ಕೆಪಿಎಸ್‌ಸಿ ಅನರ್ಹರು ಔಟ್;ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮುದ್ರೆ
Team Udayavani, Apr 12, 2018, 6:00 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ 1998, 1999 ಮತ್ತು 2004ನೇ ಸಾಲಿನಲ್ಲಿ ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ “ಅಕ್ರಮ ಫಲಾನುಭವಿ’ ಅಧಿಕಾರಿಗಳನ್ನು ಪತ್ತೆ ಹಚ್ಚಿ ಅರ್ಹರಿಗೆ ಅವಕಾಶ ನೀಡುವಂತೆ ಹೈಕೋರ್ಟ್ 2016ರಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಇದರಿಂದಾಗಿ ಈ ಮೂರು ವರ್ಷಗಳಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಅಕ್ರಮವಾಗಿ ನೇಮಕಗೊಂಡ ಹಲವರು ಹುದ್ದೆ ಕಳೆದುಕೊಳ್ಳಬೇಕಿದ್ದು, ಕೆಲವರ ಸ್ಥಾನಪಲ್ಲಟವಾಗಲಿದೆ. ಅಲ್ಲದೇ, ಈ ಅವಧಿಯಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ನೇಮಕಗೊಂಡು ನಂತರ ಐಎಎಸ್‌ಗೆ ಮತ್ತು ಹಿರಿಯ ಶ್ರೇಣಿಗೆ ಬಡ್ತಿ ಪಡೆದ ಕೆಲವು ಅಭ್ಯರ್ಥಿಗಳು ಹಿಂಬಡ್ತಿ ಪಡೆಯಲಿದ್ದಾರೆ.
ಹೈಕೋರ್ಟ್ ತೀರ್ಪನ್ನು ರಾಜ್ಯ ಸರ್ಕಾರ ಮತ್ತು ಕೆಪಿಎಸ್‌ಸಿ ಯಾವ ರೀತಿ ಜಾರಿಗೊಳಿಸುತ್ತದೆ ಎಂಬುದರ ಮೇಲೆ ಹುದ್ದೆ ಕಳೆದುಕೊಳ್ಳುವವರು ಮತ್ತು ಸ್ಥಾನಪಲ್ಲಟಗೊಳ್ಳುವ ಅಧಿಕಾರಿಗಳ ಸಂಖ್ಯೆ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ ಸುಮಾರು 50 ಮಂದಿ ಹುದ್ದೆ ಕಳೆದುಕೊಳ್ಳುವ ಅತಂಕಕ್ಕೆ ಸಿಲುಕಿದ್ದಾರೆ.
ಈ ಕುರಿತಂತೆ 2016ರ ಜೂನ್ ತಿಂಗಳಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಐಎಎಸ್ ಅಧಿಕಾರಿ ಗೋಪಾಲಕೃಷ್ಣ ಮತ್ತಿತರರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ( ಎಸ್‌ಎಲ್‌ಪಿ) ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ಹಾಗೂ ನ್ಯಾಯಮೂರ್ತಿ ರೋಹrನ್ ಫಾಲಿ ನಾರಿಮನ್ ಅವರಿದ್ದ ಪೀಠ, ಹೈಕೋರ್ಟ್ ಆದೇಶವನ್ನು ಯತಾಸ್ಥಿತಿ ಪಾಲಿಸಬೇಕು ಎಂದು ನಿರ್ದೇಶಿಸಿದೆ. ಹೈಕೋರ್ಟ್ ಆದೇಶ ಮಾರ್ಪಾಡು ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.