Kidnapping: ಕಂಪ್ಯೂಟರ್‌ ಡೀಲರ್‌ ಕಿಡ್ನಾಪ್‌: ಮೂವರ ಬಂಧನ

Team Udayavani, Sep 11, 2023, 1:48 PM IST

Kidnapping: ಕಂಪ್ಯೂಟರ್‌ ಡೀಲರ್‌ ಕಿಡ್ನಾಪ್‌: ಮೂವರ ಬಂಧನ

ಬೆಂಗಳೂರು:  ಹಣಕಾಸಿನ ವಿಚಾರಕ್ಕೆ ಲ್ಯಾಪ್‌ಟಾಪ್‌-ಕಂಪ್ಯೂಟರ್‌ ಡೀಲರೊ ಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇರಿಸಿದ್ದ ರೌಡಿಶೀಟರ್‌ ಸೇರಿ ಮೂವರನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಲ್ಲಸಂದ್ರದ ಹನುಮಗಿರಿನಗರದ ಕಿರಣ್‌ ಕುಮಾರ್‌(35), ಸಾರ್ವಭೌಮ ನಗರದ ಸೋಮಶೇಖರ್‌(36), ತ್ಯಾಗರಾ ಜನಗರದ ರೌಡಿ ಅರುಣ್‌ ಕುಮಾರ್‌ ಅಲಿಯಾಸ್‌ ಸುನಾಮಿ(32) ಬಂಧಿತರು.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ದೊಣ್ಣೆ, ಮೊಬೈಲ್‌ ಜಪ್ತಿ ಮಾಡಲಾಗಿದೆ. ಮತ್ತೂಬ್ಬ ಆರೋಪಿ ಅನಿಲ್‌ ಕುಮಾರ್‌ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಆರೋಪಿಗಳು ಇಟ್ಟುಮಡು ನಿವಾಸಿ ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಡೀಲರ್‌ ಸಂದೀಪ್‌ ಕುಮಾರ್‌(32) ಎಂಬಾತ ನನ್ನು ಆ.30ರಂದು ಅಪಹರಿಸಿ ತಮಿಳು ನಾಡಿಗೆ ಕರೆದೊಯ್ದು 50 ಲಕ್ಷ ರೂ.ಗೆ ಬೇಡಿಕೆ ಇರಿಸಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಸಂದೀಪ್‌ ಪೊಲೀಸರಿಗೆ ದೂರು ನೀಡಿದ್ದರು.

ಆ.30ರಂದು ಮುಂಜಾನೆ ಸ್ನೇಹಿತ ಅನಿಲ್‌ ಕುಮಾರ್‌, ಸಂದೀಪ್‌ಗೆ ಕರೆ ಮಾಡಿ ಮನೆಗೆ ಹೊರಗೆ ಬರುವಂತೆ ಕರೆದಿದ್ದ. ಸಂದೀಪ್‌ ಮನೆಯಿಂದ ಹೊರಗೆ ಬರುತ್ತಿದ್ದಂತೆ ಬಂಧಿತ ಮೂವರು ಆರೋಪಿಗಳು ಟೀ ಕುಡಿ ಯೋಣ ಬಾ ಎಂದು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸಂದೀಪ್‌ನ ಮೊಬೈಲ್‌ ಕಸಿದುಕೊಂಡು ಸಿಮ್‌ ತೆಗೆದು ಹೊರಕ್ಕೆ ಎಸೆದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಸಂದೀಪ್‌ ಹಣ ಇಲ್ಲ ಎಂದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೈಗಳಿಂದ ಹಲ್ಲೆ ಮಾಡಿದ್ದಾರೆ.

ಬಳಿಕ ಆರೋಪಿಗಳು ತಮಿಳುನಾಡಿನ ಡೆಂಕಣಿಕೋಟೆ ಕಡೆಗೆ ಕರೆದೊಯ್ದು ಫಾರ್ಮ್ ಹೌಸ್‌ನಲ್ಲಿ ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಷ್ಟೊಂದು ಹಣ ಇಲ್ಲ ಎಂದಾಗ ದೊಣ್ಣೆಯಿಂದ ಸಂದೀಪ್‌ಗೆ ಹಲ್ಲೆ ಮಾಡಿದ್ದಾರೆ. ಹಣ ಕೊಡದಿದ್ದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿ ದ್ದಾರೆ. ಸಂಜೆ 4.30ಕ್ಕೆ ಫಾರ್ಮ್ ಹೌಸ್‌ನಿಂದ ಬೇರೆ ಕಡೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆರೋಪಿ ಅರುಣ್‌ ಮತ್ತು ಕಿರಣ್‌ ಊಟಕ್ಕೆ ಹೋಗಿದ್ದರು.

ಕಾರಿನ ಮುಂದಿನ ಆಸನದಲ್ಲಿದ್ದ ಸೋಮಶೇಖರ್‌ ಮತ್ತು ಅನಿಲ್‌ ನಿದ್ದೆಗೆ ಜಾರಿದ್ದಾರೆ. ಈ ಸಮಯ ಬಳಸಿಕೊಂಡು ಸಂದೀಪ್‌ ಕಾರಿನಿಂದ ಕೆಳಗೆ ಇಳಿದು ತಪ್ಪಿಸಿಕೊಂಡು ತಮಿಳುನಾಡಿನ ಅಚ್ಚಿತಾ ಪೊಲೀಸ್‌ ಠಾಣೆಗೆ ತೆರಳಿ ಘಟನೆ ಬಗ್ಗೆ ವಿವರಿಸಿದ್ದಾರೆ. ಬಳಿಕ ತಾಯಿಗೆ ಫೋನ್‌ ಮಾಡಿ ವಿಷಯ ತಿಳಿಸಿ ಬೆಂಗಳೂರಿಗೆ ಬಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹಣಕಾಸು ವ್ಯವಹಾರ ಸಂಬಂಧ ಕೃತ್ಯ:

ದೂರುದಾರ ಸಂದೀಪ್‌ ಕುಮಾರ್‌, ಕಿರಣ್‌, ಅನಿಲ್‌ಕುಮಾರ್‌ ಪರಸ್ಪರ ಪರಿಚಿತರು. ಬಂಧಿತ ಮೂವರ ಪೈಕಿ ಅರುಣ್‌ ರೌಡಿಶೀಟರ್‌ ಆಗಿದ್ದು, ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಸಂದೀಪ್‌, ಇತರೆ ಇಬ್ಬರು ಆರೋಪಿಗಳ ನಡುವೆ ಹಣಕಾಸು ವ್ಯವಹಾರ ಇತ್ತು. ಈ ವಿಚಾರವಾಗಿ ಆರೋಪಿಗಳು ಸಂದೀಪ್‌ನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.