ಎಚ್‌ಡಿಕೆ ಅನಾರೋಗ್ಯ , ವಿಕ್ರಂ ಆಸ್ಪತ್ರೆಗೆ ದಾಖಲು
Team Udayavani, Mar 5, 2017, 3:45 AM IST
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅನಾರೋಗ್ಯ ನಿಮಿತ್ತ ನಗರದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕಳೆದ ವಾರ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ, ಮೊಳಕಾಲ್ಮೂರು, ಮಲೆಬೆನ್ನೂರು ಭಾಗದಲ್ಲಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಉರಿ ಬಿಸಿಲಿನಲ್ಲಿ ಓಡಾಟ ಹಾಗೂ ಸ್ವಾಗತಕ್ಕಾಗಿ ಕಾರ್ಯಕರ್ತರು ಸಿಡಿಸಿದ ಪಟಾಕಿ ಹೊಗೆಯಿಂದ ಕೆಮ್ಮು ಹಾಗೂ ಜ್ವರದಿಂದ ಅವರು ಬಳಲುತ್ತಿದ್ದಾರೆ.
ಶುಕ್ರವಾರ ಮೈಸೂರು ಪ್ರವಾಸ ಸಂದರ್ಭದಲ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಂಗಳೂರಿಗೆ ಆಗಮಿಸಿ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾದರು.ವಿಕ್ರಂ ಆಸ್ಪತ್ರೆ ವೈದ್ಯ ಡಾ. ಸತೀಶ್, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಮೊದಲ ದಿನ ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾಗಿತ್ತು. ಎಕ್ಸರೇ ಮತ್ತು ರಕ್ತ ಪರೀಕ್ಷೆ ನಡೆಸಲಾಗಿತ್ತು. ಶನಿವಾರ ನಡೆಸಿದ ತಪಾಸಣೆ ಸಂದರ್ಭದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಾನುವಾರ ಅಥವಾ ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಬಹುದು ಎಂದು ಹೇಳಿದ್ದಾರೆ.
ಆತಂಕ ಬೇಕಿಲ್ಲ
ಎಚ್.ಡಿ.ಕುಮಾರಸ್ವಾಮಿಯವರು ನಿರಂತರ ಪ್ರವಾಸದಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಪಕ್ಷದ ಕಾರ್ಯಕರ್ತರು ಆತಂಕಪಡಬೇಕಿಲ್ಲ. ವಿಶ್ರಾಂತಿ ಅಗತ್ಯ ಇರುವುದರಿಂದ ಕಾರ್ಯಕ್ರಮಗಳಿಗೆ ಬರುವಂತೆ ಒತ್ತಡ ಹಾಕಬಾರದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಮುಂದೂಡಿಕೆ
ಈ ಮಧ್ಯೆ ಮಾರ್ಚ್ 15 ರಂದು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶ ಮುಂದೂಡಲಾಗಿದೆ. ಅಂದು ರಾಜ್ಯ ಬಜೆಟ್ ಇರುವುದರ ಜತೆಗೆ ಕುಮಾರಸ್ವಾಮಿಯವರ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಸಮಾವೇಶ ಮುಂದೂಡಲಾಗಿದೆ. ಅಂದು ಜೆಡಿಎಸ್‌ನ ನೂತನ ಕಟ್ಟಡ ಉದ್ಘಾಟನೆ ನಡೆಯಲಿದ್ದು ಕುಮಾರಸ್ವಾಮಿ ಆರೋಗ್ಯ ಚೇತರಿಕೆಯಾದ ನಂತರ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Ranji match: ಉತ್ತರಪ್ರದೇಶ ಬೃಹತ್ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.