುಂದೂಡಿತು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿಯೊಂದಿಗೆ ಇತರೆ ಯಾವ ಇಲಾಖೆಗಳು ಭಾಗಿಯಾಗಬಹುದು. ಅವರಿಗೆ ಯಾವ ರೀತಿಯಲ್ಲಿ ನಿರ್ದೇಶನ ನೀಡ ಬಹುದು ಎಂಬುದರ ಕುರಿತು ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ವಿವರಣೆ ನೀಡುವುದಕ್ಕಾಗಿ ಮುಂದಿನ ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತರು ಖುದ್ದು ಹಾಜರಿರಬೇಕು ಎಂದು ನ್ಯಾಯಪೀಠ ಹೇಳಿತು. ಆದರೆ, ಅಡ್ವೋಕೇಟ್ ಜನರಲ್ ಸರ್ಕಾರದ ಎಲ್ಲಾ ಇಲಾಖೆಗಳನ್ನು ಪ್ರತಿನಿಧಿಸುತ್ತಾರೆ, ಅವರೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಮಗೆ ಅಧಿಕಾರಿಗಳನ್ನು ಕೋರ್ಟ್‌ಗೆ ಕರೆಸುವ ಖಯಾಲಿ ಇಲ್ಲ ಎಂದು ಹೇಳಿ ಬಿಬಿಎಂಪಿ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವುದು ಎಂದು ಬೇಡ ಎಂದಿತು.
ಪ್ರಕರಣದ ಹಿನ್ನೆಲೆ ಏನು?: ಪಾದಚಾರಿ ಮಾರ್ಗ ದಲ್ಲಿದ್ದ ಬಿಡಾಡಿ ದನಗಳ ದಾಳಿಯಿಂದ ಅರ್ಜಿದಾರರ ತಾಯಿಗೆ ಪೆಟ್ಟಾಗಿದೆ. ಪಾದಚಾರಿ ಮಾರ್ಗವನ್ನು ಒತ್ತುವರಿದಾರರಿಂದ ತೆರವುಗೊಳಿಸಿದ ಬಳಿಕ ಅದಕ್ಕೆ ಕಬ್ಬಿಣದ ತಡೆಗೋಡೆ ಹಾಕಿ ಸಂರಕ್ಷಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು. ಅಲ್ಲದೆ, ಅರ್ಜಿ ದಾರರ ಮನೆ ಬಳಿಯ ಪಾದಚಾರಿ ಮಾರ್ಗಗಳ ಒತ್ತು ವರಿ ಸಂಬಂಧಿಸಿದ ಫೋಟೋಗಳೊಂದಿಗೆ ಪಾಲಿಕೆಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾ ಗಿಲ್ಲ. ಜತೆಗೆ, ವಾಹನ ನಿಲುಗಡೆಗೆ ಇರುವ ಸ್ಥಳದಲ್ಲಿ ವಾಣಿಜ್ಯ ವ್ಯವಹಾರಕ್ಕಾಗಿ ಅಧಿಕಾರಿಗಳು ಅನುಮತಿ ನೀಡಲಾಗಿದೆಂದು ಅರ್ಜಿಯಲ್ಲಿ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.