ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!
Team Udayavani, Oct 8, 2021, 9:37 PM IST
ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ಹೆಚ್ಚು ಪೆರಿಷೆಬಲ್ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ.
ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆಟ್ರಿಕ್‌ಟನ್ ಅಷ್ಟು ಹೂವುಗಳನ್ನು ರಫ್ತು ಮಾಡಲಾಗಿದೆ.
ಇದನ್ನೂ ಓದಿ:ಸಾರಿಗೆ ನೌಕರರಿಗೆ ವೇತನ ಪಡೆಯುವ ಚಿಂತೆ
24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ.
ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.