ಜಿಲ್ಲೆಗಳಲ್ಲೂ ಕರ್ನಾಟಕಕ್ಕೆ ಕುಮಾರಣ್ಣ ಸಮಾವೇಶ


Team Udayavani, Oct 22, 2017, 7:00 AM IST

JDS-HDD.jpg

ಬೆಂಗಳೂರು/ರಾಮನಗರ: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್‌ಮಟ್ಟದಲ್ಲಿ “ಮನೆ ಮನೆಗೆ ಕುಮಾರಣ್ಣ’ ಅಭಿಯಾನ, ಜಿಲ್ಲಾಮಟ್ಟದಲ್ಲಿ “ಕರ್ನಾಟಕಕ್ಕೆ ಕುಮಾರಣ್ಣ’ ಘೋಷಣೆಯಡಿ ಸಮಾವೇಶ ನಡೆಸಲು ಜೆಡಿಎಸ್‌ ಯುವ ಕಾರ್ಯಕಾರಿಣಿ ನಿರ್ಣಯ ಕೈಗೊಂಡಿದೆ.

ಬಿಡದಿ ಬಳಿಯ ರೆಸಾರ್ಟ್‌ನಲ್ಲಿ ಶನಿವಾರ ನಡೆದ ಕಾರ್ಯಕಾರಿಣಿಯಲ್ಲಿ, ಸಮಾವೇಶಗಳ ಜತೆಗೆ ಸಾಮಾಜಿಕ ಜಾಲತಾಣ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಮತದಾರರ ಮನಗೆಲ್ಲಲು ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಯಿತು.

ಕಾರ್ಯಕಾರಿಣಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ಯುವ ಘಟಕದ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಹೋಗಿ ತಿಳಿಸುವ ಕೆಲಸ ಮಾಡಬೇಕು. ಕಾಂಗ್ರೆಸ್‌ ಮತ್ತು ಬಿಜೆಪಿಗಿಂತ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಜೆಡಿಎಸ್‌ ಹಿಂದಿದ್ದು, ಯುವ ಸಮೂಹ ಸೆಳೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಬೇಕು. ಅದಕ್ಕಾಗಿಯೇ ಪ್ರತ್ಯೇಕ ವಿಭಾಗವನ್ನು ರಚಿಸಿಕೊಳ್ಳಿ ಎಂದು ಸಲಹೆ ನೀಡಿದರು.

ನಾನು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ರಾಜ್ಯಕ್ಕೆ ಮಾಡಿದ ಸೇವೆ ಮತ್ತು ಕೈಗೊಂಡ ಪ್ರಮುಖ ತೀರ್ಮಾನಗಳು. ಎಚ್‌
.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ 20 ತಿಂಗಳು ಮಾಡಿದ ಸಾಧನೆ ಜನರಿಗೆ ಮನವರಿಕೆ ಮಾಡಿಕೊಟ್ಟರೆ ನಾವು ಅಧಿಕಾರಕ್ಕೆ ಬರುವುದು ಕಷ್ಟವೇನಲ್ಲ. ನಮ್ಮಲ್ಲಿ ಎಲ್ಲರೂ ನಾಯಕರೇ, ಕಾರ್ಯಕರ್ತರಾಗಿ ಬೀದಿಗಿಳಿದು ಕೆಲಸ ಮಾಡಲು ಯಾರೂ ಸಿದಟಛಿರಿಲ್ಲ. ಎಲ್ಲರೂ ಸೇರಿ ಹೋರಾಟ ಮಾಡಿದರೆ ಪಕ್ಷ ಅಧಿಕಾರಕ್ಕೆ ತರಲು ಸಾಧ್ಯ ಎಂದು ಹೇಳಿದರು.

ಜೆಡಿಎಸ್‌ ಕೇವಲ ಒಕ್ಕಲಿಗರ ಪಕ್ಷವಲ್ಲ. ಹಿಂದುಳಿದವರಿಗೆ ಮುಸ್ಲಿಮರಿಗೆ ದಲಿತರಿಗೆ ಹೆಚ್ಚು ಅಧಿಕಾರ ಕೊಟ್ಟ ಪಕ್ಷ. ಸಿದ್ದರಾಮಯ್ಯ, ಇಬ್ರಾಹಿಂ, ಮಿರಾಜುದ್ದೀನ್‌ ಪಟೇಲ್‌, ಬಂಡೆಪ್ಪ ಕಾಶಂಪುರ್‌, ಡಿ. ಮಂಜುನಾಥ್‌ ಹೀಗೆ ಎಲ್ಲರಿಗೂ ಅಧಿಕಾರ ಕೊಟ್ಟಿದ್ದೇವೆ. ಆದರೆ, ಅಪಪ್ರಚಾರದಿಂದ ಗೂಬೆ ಕೂರಿಸಲಾಗುತ್ತಿದೆ. ಅದು ಹೆಚ್ಚು ದಿನ ನಡೆಯುವುದಿಲ್ಲ ಎಂದರು.

