ವಿಧಾನಸೌಧ, ವಿಕಾಸಸೌಧ ಬೇಕಾಬಿಟ್ಟಿ ಪ್ರವೇಶಕ್ಕೆ ಬ್ರೇಕ್

Team Udayavani, Jul 25, 2018, 6:00 AM IST

41.jpg

ಬೆಂಗಳೂರು: ಅನಗತ್ಯ ವ್ಯಕ್ತಿಗಳ ಪ್ರವೇಶ, ಬೇಕಾಬಿಟ್ಟಿ ಓಡಾಟದ ಹಿನ್ನೆಲೆಯಲ್ಲಿ ವಿಧಾನಸೌಧ-ವಿಕಾಸಸೌಧ ಅತಿ ಭದ್ರತಾ ವಲಯ (ಹೈ ಸೆಕ್ಯುರಿಟಿ ಝೋನ್‌) ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ವಿಧಾನಸೌಧ- ವಿಕಾಸಸೌಧ ಪ್ರವೇಶಕ್ಕೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸುವುದು ಇದರ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುವವರಿಗೆ ನಿಗದಿತ ಸಮಯ ಮೀಸಲಿಟ್ಟು, ಪ್ರತ್ಯೇಕ ಪಾಸ್‌ ನೀಡುವ ಬಗ್ಗೆ ಚಿಂತನೆ ನಡೆದಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ನಗರ ಪೊಲೀಸ್‌ ಆಯುಕ್ತರು, ವಾರ್ತಾ ಇಲಾಖೆ ಆಯುಕ್ತರನ್ನು ಒಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗೆ, ಕೆಲವು ವ್ಯಕ್ತಿಗಳು ಸಚಿವರನ್ನು ಭೇಟಿ ಮಾಡಿಸುವುದಾಗಿ ಜನರನ್ನು ಕರೆತರುವುದು. ಶಿಫಾರಸು ಪತ್ರ ಕೊಡಿಸುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳ ಹೆಸರಿನಲ್ಲಿ ಹಣ ಪಡೆಯುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಮಾಧ್ಯಮಗಳಿಗೂ ಕೆಲವೊಂದು ನಿರ್ಬಂಧ ಹೇರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ಪತ್ರಿಕಾಗೋಷ್ಠಿ ನಡೆಸುವಾಗ ಸಮ್ಮೇಳನ ಸಭಾಂಗಣದಲ್ಲಿ ಸಮಯ ನಿಗದಿ ಮಾಡಿ ಪತ್ರಿಕಾಗೋಷ್ಠಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಒಂದೊಮ್ಮೆ ಮಾಧ್ಯಮಗಳು ಸಚಿವರಿಂದ ಅಥವಾ ಅಧಿಕಾರಿಗಳಿಂದ ಸ್ಪಷ್ಟನೆ, ವಿವರ ಬಯಸಿದಲ್ಲಿ ಸಂಬಂಧಪಟ್ಟವರು ಲಭ್ಯತೆ ಇದ್ದರೆ ಸಮ್ಮೇಳನ ಸಭಾಂಗಣದಲ್ಲೇ ಬಂದು ಮಾಹಿತಿ ನೀಡುವ ವ್ಯವಸ್ಥೆ ಜಾರಿಗೂ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ, ಮುಖ್ಯಮಂತ್ರಿ ಕುಮಾರ ಸ್ವಾಮಿ ಯವರು ಪ್ರತಿಕ್ರಿಯಿಸಿ, “”ವಿಧಾನಸೌಧ- ವಿಕಾಸ ಸೌಧಕ್ಕೆ ಕೆಲವು ದಳ್ಳಾಳಿಗಳು ಪ್ರವೇಶ ಪಡೆಯುತ್ತಿದ್ದಾರೆ. ಈ ದೃಶಗಳು ಸಿಸಿ ಟಿವಿಗಳಲ್ಲಿ ರೆಕಾರ್ಡ್‌ ಆಗಿವೆ. ಇದರಿಂದ
ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ತೊಡಕು ಉಂಟಾಗುತ್ತಿದೆ ಎಂದರು.

ಕಾನೂನು ಬಾಹಿರ ಚಟುವಟಿಕೆಗಳು
ನಡೆಯುತ್ತಿರುವ ಬಗ್ಗೆ ಹಾಗೂ ಸಚಿವರಿಂದ ಕೆಲಸ ಮಾಡಿಸಿ  ಕೊಡುವುದಾಗಿ ಹಣ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಹೀಗಾಗಿ, ಪ್ರವೇಶಕ್ಕೆ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ವಿಧಾನಸೌಧ- ವಿಕಾಸ ಸೌಧಕ್ಕೆ ಭದ್ರತೆಯೂ ಅಗತ್ಯವಾದ್ದರಿಂದ ಅತಿ ಭದ್ರತಾ ವಲಯ ಎಂದು ಘೋಷಿಸುವ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಚರ್ಚೆ ನಡೆದಿದೆ” ಎಂದಿದ್ದಾರೆ.

