ನಾನು ಬಂಡೆನೂ ಅಲ್ಲ, ಜಲ್ಲಿನೂ ಅಲ್ಲ: ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು: ಡಿಕೆಶಿ
Team Udayavani, Dec 23, 2020, 3:07 PM IST
ಬೆಂಗಳೂರು: ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು. ನಾನು ಯಾರನ್ನೂ ದ್ವೇಷ ಮಾಡಲ್ಲ, ಅವರ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಬಂಡೆನೂ ಅಲ್ಲ, ಮರಳು ಅಲ್ಲ, ಜಲ್ಲಿಯೂ ಅಲ್ಲ. ಉಪಯೋಗಿಸಿಕೊಂಡಿದ್ದಾರೆ ಬಿಡಿ ಎಂದು ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಂಪದ್ಭರಿತ ಖಾತೆ ಕಾರಣಕ್ಕಾಗಿ ಸಮ್ಮಿಶ್ರ ಸರ್ಕಾರ ಇರಬೇಕು ಎಂದು ಡಿಕೆಶಿ ಬಯಸಿದ್ದರು ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ನಾನೇಕೆ ಮಾತಾಡಲಿ, ಅವರದ್ದು ಒಂದು ಪಕ್ಷ, ಅವರನ್ನು ಏಕೆ ಡಿಗ್ರೇಡ್ ಮಾಡುವುದು. ಸಿಎಂ ಯಡಿಯೂರಪ್ಪ ಮತ್ತು ಅವರ ಅಡ್ಜೆಸ್ಟ್ ಮೆಂಟ್ ಏನೇನಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು.
ಶಾಲೆಗಳ ವಿಚಾರದಲ್ಲಿ ಪ್ರತಿ ನಿಮಿಷ ಕೂಡ ಗೊಂದಲ ಆಗುತ್ತಿದೆ. ಶಿಕ್ಷಣ ಸಚಿವರು ಸಿಎಂ ಜೊತೆ, ಪೋಷಕರ ಜೊತೆ ಮಾತನಾಡುತ್ತೇನೆ ಎಂದು ಹೇಳುತ್ತಾರೆ. ಸರ್ಕಾರ ಆ ಗೊಂದಲವನ್ನು ಮೊದಲು ನಿವಾರಣೆ ಮಾಡಬೇಕು. ಮಕ್ಕಳನ್ನು ರಕ್ಷಣೆ ಮಾಡಬೇಕು, ಟೀಚರ್ಸ್ ಗೂ ಸಂಬಳ ನೀಡಬೇಕು
ಇದನ್ನೂ ಓದಿ: 4 ಲಕ್ಷ ರೂ. ನಗದು ಹೊಂದಿದ್ದ ಬ್ಯಾಗ್ ಎತ್ತಿಕೊಂಡು ಮರವೇರಿದ ಕಪಿ…ಮುಂದೇನಾಯ್ತು?
ಬರೀ ಶಾಲೆಯನ್ನು ತೆಗೆಯಬೇಕು, ಮುಚ್ಚಬೇಕು ಎನ್ನುವುದೇ ಗೊಂದಲವಾಗುತ್ತಿದೆ. ತಜ್ಞರು ಕೂಡ ಇದಕ್ಕೆ ಸಲಹೆ ನೀಡಲು ಇದ್ದಾರೆ. ಮಕ್ಕಳು ಭವಿಷ್ಯ, ಪರೀಕ್ಷೆ ಎಲ್ಲವೂ ಮುಖ್ಯ. ಒಂದು ಪಾಲಿಟಿಕಲ್ ಪಾರ್ಟಿಯಾಗಿ ನಮ್ಮ ಅಭಿಪ್ರಾಯಕ್ಕಿಂತ ಸರ್ಕಾರದಲ್ಲಿ ಸ್ಪಷ್ಟತೆ ಇಲ್ಲ. ನನಗೂ ಕೂಡ ಸರ್ಕಾರದ ನಿರ್ಧಾರದ ಕುರಿತು ಗಾಬರಿಯಾಗುತ್ತಿದೆ.
ಸರ್ಕಾರದ ಬಳಿ ಪಂಡಿತರಿದ್ದಾರೆ, ಬಹಳ ದೊಡ್ಡ ದೊಡ್ಡ ತಜ್ಞರಿದ್ದಾರೆ. ಸರ್ಕಾರ ನಮ್ಮ ಮಾತು, ಸಲಹೆಯನ್ನಂತೂ ಕೇಳುವುದಿಲ್ಲ. ಏನೇ ಗಲಾಟೆಯಾಗಲಿ ಕಾಂಗ್ರೆಸ್ ನವರೇ ಕಾರಣ ಎನ್ನುತ್ತಾರೆ. ಸರ್ಕಾರಕ್ಕೆ ಕೋವಿಡ್ ವಿಚಾರದಲ್ಲೂ ಹಿಡನ್ ಅಜೆಂಡಾ ಇದೆ. ನಾನು ತಜ್ಞರ ಜೊತೆ ಚರ್ಚೆ ಮಾಡಿ ಮುಂದೆ ಮಾತನಾಡುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಾಂದ್ಯಂತ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ; ಹೊಸ ವರ್ಷಾಚರಣೆಗೆ ಬ್ರೇಕ್ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.