ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿತ
Team Udayavani, Oct 21, 2018, 12:14 PM IST
ಬೆಂಗಳೂರು: ಸಾವಾಗಿರುವ ಮನೆಮುಂದೆ ಜಗಳ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಮೂವರು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮುನಿರೆಡ್ಡಿ ಪಾಳ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾದ ಸಂಜಯ್ (47) ಎಬುವವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಪ್ರಮುಖ ಆರೋಪಿ ಆಕಾಶ್ ಸೇರಿ ಮತ್ತಿತರ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಗಾಯಾಳು ಸಂಜಯ್ ಅವರ ಸಂಬಂಧಿ ವೃದ್ಧೆಯೊಬ್ಬರು ಮೃತಪಟ್ಟಿದ್ದು ರಾತ್ರಿ ಅವರ ಮನೆಯ ಬಳಿ ಸಂಬಂಧಿಕರೆಲ್ಲರೂ ಇದ್ದರು. ಈ ವೇಳೆ ಆಕಾಶ್ ಸೇರಿ ಇನ್ನಿತರ ಹುಡುಗರು ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ಜಗಳವಾಡುತ್ತಿದ್ದರು. ಹೀಗಾಗಿ ಸಂಜಯ್, ಸಾವಿನ ಮನೆ ಮುಂದೆ ಗಲಾಟೆ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಾರೆ.
ಇಷ್ಟಕ್ಕೆ ಆಕ್ರೋಶಗೊಂಡ ಆಕಾಶ್ ಸೇರಿ ಮೂವರು ದುಷ್ಕರ್ಮಿಗಳು, ಸಂಜಯ್ ಅವರ ಹೊಟ್ಟೆಭಾಗಕ್ಕೆ ಇರಿದಿದ್ದಾರೆ. ಅವರ ರಕ್ಷಣೆಗೆ ಬಂದ ನವೀನ್ ಎಂಬುವವರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಸಂಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.