ಕೆ.ಆರ್.ಪುರ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ
ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳ ಜತೆ ಮೇಯರ್ ಗಂಗಾಂಬಿಕೆ ಸಭೆ
Team Udayavani, Aug 7, 2019, 12:15 PM IST
ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ಜತೆ ಸಭೆ ನಡೆಯಿತು.
ಬೆಂಗಳೂರು: ಕೆ.ಆರ್‌ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 110 ಹಳ್ಳಿಗಳಲ್ಲಿ ಜಲಮಂ ಡಳಿಯು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಪ್ರಾರಂಭಿಸಿ ರುವುದರಿಂದ ಹಲವು ರಸ್ತೆಗಳು ಹಾಳಾ ಗಿದ್ದು, ವಾಹನ ಸವಾರರು ತೊಂದರೆ ಅನು ಭವಿಸುತ್ತಿದ್ದಾರೆ. ಹೀಗಾಗಿ, ತಾತ್ಕಾಲಿಕ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ನಡೆಸ ಬೇಕು ಎಂದು ಅಧಿಕಾರಿಗಳಿಗೆ ಮೇಯರ್ ಗಂಗಾಂಬಿಕೆ ತಾಕೀತು ಮಾಡಿದರು.
ಮಂಗಳವಾರ ಈ ಸಂಬಂಧ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ನಗರದ 110 ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಜಲಮಂಡಳಿ ಮುಖ್ಯ ರಸ್ತೆ ಹಾಗೂ ವಾರ್ಡ್ ರಸ್ತೆಗಳಲ್ಲಿ ನಡೆಸುತ್ತಿರುವ ಕಾಮಗಾರಿಯಿಂದ ವಾಹನ ಸವಾರರು ಕಳೆದ ಒಂದು ವರ್ಷದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ತ್ವರಿತವಾಗಿ ಕಾಮಗಾರಿ ಮುಗಿಸಿ, ರಸ್ತೆ ಸರಿಪಡಿಸಲು ನಿಮಗೆ ಆಗುವುದಿಲ್ಲವೇ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪಾಲಿಕೆ ಮುಖ್ಯ ರಸ್ತೆಗಳಿಗೆ 34 ಕೋಟಿ ರೂ. ಹಾಗೂ ವಾರ್ಡ್‌ರಸ್ತೆಗಳ ಕಾಮಗಾರಿಗೆ 8 ಕೋಟಿ ರೂ. ಮೀಸಲಿಟ್ಟಿದೆ. ಇದರ ಜೊತೆಗೆ ಜಲಮಂಡಳಿ ಅಗೆದಿರುವ ರಸ್ತೆಗಳ ದುರಸ್ತಿಗೆ ಮೀಸಲಿರಿಸಿದ್ದ 68 ಕೋಟಿ ರೂ.ಗಳಲ್ಲಿ 34 ಕೋಟಿ ರೂ. ಕೊಟ್ಟಿದ್ದು, ಕೂಡಲೆ ದುರಸ್ತಿ ಕಾರ್ಯವನ್ನು ಮಾಡಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.
ನೀರಿನ ಸದ್ಬಳಕೆ ಅನಿವಾರ್ಯ: ತುಷಾರ್ ಗಿರಿನಾಥ್
ಕಳೆದ ಬಾರಿಗಿಂತ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ನೀರಿನ ನಿರ್ವಹಣೆ ಹಾಗೂ ಸದ್ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ತಿಳಿಸಿದರು.
ಮಂಗಳವಾರ ಮಲ್ಲೇಶ್ವರದ ಸುವರ್ಣ ಭವನದಲ್ಲಿ ನಡೆದ ಜೀವಾಮೃತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಿನ ಒಳ ಹರಿವು ತುಂಬಾ ಕಡಿಮೆ ಇದೆ. ಹೀಗಾಗಿ, ಮಳೆ ನೀರನ್ನು ವ್ಯರ್ಥ ಮಾಡದೇ ಎಲ್ಲರೂ ಕಡ್ಡಾಯವಾಗಿ ಮಳೆನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಜತೆಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಅಳವಡಿಸುವ ಮೂಲಕ ನೀರಿನ ಮರುಬಳಕೆ ಮಾಡುವ ವಿಧಾನಗಳನ್ನು ಅನುಸರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಖಾಸಗಿ ಸಂಸ್ಥೆಗಳು ಹಾಗೂ ವಸತಿ ಸಮುಚ್ಛಯದ ಪ್ರತಿನಿಧಿಗಳು ಭಾಗವಹಿಸಿ ಮೂಲಕ ನೀರಿನ ಸದ್ಬಳಕೆ ಮಾಡುವ ವಿಧಾನಗಳನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೈಕ್‌ಗಳ ಮಧ್ಯೆ ಡಿಕ್ಕಿ: ಸವಾರ 3 ಪಲ್ಟಿ ಹೊಡೆದರೂ ಪಾರು
Metro Rail: ಮೆಟ್ರೋ ಹಳಿಗೆ ಜಿಗಿದ ಏರ್‌ಫೋರ್ಸ್ ನಿವೃತ ಅಧಿಕಾರಿ
Bengaluru: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ!
Arrested: ಪತ್ನಿ, ಅತ್ತೆ ಮೇಲೆ ಹಲ್ಲೆ; ಆರೋಪಿ ಬಂಧನ
Bengaluru: ಟೆಕಿಯ 1 ತಿಂಗಳು ಡಿಜಿಟಲ್ ಅರೆಸ್ಟ್ ಮಾಡಿ 11.8 ಕೋಟಿ ರೂ. ವಂಚಿಸಿದ ಮೂವರ ಸೆರೆ