ಪೊಲೀಸರ ಸೋಗಿನಲ್ಲಿ ಕಿಡ್ನಾಪ್‌: ಮೂವರ ಸೆರೆ


Team Udayavani, Nov 17, 2021, 11:45 AM IST

kidnap – in the name of police

ಬೆಂಗಳೂರು: ಸಿಸಿಬಿ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಅಪಹರಿಸಿದ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಇಂದಿರಾನಗರ ಪೊಲೀಸರು ಬಂಧಿಸಿ ದ್ದಾರೆ. ಉಪೇಂದ್ರಕುಮಾರ್‌, ಸಮೀರ್‌, ನೀಲಮ್ಮ ಎಂಬವರನ್ನು ಬಂಧಿಸಲಾ ಗಿದೆ. ಆರೋಪಿಗಳ ವಿರುದ್ಧ ನಾಗ ರಾಜು ಎಂಬುವರು ದೂರು ನೀಡಿದ್ದರು ಎಂದು ಪೊಲೀರು ತಿಳಿಸಿದರು.

ವಿದೇಶದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ನಾಗರಾಜ್‌ ಕೊರೊನಾ ಸಂದರ್ಭದಲ್ಲಿ ಭಾರತಕ್ಕೆ ವಾಪಸ್‌ ಆಗಿದ್ದರು. ಕೌಟುಂಬಿಕ ಕಾರಣಕ್ಕಾಗಿ 15 ಲಕ್ಷ ರೂ. ಅನ್ನು ಬ್ಯಾಂಕ್‌ನಲ್ಲಿ ಸಾಲಕ್ಕಾಗಿ ಓಡಾಡುತ್ತಿದ್ದರು. ಈ ವೇಳೆ ಆರೋಪಿ ಉಪೇಂದ್ರನ ಪರಿಚಯವಾಗಿದ್ದು, ಸಾಲ ಕೊಡಿಸುವುದಾಗಿ ಹೇಳಿದ್ದ.

ಇದನ್ನೂ ಓದಿ:- ಮುನ್ನೆಚ್ಚರಿಕೆ ವಹಿಸಿ ರೋಗ ಮುಕ್ತಗೊಳಿಸೋಣ: ಡಾ| ಶಂಕರ್‌ ಕೆ. ಟಿ.

ದಾಖಲಾತಿಗಳನ್ನು ಪಡೆದುಕೊಂಡಿದ್ದ ಆರೋಪಿ, ಖಾಸಗಿ ಬ್ಯಾಂಕ್‌ ವ್ಯವಸ್ಥಾಪಕರನ್ನು ಸಂಪರ್ಕಿಸಿದಾಗ 1.20 ಕೋಟಿ ರೂ.ವರೆಗೂ ಸಾಲ ಪಡೆಯಲು ಅರ್ಹರು ಎಂದಿದ್ದರು.

ಒಂದು ಕೋಟಿ ರೂ.ಗಾಗಿ ಅಪಹರಣದ ಪ್ಲಾನ್‌: ಉಪೇಂದ್ರ ಸಾಲದ ಅರ್ಜಿ ನೀಡಿ ಪರಿಚಿತೆಯಾಗಿದ್ದ ನೀಲಮ್ಮನನ್ನ ಸಂಪರ್ಕಿಸಿ ಪುಸಲಾಯಿಸಿ 5 ಲಕ್ಷ ರೂ. ಪಡೆದು ನಾಗರಾಜ್‌ ತೆಗೆದುಕೊಂಡಿದ್ದ ಸಾಲವನ್ನು ತೀರಿಸಿದ್ದ. ಈ ವಿಷಯವನ್ನು ನಾಗರಾಜ್‌ಗೂ ತಿಳಿಸಿದ್ದ. 1 ಕೋಟಿ ರೂ. ಸಾಲಕ್ಕೆ ಬೇಕಾದ ಎಲ್ಲಾ ದಾಖಲಾತಿ ಸಲ್ಲಿಸಿದ್ದ.

ಕೆಲ ದಿನಗಳ ಬಳಿಕ ಬೆಂಗಳೂರಿಗೆ ವಾಪಸ್‌ ಬಂದ ನಾಗರಾಜ್‌, ಸಾಲ ಮಂಜೂರಾತಿಗಾಗಿ ಅರ್ಜಿಗೆ ಸಹಿ ಹಾಕುವಾಗ 1 ಕೋಟಿ ರೂ.ಸಾಲಕ್ಕೆ ಅರ್ಜಿ ಹಾಕಿರುವ ವಿಚಾರ ಗೊತ್ತಾಗಿದ್ದು, ಉಪೇಂದ್ರನನ್ನು ವಿಚಾರಿಸಿದಾಗ ಸಾಲ ಪಡೆಯಲು ಸೂಚಿಸಿದ್ದ. ಅದೇ ವಿಚಾರಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ನಂತರ ತೀರಿಸಿರುವ 5 ಲಕ್ಷ ಜತೆಗೆ ಇನ್ನೂ 2 ಲಕ್ಷ ಕೊಡುವಂತೆ ತಾಕೀತು ಮಾಡಿದ್ದಾನೆ. ಅದಕ್ಕೆ ನಾಗರಾಜ್‌ ಒಪ್ಪದಿದ್ದಾಗ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಹೇಳಿದರು. ನಂತರ ನಾಗರಾಜ್‌ನನ್ನು ಅಪಹರಿಸಲು ಸಂಚು ರೂಪಿ ಸಿದ್ದ ಉಪೇಂದ್ರ, ತನ್ನ ಸಹಚರ ಸಮೀರ್‌ ಸುಪಾರಿ ನೀಡಿದ್ದ.

ಆ.9ರಂದು ಇಂದಿರಾನಗರ ಕೆಎಫ್‌ಸಿ ಸಿಗ್ನಲ್‌ ಬಳಿ ಸಿಸಿಬಿ ಇನ್ಸ್‌ಪೆಕ್ಟರ್‌ ಸೋಗಿನಲ್ಲಿ ಸಮೀರ್‌, ನಾಗರಾಜ್‌ನನ್ನು ಪರಿಚಯಿಸಿಕೊಂಡು ಕಾರು ಹತ್ತಿಸಿಕೊಂಡಿದ್ದಾನೆ. ಮಾರ್ಗ ಮಧ್ಯೆ ಆರೋಪಿ ಉಪೇಂದ್ರ ಹತ್ತಿದಾಗ ವಿಚಾರ ಗೊತ್ತಾಗಿದೆ. ನಂತರ 20 ದಿನಗಳ ಕಾಲ ಬಂಧನದಲ್ಲಿರಿಸಿಕೊಂಡು ನಿರಂತರವಾಗಿ ನಾಗರಾಜ್‌ ಮೇಲೆ ಹಲ್ಲೆ ಮಾಡಿದ್ದಾರೆ. ಬ್ಯಾಂಕಿನಿಂದ 4.5 ಲಕ್ಷ ರೂ. ಪಡೆದುಕೊಂಡು ಖಾಲಿ ಚೆಕ್‌ ಹಾಗೂ ಬಾಂಡ್‌ ಪೇಪರ್‌ಗಳಿಗೆ ಸಹಿ ಹಾಕಿಸಿಕೊಂಡಿದ್ದರು ಎಂದು ನಾಗರಾಜ್‌ ದೂರು ನೀಡಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.