ಹಣಕ್ಕಾಗಿ ಬಾಲಕನ ಕಿಡ್ನಾಪ್
Team Udayavani, Jan 31, 2018, 11:19 AM IST
ಬೆಂಗಳೂರು: ಹಣಕ್ಕಾಗಿ ಐದು ವರ್ಷದ ಬಾಲಕನನ್ನು ಅಪಹರಿಸಿದ್ದ ಆರೋಪಿಗಳ ಬೆನ್ನಟ್ಟಿದ ಕೆ.ಪಿ. ಅಗ್ರಹಾರ ಪೊಲೀಸರು ಗುಂಡು ಹಾರಿಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ.28ರಂದು ಕೆ.ಪಿ.ಅಗ್ರಹಾರ ನಿವಾಸಿ ಮಿನಿಬಸ್ ಚಾಲಕ ರಾಜೇಶ್ ಮತ್ತು ಮಾಲಾ ದಂಪತಿ ಪುತ್ರ ಚಂದನ್‌ನನ್ನು ಅಪಹರಿಸಿದ್ದರು.
ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಸೋಮವಾರ ರಾತ್ರಿ ಕೆಂಗೇರಿಯ ಕೊಮ್ಮಘಟ್ಟ ಬಳಿ ಆರೋಪಿಗಳು ಇರುವ ಬಗ್ಗೆ ಮಾಹಿತಿ ದೊರೆತಿದ್ದರಿಂದ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ ಬಾಲಕನನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿತು.
ಆರೋಪಿ ಪರಿಚಿತ: ಮಂಜುನಾಥನಗರದ ಅಭಿಷೇಕ್, ಕಸ್ತೂರ ಬಾ ನಗರದ ದಿವ್ಯತೇಜ ಅಲಿಯಾಸ್ ಡಿಜೆ, ಹರ್ಷಿತ್ ಮತ್ತು ವಿಠಲ್ ನಗರದ ಶ್ರೀಕಾಂತ್ ಬಂಧಿತರು. ಈ ಪೈಕಿ ಪ್ರಮುಖ ಆರೋಪಿ ಅಭಿಷೇಕ್ ರಾಜೇಶ್‌ಗೆ ಪರಿಚಿತ ಎನ್ನಲಾಗಿದೆ. ಚಂದನ್‌ನನ್ನು ಅಪಹರಿಸಿದ್ದ ಆರೋಪಿಗಳು ಸೋಮವಾರ ತಡರಾತ್ರಿ 12.30ರ ಸುಮಾರಿಗೆ ಕೆಂಗೇರಿಯ
ಸರ್ ಎಂ.ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಕಾರಿನಲ್ಲಿ ಹೋಗುತ್ತಿರುವ ಬಗ್ಗೆ ಮಾಹಿತಿ ಬಂದು ಅಲ್ಲಿಗೆ ತೆರಳಿದ ಪೊಲೀಸರು ಅಡ್ಡಗಟ್ಟಿದಾಗ ಆರೋಪಿ ದಿವ್ಯತೇಜ್ ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಮಂಜುನಾಥ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದರು. ಗಾಯಗೊಂಡ ಆತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಷ್ಟ ತುಂಬಿಕೊಳ್ಳಲು ಅಪಹರಣ:
ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದು, ರಾಜೇಶ್ ಏಜೆನ್ಸಿಯ ಮಿನಿಬಸ್‌ನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಭಿಷೇಕ್, ಟ್ರಾವೆಲ್ಸ್ ಏಜೆನ್ಸಿಯಲ್ಲಿ ನಷ್ಟ ಅನುಭವಿಸಿದ್ದ. ಹೀಗಾಗಿ, ಮಿನಿಬಸ್ ಚಾಲಕನಾಗಿದ್ದ ರಾಜೇಶ್‌ಗೆ ಆಂಧ್ರಪ್ರದೇಶದಲ್ಲಿ 20 ಎಕರೆ ಜಮೀನು ಇದೆ ಎಂಬ ಮಾಹಿತಿ ಗೊತ್ತಿದ್ದರಿಂದ ಅಪಹರಣಕ್ಕೆ ಮುಂದಾದ ಎಂದು ಪೊಲೀಸರು ತಿಳಿಸಿದ್ದಾರೆ.
