ಕೆಪಿಜೆಪಿ ಸಂಭಾವ್ಯ ಪ್ರಣಾಳಿಕೆ ಬಿಡುಗಡೆ
Team Udayavani, Dec 25, 2017, 6:00 AM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಚಿತ್ರನಟ ಉಪೇಂದ್ರ ಅವರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಸಂಪೂರ್ಣಪಾರದರ್ಶಕ ಆಡಳಿತ ಎಂಬ ಘೋಷವಾಕ್ಯದಡಿ ಸಂಭಾವ್ಯ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಪಾರದರ್ಶಕ ಆಡಳಿತಕ್ಕೆ ಸಂಬಂಧಿಸಿದಂತೆ 24 ಅಂಶಗಳಿರುವ ಸಂಭಾವ್ಯ ಪ್ರಣಾಳಿಕೆ ಬಿಡುಗಡೆ ಮಾಡಿರುವ ನಟ ಉಪೇಂದ್ರ, ಇದಕ್ಕೆ ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಕೇಳಿದ್ದಾರೆ. ಇವುಗಳನ್ನು ಆಧರಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಸಂಪೂರ್ಣ ಪಾರದರ್ಶಕ ಮಿತವ್ಯಯಿ ಹಾಗೂ ಪ್ರಜೆಗಳನ್ನು ಒಳಗೊಂಡ ಆಡಳಿತ ನೀಡುವ ಭರವಸೆಯೊಂದಿಗೆ ಪ್ರಣಾಳಿಕೆ ಸಿದ್ಧಪಡಿಸುವುದಾಗಿ ಹೇಳಿರುವ ಉಪೇಂದ್ರ, ಸರ್ಕಾರದ ಪ್ರತಿಯೊಂದು ತೀರ್ಮಾನವನ್ನೂ ನೇರ ಪ್ರಸಾರದ ಮೂಲಕ ಕೈಗೊಳ್ಳುವುದು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕ ನೀಡಿ ಅವರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಮತ್ತು ಬಡ್ತಿಗೆ ಅವಕಾಶ ಮಾಡಿಕೊಡುವುದು ಮುಂತಾದ ವಿಚಾರಗಳನ್ನು ಮುಂದಿಟ್ಟಿದ್ದಾರೆ.
ಸಂಭಾವ್ಯ ಪ್ರಣಾಳಿಕೆಯ ಪ್ರಮುಖಾಂಶಗಳು
ಸಂಪೂರ್ಣ ಪಾರದರ್ಶಕ, ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯಿ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ ನೀಡುವ ನಿಟ್ಟಿನಲ್ಲಿ ಪ್ರಜೆಗಳ ನೇರ ಸಂಪರ್ಕಕ್ಕಾಗಿ ಸರ್ಕಾರದ ಟಿವಿ ಚಾನಲ್, ಪ್ರತಿ ಇಲಾಖೆ ಮತ್ತು ಕ್ಷೇತ್ರದಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣಗಳು (ಫೇಸ್‌ಬುಕ್, ಟ್ವಿಟರ್, ವೆಬ್‌ಸೈಟ್, ಯುಟ್ಯೂಬ್ ಚಾನಲ್) ಮತ್ತು ಮೊಬೈಲ್ ಅಪ್ಲಿಕೇಶನ್‌ಗಳನ್ನು ಪ್ರಾರಂಭಿಸುವುದು. ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‌ನಲ್ಲಿ ತಮ್ಮ ಕ್ಷೇತ್ರ ಮತ್ತು ಪ್ರದೇಶದ ಸಮಸ್ಯೆಗಳನ್ನು ಲಿಖೀತವಾಗಿ, ಫೋಟೊ, ವಿಡಿಯೋ, ಆಡಿಯೋ ಮೂಲಕ ಸಂಬಂಧಪಟ್ಟ ಇಲಾಖೆಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಸಲ್ಲಿಸಲು ಅವಕಾಶ ಮಾಡಿಕೊಟ್ಟು ಅವುಗಳನ್ನು ಬಗೆಹರಿಸಲು ಕಾಲಮಿತಿ ನಿಗದಿಪಡಿಸುವುದು. ನಿಗದಿತ ಸಮಯದಲ್ಲಿ ಸಮಸ್ಯೆ ಬಗೆಹರಿಸದಿದ್ದಲ್ಲಿ ತಕ್ಷಣವೇ ಮೇಲ್ಮಟ್ಟದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ (ಶಾಸಕರು) ಅದನ್ನು ವರ್ಗಾಯಿಸಿ ಬಗೆಹರಿಸಲು ಕ್ರಮ ಕೈಗೊಳ್ಳುವುದು. ಈ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಕಚೇರಿವರೆಗೂ ವಿಸ್ತರಿಸುವುದು.
