ಕುತೂಹಲ ಮೂಡಿಸಿದ ಪರಮೇಶ್ವರ್- ಖರ್ಗೆ ಭೇಟಿ
Team Udayavani, Mar 4, 2017, 3:50 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಡಾ.ಜಿ.ಪರಮೇಶ್ವರ್, ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದರು.
ಮುಂದಿನ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ತಮ್ಮನ್ನೇ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸಲು ಹೈ ಕಮಾಂಡ್ ಜೊತೆ ಮಾತನಾಡುವಂತೆ ಪರಮೇಶ್ವರ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಪರಮೇಶ್ವರ್ ಅವರ ಮನವಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಆದರೆ, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿ ಗಣತಿಯನ್ನು ಬಿಡುಗಡೆ ಮಾಡದಂತೆ ನೋಡಿಕೊಳ್ಳಿ ಮಲ್ಲಿಕಾರ್ಜು ಖರ್ಗೆಯವರು ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಖರ್ಗೆ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಪರಮೇಶ್ವರ್, ನಾನು ಅಧ್ಯಕ್ಷನಾಗಿ ಮುಂದುವರೆಯಬೇಕು ಎಂದು ಪಕ್ಷದಲ್ಲಿ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಕೆಲವರು ಅಧ್ಯಕ್ಷ ಸ್ಥಾನ ಬದಲಾಯಿಸುವಂತೆ ಹೇಳುತ್ತಿದ್ದಾರೆ. ಎಲ್ಲದಕ್ಕೂ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಹೈದರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಬಂದಿದ್ದೆ ಎಂದು ಹೇಳಿದರು.
ಪಕ್ಷ ತೊರೆದಿರುವ ಕುಮಾರ ಬಂಗಾರಪ್ಪ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಅವರು ಪಕ್ಷ ತೊರೆದಿರುವುದು ಮಾಧ್ಯಮಗಳಿಂದ ತಿಳಿದಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸೇರುವವರ ಸಂಖ್ಯೆಯೂ ದೊಡ್ಡದಿದೆ ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.