ಕೊಟ್ಟ ಸಾಲ ಮರಳಿಸದಿದ್ದಕ್ಕೆ ಅಪಹರಣ: 4 ಮಂದಿ ಸೆರೆ
Team Udayavani, Jul 16, 2023, 10:24 AM IST
ಬೆಂಗಳೂರು: ಸಾಲ ನೀಡಿದ ಲಕ್ಷಾಂತರ ರೂ. ವಾಪಸ್ ನೀಡದೇ ಕಳೆದೊಂದು ವರ್ಷದಿಂದ ಸತಾಯಿಸುತ್ತಿದ್ದ ಸ್ನೇಹಿತರನ್ನು ಅಪಹರಿಸಿದ್ದ 4 ಮಂದಿಯನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದು, ಅಪಹರಣಕ್ಕೊಳಗಾದ ಇಬ್ಬರನ್ನು ರಕ್ಷಿಸಲಾಗಿದೆ.
ಸ್ಥಳೀಯ ನಿವಾಸಿಗಳಾದ ನಂದನ್ ಹಾಗೂ ಕಾರ್ತಿಕ್ ರಕ್ಷಣೆಗೊಳಗಾದವರು. 4 ಮಂದಿ ಆಂಧ್ರಪ್ರದೇಶ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಹಾಗೂ ಅಪಹರಣಕ್ಕೊಳಗಾದ ವ್ಯಕ್ತಿಗಳು ಪರಸ್ಪರ ಸ್ನೇಹಿತರಾಗಿದ್ದು, ಹಣಕಾಸಿನ ವ್ಯವಹಾರ ಹೊಂದಿದ್ದಾರೆ. ಕಳೆದ ವರ್ಷ ನಂದನ್ ಮತ್ತು ಕಾರ್ತಿಕ್ ಆರೋಪಿಗಳಿಂದ 30 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ, ನಿಗದಿತ ಸಮಯಕ್ಕೆ ವಾಪಸ್ ಕೊಟ್ಟಿರಲಿಲ್ಲ. ಹಲವು ಬಾರಿ ಕೇಳಿದರೂ ಸರಿಯಾಗಿ ಸ್ಪಂದಿಸಿರಲಿಲ್ಲ.
ಹೀಗಾಗಿ ಆಕ್ರೋಶಗೊಂಡ ಆರೋಪಿಗಳು, ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ನಂದನ್ ಮತ್ತು ಕಾರ್ತಿಕ್ನನ್ನು ಅಪಹರಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿತ್ತು. ಮಾಹಿತಿ ಅರಿತ ಎಚ್ ಎಸ್ಆರ್ ಲೇಔಟ್ ಪೊಲೀಸರು ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ 12 ಗಂಟೆಯಲ್ಲಿ 4 ಮಂದಿ ಆರೋಪಿಗಳನ್ನು ಬಂಧಿಸಿ, ಇಬ್ಬರನ್ನು ರಕ್ಷಣೆ ಮಾಡಿದ್ದಾರೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.