ಕೆಲ್ಸ ಮಾಡದಿದ್ರೆ ತೆಗೆದು ಹಾಕಿ: ಜಿಲ್ಲಾ ಮತ್ತು ತಾಲೂಕು ಹಾಗೂ ನಗರದ ಯುವ ಘಟಕದಲ್ಲಿ ಯಾರು ಸರಿಯಾಗಿ ಕೆಲಸ
ಮಾಡುವುದಿಲ್ಲವೋ ಅಂತವರನ್ನು ತಕ್ಷಣ ಬದಲಾವಣೆ ಮಾಡಲು ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ
ಅವರಿಗೆ ವೇದಿಕೆಯಲ್ಲೇ ದೇವೇಗೌಡರು ಸೂಚಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ರಾಷ್ಟ್ರಾಧ್ಯಕ್ಷನಾಗಿ ನಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ರಾಜ್ಯದ ಹಿತ ದೃಷ್ಟಿಯಿಂದ ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ತರಲು ಯುವಕರು ಪಕ್ಷ ಸಂಘಟನೆಗೆ ಎಷ್ಟೋತ್ತಿಗಾದರೂ ಸರಿ ಎಲ್ಲಿಗಾದರೂ ಸರಿ ಕರೆದರೆ ಬರಲು ನಾನು ಸಿದಟಛಿ ಎಂದು ತಿಳಿಸಿದರು.

ಸೂಚನೆ: ಯುವ ಜೆಡಿಎಸ್‌ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ, ಡಿಸೆಂಬರ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಯುವ ಜೆಡಿಎಸ್‌ ಪದಾಧಿಕಾರಿಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಯುವ ಕಾರ್ಯಕರ್ತರು ಹೆಚ್ಚಾಗಿ ತೊಡಗಿಸಿ
ಕೊಳ್ಳಬೇಕಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಯಾವ ದಿನಾಂಕದಂದು ಯುವ ಕಾರ್ಯಕರ್ತರ ಸಮಾವೇಶ ನಡೆಯಬೇಕು ಎಂಬುದರ ಬಗ್ಗೆ ಮಾಹಿತಿ ಕೊಡುವಂತೆ ಅವರು ಜಿಲ್ಲಾ ಯುವ ಘಟಕಗಳ ಎಲ್ಲಾ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ರಮೇಶ್‌ ಬಾಬು, ಕಾಂತರಾಜು, ಯುವ ಜೆಡಿಎಸ್‌ನ ಚಂದ್ರಶೇಖರ್‌, ರಾಮನಗರ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ವಿ.ನರಸಿಂಹಮೂರ್ತಿ, ಯಾದಗಿರಿಯ ಶರಣ್‌ ಗೌಡ ಮತ್ತಿತರರು ಇದ್ದರು.

ಹೊರಗೆ ಹಾಕೋದೂ ಗೊತ್ತು ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಅವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿರುವ ಎಚ್‌.ಡಿ.ದೇವೇಗೌಡ, “ಚೇಷ್ಟೆ ಹೆಚ್ಚಾದರೆ ಪಕ್ಷದಿಂದ ಹೊರ ಹಾಕಬೇಕಾಗುತ್ತದೆ. ನನಗೆ ಬೆಳೆಸೋದು ಗೊತ್ತು, ಹೊರಗೆ ಹಾಕೋದೂ ಗೊತ್ತು’ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣರ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕೆಲವರು ಪ್ರಜ್ವಲ್‌ ರೇವಣ್ಣನ ಹೇಳಿಕೆಗಳು ಮನರಂಜನೆ ಎಂದು ಭಾವಿಸಿದ್ದಾರೆ. ಇದಕ್ಕೆ ತಾವು ಅವಕಾಶ ಕೊಡೋಲ್ಲ, ತೀರಾ ಚೇಷ್ಟೆ ಮಾಡಿದರೆ ಹೊರಗಾಕೋದು ಗೊತ್ತು’ ಎಂದು ತಿಳಿಸಿದರು. ನಿಖೀಲ್‌ ತನಗೆ ಅಧಿಕಾರ ಬೇಡ ಎಂದು ಹೇಳಿದ್ದಾನೆ, ಆದರೆ ಚುನಾವಣೆ ಸಮಯದಲ್ಲಿ ಪಕ್ಷಕ್ಕಾಗಿ ದುಡಿಯುವುದಾಗಿಯೂ ಹೇಳಿದ್ದಾನೆ.

