ಕೃಷ್ಣ ಮನವೊಲಿಸಲು ನಡೆದಿದೆ ಕಸರತ್ತು
Team Udayavani, Jan 30, 2017, 3:45 AM IST
ಬೆಂಗಳೂರು: ಕಾಂಗ್ರೆಸ್‌ಗೆ ವಿದಾಯ ಹೇಳಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಬೇಕೆಂಬ ಕಸರತ್ತು ಅವರ ಆಪ್ತ ವಲಯದಿಂದ ಆರಂಭವಾಗಿದೆ.
ಕೃಷ್ಣ ಅವರ ಶಿಷ್ಯ ಬಳಗದಲ್ಲಿ ಗುರುತಿಸಿಕೊಂಡಿರುವ ಗೃಹ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ನಾಯಕರು ಕೃಷ್ಣ ಅವರಿಗೆ ಪಕ್ಷದಲ್ಲಿ ಯಾವುದಾದರೂ ಹುದ್ದೆ ನೀಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದು ಹೈ ಕಮಾಂಡ್‌ಗೆ ಮನವಿ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಹೊಂದಾಣಿಕೆ ಮೂಡಿಸಲು ರಚಿಸಲಾಗಿರುವ ಸಮನ್ವಯ ಸಮಿತಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ದಿಗ್ವಿಜಯ್ ಸಿಂಗ್ ಅವರ ಬದಲಿಗೆ ಎಸ್.ಎಂ. ಕೃಷ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಬೇಕೆಂಬ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಇದೆಲ್ಲಕ್ಕೂ ಹೈ ಕಮಾಂಡ್ ಒಪ್ಪುವ ಸಾಧ್ಯತೆ ಕಡಿಮೆ ಎಂಬ ಮಾತು ಕಾಂಗ್ರೆಸ್‌ನ ಇನ್ನೊಂದು ಬಣದಿಂದ ಕೇಳಿ ಬರುತ್ತಿದೆ. ಎಸ್.ಎಂ.ಕೃಷ್ಣ ಅವರಿಗೆ ಕಾಂಗ್ರೆಸ್ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲ, ರಾಜ್ಯಸಭೆ ಸದಸ್ಯತ್ವ ಸೇರಿದಂತೆ ಎಲ್ಲ ಅಧಿಕಾರಗಳನ್ನೂ ಕೊಟ್ಟಿದೆ. ಹೀಗಿರುವಾಗ ಅವರು ಅನಗತ್ಯವಾಗಿ ಪಕ್ಷದ ಮೇಲೆ ಗೂಬೆ ಕೂರಿಸಿ ಹೊರ ಹೋಗಿದ್ದು, ಹೈ ಕಮಾಂಡ್ ಅವರ ಮನವೊಲಿಸುವ ಪ್ರಯತ್ನ ಮಾಡುವ ಸಾಧ್ಯತೆ ಕಡಿಮೆ ಎಂಬ ವಾದವೂ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.