ಕೇರಳ ಜೆಡಿಎಸ್‌ನಲ್ಲಿ ಭಿನ್ನಮತ: ಮ್ಯಾಥ್ಯೂ. ಟಿ. ಥಾಮಸ್ ಗೆ ಕೊಕ್
Team Udayavani, Nov 24, 2018, 6:35 AM IST
ಬೆಂಗಳೂರು/ತಿರುವನಂತಪುರ: ಕೇರಳದ ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರದಲ್ಲಿ ಅಂಗಪಕ್ಷವಾಗಿರುವ ಜಾತ್ಯತೀತ ಜನತಾದಳದಲ್ಲಿ (ಜೆಡಿಎಸ್) ಭಿನ್ನಮತ ಭುಗಿಲೆದ್ದಿದ್ದು, ಇದರ ಪರಿಣಾಮ, ಸಂಪುಟದಲ್ಲಿ ಜೆಡಿಎಸ್ ಪ್ರತಿನಿಧಿಸಿದ್ದ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ. ಟಿ. ಥಾಮಸ್ ಅವರನ್ನು ಬದಲಾಯಿಸಿ, ಅವರ ಸ್ಥಾನಕ್ಕೆ ಶಾಸಕ ಕೆ. ಕೃಷ್ಣಮೂರ್ತಿ ಅವರ ನೇಮಕಕ್ಕೆ ಶಿಫಾರಸು ಮಾಡಲು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ತೀರ್ಮಾನಿಸಿದ್ದಾರೆ.
ಕೇರಳದಲ್ಲಿ ಜೆಡಿಎಸ್ ಮೂವರು ಶಾಸಕರನ್ನು ಹೊಂದಿದೆ. ಹಲವಾರು ದಿನಗಳಿಂದ ಕೃಷ್ಣಮೂರ್ತಿ ಹಾಗೂ ಥಾಮಸ್ ಗುಂಪುಗಳ ನಡುವೆ ಭಿನ್ನಮತ ಭುಗಿಲೆದ್ದಿತ್ತು. ಸಂಪುಟದಲ್ಲಿ ಜೆಡಿಎಸ್‌ಗೆ ನೀಡಲಾಗಿರುವ ಒಂದೇ ಒಂದು ಸಚಿವ ಸ್ಥಾನಕ್ಕಾಗಿ ಕೃಷ್ಣಮೂರ್ತಿ ಮತ್ತು ಥಾಮಸ್ ನಡುವೆ ಪೈಪೋಟಿ ತೀವ್ರವಾಗಿತ್ತು. ಈ ಹಿನ್ನೆಲೆಯಲ್ಲಿ, ಶುಕ್ರವಾರ ಬೆಳಗ್ಗೆ ದೇವೇಗೌಡರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ ಕೇರಳದ ಜೆಡಿಎಸ್ ಶಾಸಕರಾದ ಕೃಷ್ಣಮೂರ್ತಿ, ಸಿ.ಕೆ. ನಾಯ್ಡು ಅವರು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಹಾಗೂ ಪಕ್ಷದ ಇತರ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಮಹತ್ವದ ಸಭೆಗೆ ಥಾಮಸ್ ಬಂದಿರಲಿಲ್ಲ.ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅಲಿ, “2016ರಲ್ಲಿ ಎಲ್‌ಡಿಎಫ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ, ಜೆಡಿಎಸ್‌ಗೆ ಇರುವ ಒಂದು ಸಂಪುಟ ಸ್ಥಾನದಲ್ಲಿ ಇಬ್ಬರು ನಾಯಕರನ್ನು ರೊಟೇಷನ್ ಪದ್ಧತಿಯಲ್ಲಿ ಕೂರಿಸುವ ಬಗ್ಗೆ ಮಾತುಕತೆಯಾಗಿತ್ತು. ಈಗ ಅದನ್ನು ಜಾರಿಗೊಳಿಸಲಾಗುತ್ತಿದೆ. ಪಕ್ಷದ ವರಿಷ್ಠರ ನಿರ್ಧಾರವನ್ನು ಥಾಮಸ್ ಅವರೂ ಒಪ್ಪಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.