ಕೆಎಎಸ್ ಅಧಿಕಾರಿಗೆ ಚೂರಿ ಇರಿತ
Team Udayavani, Mar 21, 2017, 12:22 PM IST
ಬೆಂಗಳೂರು: ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಗಾರಿಕಾ ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಕೆಎಎಸ್ ಅಧಿಕಾರಿ ಕೆ.ಎಂ.ಜಗದೀಶ್ ಅವರ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಅಂಜನಾ ನಗರದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.
ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ವಾಸವಿರುವ ಜಗದೀಶ್ ಅವರು, ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಮನೆಯ ಸಮೀಪ ವಾಯುವಿಹಾರ ಮಾಡುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅಧಿಕಾರಿಯ ಹೊಟ್ಟೆ, ಕಿಬ್ಬೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ.
ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜಗದೀಶ್, ಹತ್ತಿರದಲ್ಲೇ ಇದ್ದ ಮನೆಯ ಬಳಿ ಓಡಿದರು. ಕೂಡಲೇ ಅಲ್ಲಿನ ಭದ್ರತಾ ಸಿಬ್ಬಂದಿ ಅಧಿಕಾರಿಯ ಸಹಾಯಕ್ಕೆ ಧಾವಿಸಿದಾಗ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಅಧಿಕಾರಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅಧಿಕಾರಿ ಜಗದೀಶ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಅಧಿಕಾರಿ ಜಗದೀಶ್ ಮೇಲೆ ದುಷ್ಕರ್ಮಿಗಳು ಯಾವ ಕಾರ ಣಕ್ಕೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಘಟನೆ ನಡೆದ ಅಕ್ಕ-ಪಕ್ಕದ ರಸ್ತೆಗಳಲ್ಲಿನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.