ವೇಣುಗೋಪಾಲ್ ಬದಲು?
Team Udayavani, Oct 23, 2018, 6:00 AM IST
ಬೆಂಗಳೂರು: ಲೈಂಗಿಕ ಹಗರಣ ಆರೋಪದ ಸುಳಿಯಲ್ಲಿ ಸಿಲುಕಿರುವ ಕೆ.ಸಿ.ವೇಣುಗೋಪಾಲ್ ಅವರನ್ನು “ರಾಜ್ಯ ಉಸ್ತುವಾರಿ’ಯಿಂದ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ವೇಣುಗೋಪಾಲ್ ಅವರ ಬದಕಲು ಗುಲಾಂ ನಬಿ ಆಜಾದ್ ಅಥವಾ ಚೆಲ್ಲಕುಮಾರ್ ಅವರನ್ನು ರಾಜ್ಯ ಉಸ್ತುವಾರಿಯಾಗಿ ನೇಮಿಸುವ ಸಂಬಂಧ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.
ಐದು ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ವೇಣುಗೋಪಾಲ್ ರಾಜ್ಯ ಉಸ್ತುವಾರಿಯಾಗಿ ಮುಂದುವರಿದರೆ ಪಕ್ಷಕ್ಕೆ ಮುಜುಗರ ಉಂಟಾಗಬಹುದು ಎಂಬ ಕಾರಣಕ್ಕೆ ಬದಲಾಯಿಸುವ ಚಿಂತನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಮೈತ್ರಿಯೊಂದಿಗೆ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಕಾರ್ಯತಂತ್ರ ರೂಪಿಸಿದ್ದು, ವೇಣುಗೋಪಾಲ್ ವಿರುದ್ಧದ ಲೈಂಗಿಕ ಹಗರಣ ಪ್ರಕರಣವನ್ನು ಬಿಜೆಪಿ ಅಸ್ತ್ರವನ್ನಾಗಿ ಬಳಸುವ ಆತಂಕ ಇರುವುದರಿಂದ ಬದಲಾವಣೆ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.
ಮತ್ತೂಂದು ಮೂಲದ ಪ್ರಕಾರ ಕೆ.ಸಿ.ವೇಣುಗೋಪಾಲ್ ಅವರೇ ಕರ್ನಾಟಕದ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿದ್ದರು. ಹೀಗಾಗಿ, ಬೇರೆಯವರ ನೇಮಕ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಪ್ರಸ್ತುತ ವೇಣುಗೋಪಾಲ್ ವಿದೇಶದಲ್ಲಿದ್ದಾರೆ.
ಗುಲಾಂ ನಬಿ ಆಜಾದ್ ಅವರು ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಉಸ್ತುವಾರಿಯಾಗಿಯೂ ಕೆಲಸ ಮಾಡಿದವರು. ಜತೆಗೆ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಎದುರಿಸುವ ತೀರ್ಮಾನ ಮಾಡಿರುವುದರಿಂದ ಸೀಟು ಹೊಂದಾಣಿಕೆ ಹಾಗೂ ರಡೂ ಪಕ್ಷಗಳ ನಡುವಿನ ಸಮನ್ವಯತೆ ದೃಷ್ಟಿಯಿಂದ ಗುಲಾಂ ನಬಿ ಆಜಾದ್ ಅವರಿಗೆ ಕರ್ನಾಟಕದ ಉಸ್ತುವಾರಿ ನೀಡುವುದು ಸೂಕ್ತ ಎಂದು ರಾಜ್ಯದ ನಾಯಕರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಕೆ.ಸಿ. ವೇಣುಗೋಪಾಲ್ ಅವರ ಮೇಲಿನ ರೇಪ್‌ಕೇಸ್ ಅರೋಪ ಆಡಳಿತ ಹಾಗೂ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಕೇರಳದಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾನೂನಿನ ಪ್ರಕಾರ ಹೋರಾಟ ನಡೆಸಲಾಗುವುದು.
– ಡಾ| ಜಿ.ಪರಮೇಶ್ವರ, ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು