ಸೂಕ್ಷ್ಮಪ್ರದೇಶ ಘೋಷಣೆಗೆ ಕಿಸಾನ್ ಕಾಂಗ್ರೆಸ್ಸಿಗರ ಆಕ್ಷೇಪ
Team Udayavani, Mar 8, 2017, 12:35 PM IST
ಬೆಂಗಳೂರು: ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಿರುವುದನ್ನು ವಿರೋಧಿಸಿ ಕೆಪಿಸಿಸಿ ಕಿಸಾನ್ ಘಟಕದ ಸದಸ್ಯರು ಬೆಂಗಳೂರಿನ ದಂಡು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲು ತಡೆ ಚಳವಳಿ ನಡೆಸಿದರು. ಕೆಪಿಸಿಸಿ ಕಚೇರಿಯಿಂದ ದಂಡು ರೈಲ್ವೆ ನಿಲ್ದಾಣದವರೆಗೂ ಮೆರವಣಿಗೆಯಲ್ಲಿ ತೆರಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ನಿಲ್ದಾಣದ ಹೊರಗೇ ತಡೆದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ, ಕೇಂದ್ರ ಸರ್ಕಾರ ಹೊರಡಿಸಲಿರುವ ಆದೇಶ ಪಶ್ಚಿಮ ಘಟ್ಟದ ಹನ್ನೊಂದು ಜಿಲ್ಲೆಯ 1567 ಹಳ್ಳಿಗಳ ರೈತರು, ಕೃಷಿ ಕಾರ್ಮಿಕರು ಮತ್ತು ಆದಿವಾಸಿಗಳಿಗೆ ಮಾರಕವಾಗಲಿದೆ. ಪರಿಸರ ವಿರೋಧಿಯಾಗಿರುವ ಈ ವರದಿ ಜಾರಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪಶ್ವಿಮ ಘಟ್ಟ ಪ್ರದೇಶಗಳಲ್ಲಿ ವಾಸಿಸುವ ರೈತರು ಮತ್ತು ಆದಿವಾಸಿಗಳು ಪರಿಸರ ರಕ್ಷಣೆ ಮಾಡಿಕೊಂಡೆ ಜೀವನ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ನಾಶ ಮಾಡುವ ಕೈಗಾರಿಕೋದ್ಯಮಿಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಟ್ಟು, ರೈತರು ಹಾಗೂ ಆದಿವಾಸಿಗಳಿಗೆ ಮಾರಕವಾಧಿಗಿರುವ ವರದಿ ಜಾರಿಗೆ ಮುಂದಾಗಿಧಿದ್ದಾರೆ. ಈ ಸಂಬಂಧ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ನೀಡಿರುವ ಶಿಫಾರಸುಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.