ಜ.28ರಂದು ಚಂದನ್ ತಾಯಿ ಮಾಲಾ ಹುಟ್ಟಹಬ್ಬ ಇದ್ದ ಕಾರಣ ದೇವಸ್ಥಾನಕ್ಕೆ ಹೋಗಿದ್ದರು. ಪುತ್ರ ಚಂದನ್ ಮನೆ ಬಳಿ ಆಟವಾಡುತ್ತಿದ್ದ. ಇದೇ ವೇಳೆ ಅಲ್ಲಿಗೆ ಬಂದ ಅಭಿಷೇಕ್ ಅಂಗಡಿಗೆ ಕರೆದೊಯ್ದು ತಿಂಡಿ ಕೊಡಿಸುವುದಾಗಿ ಹೇಳಿದ್ದಾನೆ. ಪರಿಚಯ ಇದ್ದ ಕಾರಣ ಬಾಲಕ ಒಪ್ಪಿದ್ದಾನೆ. ಆಗ ಚಂದನ್‌ನನ್ನು ಬೈಕ್‌ನಲ್ಲಿ ಕರೆದೊಯ್ದು ಅಭಿಷೇಕ್ ಮತ್ತೂಬ್ಬ ಆರೋಪಿ ದಿವ್ಯತೇಜ್‌ಗೆ ಜತೆ ಕಳುಹಿಸಿದ. ಮಗು ಮನೆಗೆ ಬಾರದ ಕಾರಣ ಗಾಬರಿಗೊಂಡ ರಾಜೇಶ್ ಎಲ್ಲೆಡೆ ಹುಡುಕಾಡಿ ಬಳಿಕ ಠಾಣೆಗೆ ದೂರು ನೀಡಿದ್ದಾರೆ.
ಇದೇ ವೇಳೆ ದೂರವಾಣಿ ಕರೆ ಮಾಡಿದ ದುಷ್ಕರ್ಮಿಯೊಬ್ಬ ವಿಷಯ ತಿಳಿಸಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ತಂಡ, ಸ್ಥಳೀಯ ಸಿಸಿಟಿವಿ ಹಾಗೂ ಮೊಬೈಲ್ ಕರೆಗಳ ಮಾಹಿತಿಯನ್ನಾಧರಿಸಿ ಮೊದಲಿಗೆ ಅಭಿಷೇಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ಪೊಲೀಸ್ ಮೇಲೆ ಹಲ್ಲೆ-ಗುಂಡೇಟು: ರಾತ್ರಿ 12.30ರ ಸುಮಾರಿಗೆ ಆರೋಪಿಗಳ ಕಾರು ಅಡ್ಡಗಟ್ಟಿದ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಮಂಜುನಾಥ್ ಮೇಲೆ ಕಾರು ಚಾಲನೆ ಮಾಡುತ್ತಿದ್ದ ದಿವ್ಯತೇಜ್ ಡ್ಯಾಗರ್‌ನಲ್ಲಿ ಹಲ್ಲೆಗೆ ಮುಂದಾಗಿದ್ದಾನೆ. ಆಗ ಕೂಡಲೇ ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಒಂದು ಸುತ್ತ ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ಹಲ್ಲೆಗೆ ಮುಂದಾಗಿದ್ದು, ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಗಳನ್ನು ಬಂಧಿಸಿ ಮಗು ಚಂದನ್‌ನನ್ನು ರಕ್ಷಿಸಿದ್ದಾರೆ.
ದಂಪತಿ ಜತೆ ಹುಡುಕಾಡಿದ ಆರೋಪಿ: ನಾಲ್ಕು ವಾರಗಳಿಂದ ಕೃತ್ಯಕ್ಕೆ ಸಂಚು ರೂಪಿಸಿದ್ದ ಅಭಿಷೇಕ್ ಇತರೆ ಆರೋಪಿಗಳಿಗೆ ಹೊಸ ಸಿಮ್, ಮೊಬೈಲ್ ಕೊಡಿಸಿದ್ದ. ಹಾಗೆಯೇ ಸುತ್ತಾಡಲು ಸ್ಯಾಂಟ್ರೋ ಕಾರು ಕೂಡ ಕೊಟ್ಟಿದ್ದ. ಬಾಲಕನನ್ನು ದುಷ್ಕರ್ಮಿಗಳ ಜತೆ ಕಳುಹಿಸಿ ವಾಪಸ್ ಮನೆಗೆ ಬಂದಿದ್ದ ಅಭಿಷೇಕ್, ರಾಜೇಶ್ ಜತೆ ಚಂದನ್‌ಗಾಗಿ ಹುಡುಕಾಡಿದ್ದಾನೆ. ದಂಪತಿಗಳಿಗೆ ಧೈರ್ಯ ತುಂಬಿದ್ದಾನೆ.
ಈ ಮಧ್ಯೆ ದಿವ್ಯತೇಜ ಅಲಿಯಾಸ್ ಡಿಜೆ, ಹರ್ಷಿತ್ ಮತ್ತು ವಿಠಲ್‌ನಗರದ ಶ್ರೀಕಾಂತ್ ಮಗುವಿನೊಂದಿಗೆ ತಮಿಳುನಾಡಿನ ಕೃಷ್ಣಗಿರಿಗೆ ಹೋಗಿ, ಬಳಿಕ ಸೋಮವಾರ ಬೆಳಗ್ಗೆ ಮೈಸೂರಿಗೆ ಬಂದಿದ್ದರು. ಈ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಭಿಷೇಕ್ ಮೂಲಕವೇ ಆರೋಪಿಗಳಿಗೆ ಕರೆ ಮಾಡಿಸಿ ರಾಜೇಶ್ ಹಣ ಹೊಂದಿಸಿಕೊಂಡಿದ್ದು ಬೆಂಗಳೂರಿಗೆ ಬರುವಂತೆ ಹೇಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.