ಪೋಷಕರ ಮಡಿಲು ಸೇರಿದ ಅಪಹೃತ ಮಗು
Team Udayavani, May 1, 2019, 3:03 AM IST
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದ್ದ ಅಂಧ ದಂಪತಿಯ ಪುತ್ರನ ಅಪಹರಣ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಎಂಟು ತಿಂಗಳ ಹಸುಗೂಸು ಪೋಷಕರ ಮಡಿಲು ಸೇರಿದೆ.
ರಾಯಚೂರು ಮೂಲದ ಬಸವರಾಜು ಹಾಗೂ ಬಿ.ಕೆ.ಚಿನ್ನು ದಂಪತಿಯ ಸಾಗರ್ ಎಂಬ ಎಂಟು ತಿಂಗಳ ಮಗು ಪೋಷಕರ ಮಡಿಲು ಸೇರಿದೆ. ಚಿತ್ರದುರ್ಗ ಮೂಲದ ಪಾರ್ವತಮ್ಮ ಅವರ ಸಹೋದರಿ, ಕೆಂಗೇರಿ ನಿವಾಸಿ ಲಕ್ಷೀದೇವಿ ಎಂಬುವವರು ಮಂಗಳವಾರ ಮಧ್ಯಾಹ್ನ ಮಗುವನ್ನು ಸುರಕ್ಷಿತವಾಗಿ ಉಪ್ಪಾರ್‌ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಲಕ್ಷ್ಮೀದೇವಿ ಸಹೋದರಿ ಪಾರ್ವತಮ್ಮ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಏ.27ರಂದು ಕಾರ್ಯ ನಿಮಿತ್ತ ಬೆಂಗಳೂರಿಗೆ ಬಂದಿದ್ದು, ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು. ಆ ವೇಳೆ ಅವರ ಬಳಿ ಬಂದ ಅಪರಿಚಿತ ಮಹಿಳೆಯೊಬ್ಬರು ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಮಗುವನ್ನು ಕೊಟ್ಟು ಹೋಗಿದ್ದಾರೆ.
ಬಹಳ ಹೊತ್ತಾದರೂ ವಾಪಸ್ ಬಂದಿಲ್ಲ. ಕೊನೆಗೆ ಶೌಚಾಲಯದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಆತಂಕಗೊಂಡ ಪಾರ್ವತಮ್ಮ ಹಸುಗೂಸನ್ನು ಏನು ಮಾಡಬೇಕೆಂದು ತೋಚದೆ ನೇರವಾಗಿ ಕೆಂಗೇರಿಯಲ್ಲಿರುವ ಸಹೋದರಿ ಲಕ್ಷ್ಮೀದೇವಿ ಮನೆಗೆ ಕರೆದೊಯ್ದಿದ್ದರು ಎಂದು ಪೊಲೀಸರು ಹೇಳಿದರು.
ದಿನಪತ್ರಿಕೆಯಿಂದ ಮಾಹಿತಿ: ಈ ಮಧ್ಯೆ ಪಾರ್ವತಮ್ಮ ವಾಪಸ್ ಚಿತ್ರದುರ್ಗಕ್ಕೆ ಹೋಗಿದ್ದಾರೆ. ಆದರೆ, ಮಗುವನ್ನು ಲಕ್ಷ್ಮೀದೇವಿ ಅವರೇ ಎರಡು ದಿನಗಳ ಕಾಲ ಪಾಲನೆ ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ದಿನಪತ್ರಿಕೆಗಳಲ್ಲಿ ಮಗುವಿನ ಕಳ್ಳತನ ಸುದ್ದಿ ಕಂಡ ಲಕ್ಷ್ಮೀದೇವಿ ಕೂಡಲೇ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಸದ್ಯ ಮಗುವನ್ನು ಪೋಷಕರಿಗೆ ಒಪ್ಪಿಸಲಾಗುವುದು ಎಂದು ಪಶ್ಚಿಮ ವಲಯ ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಹೇಳಿದರು.
ಮಹಿಳೆ ಯಾರು?: ಮಗುವನ್ನು ಪಾರ್ವತಮ್ಮ ಕೈಗೆ ನೀಡಿದ ಆ ಅಪರಿಚಿತ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಗುವಿನ ಪೋಷಕರು ದೃಷ್ಟಿಹೀನರಾಗಿರುವ ಹಿನ್ನೆಲೆಯಲ್ಲಿ ಮಗುವನ್ನು ಸಾಕುವ ಉದ್ದೇಶದಿಂದ ಯಾರೋ ಅಪಹರಣ ಮಾಡಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಗುವಿನ ಪೋಷಕರು ಸ್ವಂತಃ ಊರಿಗೆ ಹೋಗಿದ್ದು, ಅವರ ಬಂದ ನಂತರ ಕಾನೂನು ಪ್ರಕ್ರಿಯೆ ಮುಗಿಸಿ ಮಗುವನ್ನು ಹಸ್ತಾಂತರಿಸಲಾಗುವುದು. ಅದುವರೆಗೂ ಮಗು ಉಪ್ಪಾರಪೇಟೆ ಪೊಲೀಸರ ವಶದಲ್ಲೇ ಇರಲಿದೆ ಎಂದು ಪೊಲೀಸರು ತಿಳಿಸಿದರು. ಮಗು ಅಪಹರಣ ಪ್ರಕರಣವನ್ನು ಪಶ್ಚಿಮ ವಿಭಾಗದ ಪೊಲೀಸರು ಸವಾಲಾಗಿ ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ.
ಸಮಾಧಾನ ಮಾಡುವ ನೆಪದಲ್ಲಿ ಮಗು ಕಳವು: ಬಸವರಾಜು ಹಾಗೂ ಬಿ.ಕೆ.ಚಿನ್ನು ದಂಪತಿ ಏ.26ರಂದು ಊರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ರಾಯಚೂರಿನಿಂದ ಬಂದು ಏ.27ರಂದು ಮೆಜೆಸ್ಟಿಕ್‌ನಲ್ಲಿ ಇಳಿದುಕೊಂಡಿದ್ದರು. ಬೆಳಗ್ಗೆ 7.30ರಲ್ಲಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಪ್ಲಾಟ್‌ಫಾರಂ ನಂ 19(ಡಿ)ನಲ್ಲಿ ದಂಪತಿ ಪುತ್ರನ ಜತೆ ಕುಳಿತಿದ್ದರು.
ಮಗ ಜೋರಾಗಿ ಅಳುತ್ತಿದ್ದರಿಂದ ತಾಯಿ ಮಗುವಿಗೆ ನೀರು ಕುಡಿಸಲು ಮುಂದಾಗಿದ್ದಾರೆ. ಇದೇ ವೇಳೆ ನಿಲ್ದಾಣದಲ್ಲಿದ್ದ ಅಪರಿಚಿತ ಮಹಿಳೆಯೊಬ್ಬರು, ನೀರು ಕುಡಿಸಿ ಸಮಾಧಾನ ನೆಪದಲ್ಲಿ ಮಗುವನ್ನು ದಂಪತಿಯಿಂದ ಪಡೆದುಕೊಂಡು ತಮ್ಮೊಡನೆ ಕೆರೆದೊಯ್ದಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.