ಪ್ರಜ್ವಲ್‌ ರೇವಣ್ಣ ರಾಜಕೀಯದಲ್ಲಿ ಬೆಳೆಯಬೇಕಾದವನು. ಆತನ ಬೆಳೆವಣಿಗೆ ತಡೆಯೋಕೆ ಆಗೊಲ್ಲ. ಅವರ ಹಣೆ ಬರಹ
ಏನಿದಿಯೋ ತಪ್ಪಿಸೋಕೆ ಆಗೋಲ್ಲ. ಆದರೆ, ಸಹನೆ-ತಾಳ್ಮೆ ಮುಖ್ಯ ಎಂದರು.

ಯೋಗೇಶ್ವರ್‌ರನ್ನು
ಪಕ್ಷಕ್ಕೆ ಕರೆದಿಲ್ಲ

ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಅವರನ್ನು ತಾವು ಪಕ್ಷಕ್ಕೆ ಕರೆದಿಲ್ಲ. ಬಿಜೆಪಿ ಸೇರುವುದಾಗಿ ಹೇಳಿಕೊಂಡಿದ್ದಾರೆ. ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಿಂದ ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದಾರೆ. ಸ್ಥಳೀಯ ಮುಖಂಡರು ಅವರ ಮೇಲೆ ಈ ಬಾರಿ ಸ್ಪರ್ಧಿಸಲು ಒತ್ತಡ ಹೇರುತ್ತಿರಬಹುದು.ಅವರೆಲ್ಲಾ ಸಮಾಧಾನವಾಗಿರಬೇಕು.ಚನ್ನಪಟ್ಟಣದಲ್ಲಿ ಕಾರ್ಯಕರ್ತರಿಗೆ ಟಿಕೆಟ್‌ ಕೊಡ್ತೀವಿ ಎಂದು ಹೇಳುವ ಮೂಲಕ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಇನ್ನೂ ಅಂತಿಮಗೊಂಡಿಲ್ಲ ಎಂಬ ಸಂದೇಶವನ್ನು ದೇವೇಗೌಡರು ರವಾನಿಸಿದರು. 

120 ಕ್ಷೇತ್ರ ಗೆಲ್ಲುವ ಹಠ
ಮುಂದಿನ ಚುನಾವಣೆಯಲ್ಲಿ ಕನಿಷ್ಠ 120 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ನಮ್ಮದು. ಹೀಗಾಗಿ, ಬಂದವರಿಗೆಲ್ಲ ಟಿಕೆಟ್‌
ಕೊಡುವುದಿಲ್ಲ. ಗೆಲುವೇ ಮಾನದಂಡ. ಕ್ಷೇತ್ರ ಬಿಟ್ಟು ಬೆಂಗಳೂರಿನಲ್ಲಿ ಕಾಲ ಕಳೆದರೆ ಟಿಕೆಟ್‌ ಸಿಗುತ್ತದೆ ಎಂಬುದು ಭ್ರಮೆಯಷ್ಟೇ. ಟಿಕೆಟ್‌ ಯಾರಿಗೆ ಕೊಡಬೇಕೆಂದು ಇಲ್ಲಿ ಅಪ್ಪ-ಮಕ್ಕಳು ತೀರ್ಮಾನಿಸುವುದಿಲ್ಲ. ಅದಕ್ಕೆ ಅಂತಾನೆ ಟಿಕೆಟ್‌ ಹಂಚಿಕೆ ಸಮಿತಿ ಇದೆ. ಅದರಲ್ಲಿ ಬಸವರಾಜ ಹೊರಟ್ಟಿ, ಎಚ್‌.ವಿಶ್ವನಾಥ್‌, ಎಚ್‌.ಸಿ.ನೀರಾವರಿ ಅಂತಹ ಹಿರಿಯ ನಾಯಕರಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಗೆಲ್ಲುವ ಉದ್ದೇಶ ಇಟ್ಟುಕೊಂಡೇ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು ಸಾಮೂಹಿಕ ಚರ್ಚೆಯ ನಂತರವೇ ಟಿಕೆಟ್‌ ನಿರ್ಧಾರವಾಗಲಿದೆ. 
– ಎಚ್‌.ಡಿ.ದೇವೇಗೌಡ

ಟಾಪ್ ನ್ಯೂಸ್

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.