ಕಾರ್ಯಕರ್ತರ ಪ್ರವೇಶ ಜಾಸ್ತಿ: ಮೂಲಗಳ ಪ್ರಕಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆ ವೇಳೆ ವಿಧಾನಸೌಧಕ್ಕೆ ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸೇರಿ ದಂತೆ ಸಚಿವರು ದೈನಂದಿನ ಕೆಲಸ ಕಾರ್ಯ ಮಾಡಲು ಬಿಡುತ್ತಿಲ್ಲ. ಶಿಫಾರಸು ಪತ್ರ, ನೆರವು ಮತ್ತಿತರ ಸಹಾಯ ಕೇಳಿ ಬರುವುದು. ಕಚೇರಿಗಳ ಮುಂದೆ ಜಮಾವಣೆಗೊಳ್ಳುವುದು ಹೆಚ್ಚಾಗುತ್ತಿದೆ. ಹೀಗಾಗಿ, ಇದನ್ನು ನಿಯಂತ್ರಿಸಲು ಅತಿ ಭದ್ರತಾ ವಲಯ ಎಂದು ಘೋಷಿಸಲು ನಿರ್ಧರಿಸಲಾಗಿದೆ.

ಹೊಸ ಕ್ರಮವೇನಲ್ಲ: ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಈ ವ್ಯವಸ್ಥೆ ಇದೆ. ಅಲ್ಲಿನ ಸಚಿವಾಲಯದಲ್ಲಿ ಬೆಳಗಿನ ವೇಳೆ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ಬೆಂಬಲಿಗರಿಗೆ ಪ್ರವೇಶ ಇಲ್ಲ. ಮುಖ್ಯಮಂತ್ರಿ ಹಾಗೂ ಸಚಿವರನ್ನು ನಿಗದಿತ ಸಮಯದಲ್ಲಿ ಮಾತ್ರ ಸಾರ್ವಜನಿಕರ ಭೇಟಿಗೆ ಅವಕಾಶವಿದೆ. 

ಮಾಧ್ಯಮಕ್ಕೂ ನಿರ್ಬಂಧ?
ಈ ಮಧ್ಯೆ ಮಾಧ್ಯಮದವರನ್ನು ಬಿಡದಂತೆ ವಿಧಾನ ಸೌಧ ಡಿಸಿಪಿಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ನಗರ ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ. ಈ ಕುರಿತು ಮೌಖೀಕ ಆದೇಶ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಮಂಗಳವಾರ ವಿಧಾನಸೌಧದ ಸಿಎಂ ಕಚೇರಿ ಬಳಿ ಮಾಧ್ಯಮದವರು ತೆರಳಲು ಹೋದಾಗ ಪೊಲೀಸರಿಂದ ತಡೆಯುವ ಪ್ರಯತ್ನ ನಡೆಯಿತು. ಹೀಗಾಗಿ, ಮಾಧ್ಯಮದವರು ಹಾಗೂ ಪೊಲೀಸರ ನಡುವೆ ಮಾತಿನ ಘರ್ಷಣೆಯೂ ನಡೆಯಿತು. ನಂತರ ಸಿಎಂ ಕುಮಾರಸ್ವಾಮಿಯವರೇ ಈ ಬಗ್ಗೆ ಸ್ಪಷ್ಟನೆ ನೀಡಿದರು. ಮಾಧ್ಯಮಗಳಿಗೆ ನಿರ್ಬಂಧ ಹೇರಿಲ್ಲ. ಮಾಧ್ಯಮಗಳು ವಿಧಾನಸೌಧದಲ್ಲಿ ಎಲ್ಲೆಡೆ ಸುತ್ತಾಡಿ, ಒಂದೊಂದು ಬಾರಿ ಒಬ್ಬೊಬ್ಬರು ಬಂದು ಪ್ರತಿಕ್ರಿಯೆ ಕೇಳುತ್ತಿದ್ದಾರೆ. ಹೀಗಾಗಿ, ಮಾಧ್ಯಮಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಅಲ್ಲೇ ಎಲ್ಲ ಮಾಹಿತಿ ಸಿಗುವ ವ್ಯವಸ್ಥೆ ಮಾಡಲಿದ್ದೇನೆ ಎಂದು ತಿಳಿಸಿದರು.

ಸದ್ಯದ ವ್ಯವಸ್ಥೆಯೇನು?
ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ವರೆಗೆ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಅವಕಾಶ ಇದೆ. ಮುಂದೆಯೂ ಆ ವ್ಯವಸ್ಥೆ ಇರಲಿದೆ.

ನಿರ್ಬಂಧ ಯಾರ್ಯಾರಿಗೆ?
ಬೆಳಗ್ಗೆ 10.30 ರಿಂದ 3 ಗಂಟೆ ತನಕ ಸಾರ್ವಜನಿಕರು, ರಾಜಕಾರಣಿಗಳು, ಶಾಸಕರು, ಸಚಿವರ ಬೆಂಬಲಿಗರು.

ಮಾಧ್ಯಮಗಳ ನಿಯಂತ್ರಣ
ಕುರಿತಂತೆ ಸಿಎಂ ಏನು ಹೇಳುತ್ತಾರೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ. ಅವರು ನಮ್ಮ ಮುಖ್ಯಸ್ಥರು. ಅವರು ಹೇಳಿದಂತೆ ನಾವು ನಡೆಯಬೇಕಾಗುತ್ತದೆ.
● ಸಿ.ಎಸ್‌.ಪುಟ್ಟರಾಜು, ಸಣ್ಣ ನೀರಾವರಿ ಸಚಿವ

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.