ಯುಗಾದಿ ಪ್ರಯುಕ್ತ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್
Team Udayavani, Apr 3, 2019, 3:00 AM IST
ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು 600 ಹೆಚ್ಚುವರಿ ಬಸ್ ಸೇವೆಗಳನ್ನು ಕಲ್ಪಿಸಿದೆ.
ಈ ಹೆಚ್ಚುವರಿ ಬಸ್‌ಗಳು ಏ. 5 ಮತ್ತು 6ರಂದು ನಗರದಿಂದ ರಾಜ್ಯ ಹಾಗೂ ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಹೊರಡುವ ಹಾಗೂ ಏ. 7ರಂದು ವಿವಿಧೆಡೆಯಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಾರ್ಯಾಚರಣೆ ಮಾಡಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.
ಅದೇ ರೀತಿ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.
ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಇ-ಟಿಕೆಟ್ ಬುಕಿಂಗ್‌ಗೆ ವೆಬ್‌ಸೈಟ್: www.ksrtc.in ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಜತೆಗೆ ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ, ಹೋಗಿ ಬರುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.