ಇನ್ನೊಂದೆಡೆ ಸಕಾಲಕ್ಕೆ ಸಮಸ್ಯೆಗಳನ್ನು ಉತ್ತಮವಾಗಿ ಪರಿಹರಿಸಿದ ಪ್ರತಿನಿಧಿಗಳು, ಅಧಿಕಾರಿಗಳನ್ನು ಪುರಸ್ಕರಿಸಿ ಅಂಕ ನೀಡುವುದು ಮತ್ತು ಈ ಅಂಕಗಳೇ ಚುನಾಯಿತ ಪ್ರತಿನಿಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಿರುತ್ತದೆ. ಕನಿಷ್ಟ ಅಂಕ ಪಡೆಯದಿದ್ದಲ್ಲಿ ಶಿಸ್ತು ಕ್ರಮದ ಜತೆಗೆ ವೇತನ ಕಡಿತಗೊಳಿಸುವುದು.
ಸರ್ಕಾರಿ ನೌಕರರಿಗೆ ಅವರ ಸಂಪೂರ್ಣ ಮಾಹಿತಿಯನ್ನೊಳಗೊಂಡ ಬ್ಯಾಡ್ಜ್, ಏಕರೂಪದ ಸಮವಸ್ತ್ರ, ಎಲ್ಲಾ ಸರ್ಕಾರಿ ಕಚೇರಿ ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ, ವೈಫೈ, ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಆಡಳಿತವನ್ನು ಜನರಿಗೆ ವೀಕ್ಷಿಸಲು ಅವಕಾಶ ಕಲ್ಪಿಸುವುದು, ವಿಧಾನಸೌಧದಲ್ಲಿ ನಡೆಯುವ ಪ್ರತಿ ಚಟುವಟಿಕೆಗಳನ್ನೂ ದೃಶ್ಯಮಾಧ್ಯಮ ಮತ್ತು ದೊಡ್ಡ ಪರದೆಗಳಲ್ಲಿ ಬಿತ್ತರಿಸಿ ಅದರ ಆಧಾರದ ಮೇಲೆ ಚರ್ಚೆಗೆ ಅವಕಾಶ ನೀಡಲಾಗುವುದು.
ಅಧಿವೇಶನ ಮತ್ತು ಸಭೆಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ದಾಖಲೆಗಳಂದಿಗೆ ಚರ್ಚೆ ನಡೆಸಬೇಕು ಮತ್ತು ಈ ಸಭೆಗಳನ್ನು ನೇರ ಪ್ರಸಾರದ ಮೂಲಕ ಜನ ವೀಕ್ಷಿಸಬೇಕು. ಟೆಂಡರ್ ವಿಚಾರಗಳು ಆನ್‌ಲೈನ್‌ನನ್ನೇ ನಡೆದು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಪರಸ್ಪರ ನೋಡಲು ಅವಕಾಶವಿರಬಾರದು. ಟೆಂಡರ್ ಪ್ರಕ್ರಿಯೆ ಕೂಡ ಆನ್‌ಲೈನ್‌ನಲ್ಲಿ ನೇರ ಪ್ರಸಾರವಾಗಬೇಕು. ಎಲ್ಲ ಜನ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ದೈನಂದಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಮುಂಗಡವಾಗಿ ಅವರವರ ಸಾಮಾಜಿಕ ಜಾಲತಾಣಗಳಲ್ಲಿ, ಅವರವರ ಕ್ಷೇತ್ರದ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
ಪ್ರಜೆಗಳು ಹಾಗೂ ಚುನಾಯಿತ ಸದಸ್ಯರ, ಸರ್ಕಾರೀ ಅಧಿಕಾರಿಗಳ ನಡುವಿನ ನೇರ ಸಂವಾದಗಳು ತಿಂಗಳಿಗೊಮ್ಮೆ ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರ ಮಾಡುವುದು. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಯಲ್ಲೂ ಪಾರದರ್ಶಕತೆ ಕಾಪಾಡಲು ಪ್ರಕ್ರಿಯೆಯನ್ನು ಜನರಿಗೆ ಲಭ್ಯವಾಗುವಂತೆ ಆನ್‌ಲೈನ್ ವ್ಯವಸ್ಥೆಗೆ ಒಳಪಡಿಸುವುದು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮಾಡುವ ವೆಚ್ಚಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದು. ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲಾದ ಪಿಂಚಣಿಗಳಿಂದ ಸಂಗ್ರಹವಾಗುವ ಹಣವನ್ನು ವೃದ್ಧಾಶ್ರಮ ಹಾಗೂ ವಸತಿ ರಹಿತರ ಅಭಿವೃದ್ಧಿಗೆ ಬಳಸುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸುವುದು. ಕರ್ನಾಟಕ ಶಾಸಕಾಂಗ ವೇತನಗಳು, ಪಿಂಚಣಿ ಮತ್ತು ಭತ್ಯೆ ಕಾಯ್ದೆ ಸರಳೀಕರಿಸುವುದು ಹಾಗೂ ಈ ಎಲ್ಲಾ ಅಂಶಗಳನ್ನು ಜಾರಿಗೊಳಿಸಲು ಕಾನೂನು ತಿದ್ದುಪಡಿ ಮಾಡುವ ಬಗ್ಗೆ ಸಂಭಾವ್ಯ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.
ನೀವೂ ಸಲಹೆ ನೀಡಿ
ಸಂಭಾವ್ಯ ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್- 9845396204, 9845396804 ಮತ್ತು ideaskpjpuppi@ gmail.comಗೆ ಕಳುಹಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.