ಕೆಎಸ್‌ಆರ್‌ಟಿಸಿಗೆ 200ನೇ ಪ್ರಶಸ್ತಿ ಗರಿ
Team Udayavani, Jul 22, 2017, 5:50 AM IST
ಬೆಂಗಳೂರು: ಅಲ್ಪಾವಧಿಯಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದು ಲಿಮ್ಕಾ ದಾಖಲೆಗೆ ಪಾತ್ರವಾಗಿದ್ದ ಕೆಎಸ್‌ಆರ್‌ಟಿಸಿಗೆ ಈಗ ಪ್ರಶಸ್ತಿ ಗಳಿಕೆಯಲ್ಲಿ ದ್ವಿಶತಕದ ಸಂಭ್ರಮ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಶುಕ್ರವಾರ ‘ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ-2017’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಮೂಲಕ 200ನೇ ಪ್ರಶಸ್ತಿ ಗಳಿಸಿದ್ದು, ಇಷ್ಟೊಂದು ಪ್ರಶಸ್ತಿಗಳನ್ನು ಗಳಿಸಿರುವ ದೇಶದ ಏಕೈಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೂ ಕೆಎಸ್‌ಆರ್‌ಟಿಸಿ ಪಾತ್ರವಾಗಿದೆ.
ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿಯು ಮೈಸೂರು ಚತುರ ಸಾರಿಗೆ ವ್ಯವಸ್ಥೆ ಅಳವಡಿಸಿತ್ತು. ಈ ವ್ಯವಸ್ಥೆಯನ್ನು ಅಳವಡಿಸಿಕೊಂಡ ಮೊದಲ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ. ಈ ಉಪಕ್ರಮಕ್ಕಾಗಿ 200ನೇ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಜ್ ಕಲಾಡಿ ಕೆಎಸ್‌ಆರ್‌ಟಿಸಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಪರವಾಗಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಬಿಎನ್‌ಎಸ್ ರೆಡ್ಡಿ ಪ್ರಶಸ್ತಿ ಸ್ವೀಕರಿಸಿದರು. ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಕೆ. ರಾಮಮೂರ್ತಿ, ಎಚ್. ಗುರುರಾಜ್ ಉಪಸ್ಥಿತರಿದ್ದರು. ಕೆಎಸ್‌ಆರ್‌ಟಿಸಿ ಕಳೆದ ಸುಮಾರು ಎರಡು ದಶಕಗಳಲ್ಲಿ 200 ಪ್ರಶಸ್ತಿಗಳನ್ನು ಗಳಿಸಿದ್ದು, ಇದರಲ್ಲಿ 1998ರಿಂದ 2008ರ ವರೆಗೆ 13 ಪ್ರಶಸ್ತಿಗಳು ಬಂದಿದ್ದವು. 2008ರಿಂದ 2013ರ ವರೆಗೆ 52 ಹಾಗೂ ಉಳಿದ ಪ್ರಶಸ್ತಿಗಳು 2013-2017ರ ಅವಧಿಯಲ್ಲಿ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.