ಕೆ.ಪಿ.ನಂಜುಂಡಿ ಬಿಜೆಪಿ ಸೇರ್ಪಡೆ
Team Udayavani, Jun 27, 2017, 3:45 AM IST
ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ವಿಶ್ವಕರ್ಮ ಸಮುದಾಯದ ಮುಖಂಡ ಕೆ.ಪಿ.ನಂಜುಂಡಿ ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಬಿಜೆಪಿ ಸೇರಲು ತಾವು ಯಾವುದೇ ಬೇಡಿಕೆ ಮುಂದಿಟ್ಟಿಲ್ಲ. ಪಕ್ಷದಲ್ಲಿ ಅಟೆಂಡರ್ ಕೆಲಸ ಕೊಟ್ಟರೂ ಅದ್ನನು ಮಾಡುತ್ತೇನೆ ಎಂದು ಕೆ.ಪಿ.ನಂಜುಂಡಿ ಹೇಳಿದರೆ, ನಂಜುಂಡಿ ಅವರಿಗೆ ಶೀಘ್ರವೇ ರಾಜ್ಯ ಮಟ್ಟದ ಜವಾಬ್ದಾರಿಯನ್ನು ಪಕ್ಷದಲ್ಲಿ ಕೊಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿಯಲ್ಲಿ ನಡೆದ ಕರಳ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ ಮತ್ತಿತರರು ಪಕ್ಷದ ಧ್ವಜ ನೀಡುವ ಮೂಲಕ ನಂಜುಂಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್‌ನಲ್ಲಿ 16 ವರ್ಷ ಕಾಲ ಇದ್ದು ಅಲ್ಲಿಯ ಮುಖಂಡರ ನಡವಳಿಕೆ ಬೇಸತ್ತು ಬಿಜೆಪಿ ಸೇರಿದ್ದಾರೆ. ಕಲೆದ ವಾರ ಅವರನ್ನು ಭೇಟಿ ಮಾಡಲು ಹೋದಾಗ 12 ಸ್ವಾಮೀಜಿಗಳ ಸಮ್ಮುಖದಲ್ಲಿ ಯಾವುದೇ ಷರತ್ತಿಲ್ಲದೆ ಬಿಜೆಪಿಗೆ ಸೇರುವುದಾಗಿ ಭರವಸೆ ಕೊಟ್ಟಿದ್ದರು.ಆದರೆ, ಆದಷ್ಟು ಬೇಗ ಅವರಿಗೆ ಪಕ್ಷದಲ್ಲಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರಲ್ಲದೆ, ರಾಜ್ಯದ ಉದ್ದಗಲಕ್ಕೆ ಕೆಲಸ ಮಾಡಿ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡಿ ಎಂದು ನಂಜುಂಡಿ ಅವರಿಗೆ ಸಲಹೆ ಮಾಡಿದರು.
ಇದೇ ಸಂದರ್ಭದಲ್ಲಿ ನಂಜುಂಡಿ ಅವರೊಂದಿಗೆ ವಿಶ್ವಕರ್ಮ ಸಮುದಾಯದ ಹಲವು ಮುಖಂಡರು ಕೂಡ ಬಿಜೆಪಿ ಸೇರಿದರು. ಬಿಜೆಪಿ ಮುಖಂಡರಾದ ರಾಮಚಂದ್ರಗೌಡ, ಶೋಭಾ ಕರಂದ್ಲಾಜೆ, ಎನ್.ರವಿಕುಮಾರ್ ಉಪಸ್ಥಿತರಿದ್ದರು.
ಬಿಜೆಪಿ ಸೇರಲು ಯಾವುದೇ ಷರತ್ತು ವಿಧಿಸಿಲ್ಲ- ಕೆ.ಪಿ.ನಂಜುಂಡಿ
ಬೆಂಗಳೂರು: “ಕಳೆದ 16 ವರ್ಷ ಕಾಂಗ್ರೆಸ್‌ನಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದೆ. ಸಮುದಾಯದ ಕಾರ್ಯಕ್ರಮಗಳು ಸೇರಿದಂತೆ ಎಲ್ಲವನ್ನೂ ಕಾಂಗ್ರೆಸ್‌ನವರನ್ನೇ ಇಟ್ಟುಕೊಂಡು ಕಾಯಕ್ರಮಗಳನ್ನು ಮಾಡಿದೆ. ಆದರೆ, ನನಗೆ ಜ್ಞಾನೋದಯವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಠ ಕಲಿಸಿಕೊಟ್ಟಿದ್ದಾರೆ. ಆ ಪಾಠದಿಂದಾಗಿಯೇ ಇಂದು ಬಿಜೆಪಿ ಸೇರಿದ್ದೇನೆ’.
ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಸುದ್ದಿಗೋಷ್ಠಿಯಲ್ಲಿ ವಿಶ್ವಕರ್ಮ ಸಮುದಾಯದ ಮುಖಂಡ ಕೆ.ಪಿ.ನಂಜುಂಡಿ ಪ್ರತಿಕ್ರಿಯಿಸಿದ್ದು ಹೀಗೆ.
ನಾನು ಕಾಂಗ್ರೆಸ್ ಸೇರುವ ಸಂದರ್ಭದಲ್ಲಿ ಅನೇಕ ಸ್ವಾಮೀಜಿಗಳು, ಮುಖಂಡರು ಬೇಡ ಎಂದು ಹೇಳಿದ್ದರು. ಆದರೆ, ಎಲ್ಲರ ಸಲಹೆಯನ್ನು ಮೀರಿ ಕಾಂಗ್ರೆಸ್ ಸೇರಿದೆ. ಇಡೀ ಸಮುದಾಯವನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ಹೇಳಿ ಅದನ್ನು ಸಾಧಿಸಿ ತೋರಿಸಿದೆ. ಕಾಂಗ್ರೆಸ್‌ಗೆ ಸೇರಿ 16 ವರ್ಷದ ಬಳಿಕ ನಾನು ಕಾಂಗ್ರೆಸ್‌ಗೆ ಹೋಗಿದ್ದು ತಪ್ಪು ಎಂಬ ಅರಿವಾಯಿತು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ನಾನು ನಿಂದಿಸುವುದಿಲ್ಲ. ನನಗೆ ಏನು ತಪ್ಪು ಮಾಡಿದೆ ಎಂಬ ಅನುಭವ ಹೇಳಿಕೊಟ್ಟ ಪಕ್ಷ ಅದು. ಎಲ್ಲಾ ಪಕ್ಷಗಳು ಒಳ್ಳೆಯದ್ದೇ ಇರುತ್ತವೆ. ಆದರೆ, ಅದನ್ನು ನಡೆಸಿಕೊಂಡು ಹೋಗುವ ನಾಯಕರು ಸರಿಯಿದ್ದಾಗ ಮಾತ್ರ ಪಕ್ಷ ಸರಿಯಿರುತ್ತದೆ ಎಂದು ಕಾಂಗ್ರೆಸ್ ನಾಯಕತ್ವ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದಿನ ವಿಧಾನಸಭೆ ಚುನಾವಣೆಗಳಲ್ಲಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯದವರು ಯಾವತ್ತೂ ಸಂಘಟಿತರಾಗಲು ಜೆಡಿಎಸ್‌ನವರು ಅವಕಾಶ ಮಾಡಿಕೊಟ್ಟಿರಲಿಲ್ಲ. ಆದರೆ, ನಾನು ಖುದ್ದಾಗಿ ಅಲ್ಲಿ ನಿಂತು ಸಮುದಾಯದ ಎಲ್ಲರನ್ನೂ ಕಾಂಗ್ರೆಸ್ ಪರ ಸಂಘಟಿಸಿದೆ. ಇದರಿಂದ ಸಿದ್ದರಾಮಯ್ಯ ಗೆಲ್ಲುವಂತಾಯಿತು. ಆದರೆ. ಒಂದು ದಿನವೂ ವಿಶ್ವಕರ್ಮ ಸಮುದಾಯದಿಂದ ನಾನು ಗೆದ್ದೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳಲಿಲ್ಲ. ಹಾಗೆಂದು ಅವರನ್ನು ನಾನು ದೂರುವುದಿಲ್ಲ. ನಂಬಿಕೆ ವಿಚಾರದಲ್ಲಿ ಸರಿಯಾದ ಪಾಠ ಕಲಿಸಿದ್ದಾರೆ. ಆ ನಂಬಿಕೆಯ ಪಾಠದಿಂದಾಗಿಯೇ ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿ ಸೇರಿದ್ದೇನೆ ಎಂದರು.
ಬಿಜೆಪಿಯ ತತ್ವ, ಸಿದ್ಧಾಂತ ಒಪ್ಪಿಕೊಂಡಿದ್ದೇನೆ. ಈ ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸವನ್ನು ಅರ್ಥ ಮಾಡಿಕೊಂಡಿದ್ದೇನೆ. ಮೋದಿ ಅವರ ಸಾರಥ್ಯದಲ್ಲಿರುವ ಬಿಜೆಪಿ ಸೇರುತ್ತಿರುವುದೇ ನನಗೆ ಖುಷಿ ತಂದಿದೆ. ಹೀಗಾಗಿ ಪಕ್ಷದಲ್ಲಿ ಏನೇ ಕೆಲಸ ಕೊಡಲಿ, ಅದನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಅಟೆಂಡರ್ ಕೆಲಸ ಕೊಟ್ಟರೂ ಮಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.