ಕೋವಿಡ್ 19 ನಿಯಂತ್ರಣಕ್ಕೆ ಕೇರಳ ಮಾದರಿ
Team Udayavani, Apr 19, 2020, 10:48 AM IST
ಬೆಂಗಳೂರು: ದೇಶದಲ್ಲಿ ಮೊದಲ ಕೋವಿಡ್ 19 ಪತ್ತೆಯಾದ ಕೇರಳ ರಾಜ್ಯ ಈಗ ನಿಯಂತ್ರಣದಲ್ಲಿದೆ. ಆದರೆ, ಕರ್ನಾಟಕದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಆರಂಭದಲ್ಲಿ ದಾಖಲಾಗುತ್ತಿದ್ದ ಸಂಖ್ಯೆಗಿಂತ ನಾಲ್ಕೈದು ಪಟ್ಟು ಹೆಚ್ಚಾಗಿದೆ.
ಒಂದಂಕಿ ದಾಟುತ್ತಿಲ್ಲ: ಕೇರಳದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಅಲ್ಲಿನ ಸರ್ಕಾರ ಆರಂಭದಿಂದ ಪಾಲಿಸಿಕೊಂಡು ಬಂದ ಕಟ್ಟುನಿಟ್ಟಿನ ಕ್ರಮ ಹಾಗೂ ಜನರ ಸಹಕಾರ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಮೊದಲ ಸ್ಥಾನದಲ್ಲಿದ್ದ ಕೇರಳ ಈಗ ಹತ್ತನೇ ಸ್ಥಾನಕ್ಕೆ ಇಳಿದಿದ್ದು, ಪ್ರತಿದಿನ ದಾಖಲಾಗುವ ಸಂಖ್ಯೆ ಒಂದಂಕಿ ದಾಟುತ್ತಿಲ್ಲ. ರಾಜ್ಯದಲ್ಲಿ ಮೊದಲ 50 ಪ್ರಕರಣ ದಾಖಲಾಗಲು 17 ದಿನ ಸಮಯ ತೆಗೆದುಕೊಂಡಿತ್ತು. ಆದರೆ, ಈಗ ಎರಡನೇ ದಿನದಲ್ಲಿ ಸೋಂಕಿತರ ಸಂಖ್ಯೆ 50 ರ ಗಡಿ ದಾಟುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಗಳಿಗೆ ಹೋಲಿಸಿ ದರೆ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣ ಪ್ರಮಾಣ ಉತ್ತಮವಾಗಿದೆ.
ಬೇಗ ಎಚ್ಚೆತ್ತುಕೊಂಡಿರುವುದು: ಕೇರಳ ಸರ್ಕಾರ ಫೆಬ್ರವರಿಯಲ್ಲಿಯೇ ಹೊರ ದೇಶಗಳಿಂದ ಬಂದವರನ್ನು ತಪಾಸಣೆ ಮಾಡಿ ಹೋಮ್ ಕ್ವಾರಂಟೈನ್ ಮಾಡಿತು. ಅಲ್ಲದೆ, ಪ್ರತಿ ಜಿಲ್ಲೆಯಲ್ಲಿಯೂ ಎರಡು ಕೋವಿಡ್ ಆಸ್ಪತ್ರೆ, ಸಂಚಾರಿ ಕೋವಿಡ್ 19 ಚಿಕಿತ್ಸಾ ಘಟಕ, ತಜ್ಞ ವೈದ್ಯರ ನೇಮಕ ಮಾಡಿ ಕೊಂಡು ತಪಾಸಣೆ ಪ್ರಮಾಣವನ್ನು ಹೆಚ್ಚಿಸಲಾಯಿತು. ಅಲ್ಲದೇ ಕೋವಿಡ್ 19 ನಿಯಂತ್ರಣಕ್ಕೆ ಸುಮಾರು 20 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿತು. ನಿಯಮ ಪಾಲನೆ ನಿರ್ಲಕ್ಷ್ಯ: ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತಗೊಳ್ಳುವ ಮೊದಲು ವಿದೇಶದಿಂದ ಬಂದವ ರನ್ನು ಸಂಪೂರ್ಣ ಪತ್ತೆ ಹಚ್ಚಿ ಕಡ್ಡಾಯ ಹೋಂ ಕ್ವಾರಂಟೈನ್‌ಗೆ ಒಳಪಡಿಸದೆ ನಿರ್ಲಕ್ಷ್ಯ ವಹಿಸಿರುವುದು, ತಬ್ಲೀ ಜಮಾತೆ ಸಮಾವೇಶದಲ್ಲಿ ಪಾಲ್ಗೊಂಡವರನ್ನು ಪತ್ತೆ ಹಚ್ಚಲು ವಿಳಂಬ ಅನುಸರಿಸುತ್ತಿರುವುದು ರಾಜ್ಯದಲ್ಲಿ 2ನೇ ಹಂತದ ಪ್ರಕರಣ ಹೆಚ್ಚಾಗಲು ಕಾರಣವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಒಟ್ಟಾರೆ ರಾಜ್ಯದಲ್ಲಿ ತಪಾಸಣೆ ಪ್ರಮಾಣ ಹೆಚ್ಚಾದರೆ ಪ್ರತಿದಿನ ಸೋಂಕಿತರ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.