ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು, ನಿರ್ವಾಹಕರಲ್ಲಿ “ನಿಪ’ ಆತಂಕ

Team Udayavani, May 25, 2018, 7:25 AM IST

ksrtc-bus-kerala-88.jpg

ಬೆಂಗಳೂರು: ಕೇರಳದಲ್ಲಿ ಕಾಣಿಸಿಕೊಂಡ ಮಾರಣಾಂತಿಕ “ನಿಪ’ ವೈರಸ್‌ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ಮತ್ತು ನಿರ್ವಾಹಕರಲ್ಲೂ ಆತಂಕ ಸೃಷ್ಟಿಸಿದೆ!

ಹೌದು, ಕರ್ನಾಟಕ-ಕೇರಳ ನಡುವೆ ನಿತ್ಯ 168 ಅನುಸೂಚಿ (ಶೆಡ್ಯುಲ್‌)ಗಳು ಕಾರ್ಯಾಚರಣೆ ಮಾಡುತ್ತವೆ. ಆದರೆ, ಈಗ ಕೇರಳದಲ್ಲಿ “ನಿಪ’ ಭೀತಿ ಉಂಟಾಗಿದೆ. ಇದರಿಂದ ಉದ್ದೇಶಿತ ಎರಡೂ ರಾಜ್ಯಗಳ ನಡುವೆ ಕರ್ತವ್ಯ
ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರಲ್ಲಿ ಆತಂಕ ಮನೆ ಮಾಡಿದೆ.

ಹಾಗಂತ ಯಾರೂ ಸೇವೆಗೆ ಗೈರು ಹಾಜರಾಗಿಲ್ಲ ಹಾಗೂ ಅನಾರೋಗ್ಯದ ಲಕ್ಷಣಗಳೂ ನೌಕರರಲ್ಲಿ ಕಂಡು ಬಂದಿಲ್ಲ.
ನೌಕರರು ದೇಶಾದ್ಯಂತ ಸುದ್ದಿ ಮಾಡಿರುವ ವೈರಸ್‌ ಕಾಣಿಸಿಕೊಂಡ ಪ್ರದೇಶಕ್ಕೆ ಹೋಗಿ ಬರುತ್ತಾರೆ. ಹಾಗಾಗಿ,
ಸಜಹವಾಗಿ ಭಯ ಕಾಡುತ್ತಿರುವ ಸಾಧ್ಯತೆ ಇದೆ. ಆದರೆ, ಯಾರೊಬ್ಬರೂ ಈ ಬಗ್ಗೆ ಆತಂಕ ವ್ಯಕ್ತಪಡಿಸಿಲ್ಲ. ಸೇವೆ
ಮತ್ತು ಪ್ರಯಾಣಿಕರ ಓಡಾಟ ಎಂದಿನಂತೆ ಇದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ: ಕೆಎಸ್‌ಆರ್‌ಟಿಸಿಯಿಂದ ಕೇರಳಕ್ಕೆ ನಿತ್ಯ 168 ಶೆಡ್ಯುಲ್‌ಗ‌ಳು ಕಾರ್ಯಾಚರಣೆ
ಮಾಡುತ್ತವೆ. ಇದರಲ್ಲಿ ಬೆಂಗಳೂರು ವಿಭಾಗದ 25 ಪ್ರೀಮಿಯಂ ಬಸ್‌ಗಳೂ ಇವೆ. ಆ ಪೈಕಿ “ನಿಪ’ ಕಾಣಿಸಿಕೊಂಡ ಕ್ಯಾಲಿಕಟ್‌ಗೆ ಹೋಗುವ ಬಸ್‌ಗಳ ಸಂಖ್ಯೆ ಕೇವಲ ಎರಡು. ಅಲ್ಲದೆ, ಚಾಲಕರು, ನಿರ್ವಾಹಕರು ಅಲ್ಲಿರುವುದು ಎರಡು ತಾಸುಗಳು ಮಾತ್ರ. ಇನ್ನು ಉಳಿದ ಶೆಡ್ಯುಲ್‌ಗ‌ಳು ಪುತ್ತೂರು,ಮಂಗಳೂರು, ಚಾಮರಾಜನಗರ ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಕಾರ್ಯಾಚರಣೆ ಮಾಡುತ್ತವೆ. ಆ ನೌಕರರ ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಚಾಲಕರು- ನಿರ್ವಾಹಕರಿಗೆ ಕೂಡ ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿರುವುದಾಗಿ
ಕೆಎಸ್‌ಆರ್‌ಟಿಸಿ ಪ್ರಧಾನ ವ್ಯವಸ್ಥಾಪಕ(ಸಂಚಾರ) ವಿಶ್ವನಾಥ್‌ ಸ್ಪಷ್ಟಪಡಿಸಿದರು.

ಕರ್ನಾಟಕ-ಕೇರಳ ನಡುವೆ ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯಾಚರಣೆ ಮಾಡುವುದರಿಂದ ಮುನ್ನೆಚ್ಚರಿಕೆ ಕ್ರಮ
ಕೈಗೊಳ್ಳುವಂತೆ ನಿಗಮಕ್ಕೂ ಸೂಚಿಸಲಾಗಿದೆ. ಆ ಮಾರ್ಗದ ಬಸ್‌ಗಳಲ್ಲೂ “ನಿಪ’ ಬಗ್ಗೆ ಜಾಗೃತಿ ಮೂಡಿಸುವಂತಹ ಸಂದೇಶಗಳನ್ನು ಬಿತ್ತರಿಸುವಂತೆ ಮನವಿ ಮಾಡಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ದಯಾನಂದ ತಿಳಿಸಿದರು.

ಟಾಪ್ ನ್ಯೂಸ್

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.