ಮಹಿಳೆಯರಿಗೆ ಸಂಪುಟದಲ್ಲಿಯೂ ಪ್ರಾತಿನಿಧ್ಯ ಅಗತ್ಯ: ಡಾ.ಪುಷ್ಪಾ
Team Udayavani, Dec 8, 2018, 6:55 AM IST
ಬೆಂಗಳೂರು:ರಾಜಕೀಯದಲ್ಲಿ ಮಹಿಳೆಯರು ಹೆಚ್ಚು ಸಕ್ರೀಯರಾಗಿ ಕಾರ್ಯ ನಿರ್ವಹಿಸಲು ಸಂಪುಟದಲ್ಲಿಯೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದ್ದಾರೆ.
ರಾಜ್ಯ ಮಹಿಳಾ ಕಾರ್ಯಕಾರಿಣಿ ಉದ್ದೇಶಿಸಿ ಮಾತನಾಡಿದ ಅವರು, ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲೇಬೇಕು. ಕೇಂದ್ರದ ಬಿಜೆಪಿ ಸರ್ಕಾರ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಮಹಿಳಾ ಸಬಲೀಕರಣಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಎಲ್ಲ ಚುನಾವಣೆಗಳಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಸಂವಿಧಾನದ ಅಡಿಯಲ್ಲಿ ನಡೆಯುವ ಚುನಾವಣೆಯಲ್ಲಿ ಮಹಿಳೆಯರ ಮತಕ್ಕೆ ಹೆಚ್ಚಿನ ಮಾನ್ಯತೆ ಇದೆ ಎಂದು ತಿಳಿಸಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕಕ್ಕೆ ದೊಡ್ಡ ಸವಾಲಿದೆ.ನಮ್ಮ ನೋವಿಗೆ ಧ್ವನಿಯಾಗುವವರನ್ನು ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಮಹಿಳಾ ಘಟಕ ರಾಜ್ಯದ ಪ್ರತಿ ಮನೆಗೂ ತಲುಪಬೇಕು. ಮಹಿಳಾ ಮತದಾರರನ್ನು ಕಾಂಗ್ರೆಸ್‌ಗೆ ಸೆಳೆಯುವ ಕೆಲಸ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರನ್ನು ಸೆಳೆಯುವ ಪ್ರಯತ್ನ ಮಾಡಬೇಕು. ಮುಂದಿನ ಒಂದು ತಿಂಗಳು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಮೀಸಲಿಟ್ಟು ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಬೇಕು. ಯುವತಿಯರನ್ನು ಸೆಳೆಯಲು ಇಂದಿರಾ ಪ್ರಿಯದರ್ಶಿನಿ ಯೋಜನೆ ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ನೇರವಾಗಿ ರಾಹುಲ್ ಗಾಂಧಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ. ಎರಡೂ ಕಾರ್ಯಕ್ರಮಗಳನ್ನು ಸಮರ್ಥವಾಗಿ ನಿರ್ವಹಿಸಬೇಕು. ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಪಕ್ಷ ಗುರುತಿಸುತ್ತದೆ. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.