ಸಾಧನೆ ಮಾಡದಿದ್ದರೂ ಪ್ರಶಸ್ತಿಗೆ ಲಾಬಿ
Team Udayavani, Feb 18, 2019, 6:18 AM IST
ಬೆಂಗಳೂರು: ಸಮಾಜದಲ್ಲಿ ಯಾವುದೇ ಸಾಧನೆ ಮಾಡದಂತಹ ವ್ಯಕ್ತಿಗಳು ಕೂಡ ಪ್ರಶಸ್ತಿ ಪಡೆಯಲು ಲಾಬಿ ಮಾಡುತ್ತಿದ್ದು, ಇಂತಹ ನಡೆ ಅಸಹ್ಯ ಹುಟ್ಟಿಸುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಬೇಸರ ವ್ಯಕ್ತಪಡಿಸಿದ್ದಾರೆ.
ಬಿಎಂಶ್ರೀ ಪ್ರತಿಷ್ಠಾನವು ಎನ್.ಆರ್.ಕಾಲೊನಿಯ ಎಂವಿಸೀ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ಪ್ರೊ.ಎಲ್.ಎಸ್.ಶೇಷಗಿರಿರಾವ್ ವಿಮಶಾ ಪ್ರಶಸ್ತಿ ಹಾಗೂ ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ದತ್ತಿ ಪುಸ್ತಕ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.
ಪ್ರಶಸ್ತಿ ಪಡೆಯಲು ಯಾವುದೇ ಅರ್ಹತೆ ಇಲ್ಲದಿದ್ದರೂ ಲಾಬಿ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೆಲವರು ಹಗಲು ರಾತ್ರಿ ಎನ್ನದೇ ನಮ್ಮ ಮನೆಗೆ ಭೇಟಿ ನೀಡಿ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದರು. ಜತೆಗೆ ರಾಜಕೀಯ ಪ್ರಭಾವ ಬಳಸಿ ತಮಗೇ ಪ್ರಶಸ್ತಿ ನೀಡುವಂತೆ ಒತ್ತಡ ತಂದರು. ಆದರೆ, ಇಂತಹ ಮನಸ್ಥಿತಿ ಉಳ್ಳವರಿಗೆ ಯಾವುದೇ ಪ್ರಶಸ್ತಿ ಕೊಡಬಾರದು ಎಂದರು.
ಕನ್ನಡ ಹೋರಾಟಗಾರರ ಶ್ರಮದ ಫಲವಾಗಿ ಸರ್ಕಾರಿ ಶಾಲೆಗಳ ವಿಲೀನ ಕೈಬಿಟ್ಟಿರುವುದು ಹಾಗೂ ಕೈಗಾರಿಕಾ ಮತ್ತು ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ತಿದ್ದುಪಡಿಯಂತಹ ಮಹತ್ವದ ತೀರ್ಮಾನಕ್ಕೆ ಸರ್ಕಾರ ಮುಂದಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.
ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ರಾಜಕಾರಣಿಗಳು ಹಣ ಮತ್ತು ಅಧಿಕಾರದ ಬೆನ್ನತ್ತಿ ಹೊರಟಿದ್ದಾರೆ. ಇದರಿಂದ ಸಮಾಜದಲ್ಲಿ ಕ್ರೌರ್ಯ, ದ್ವೇಷ ಮತ್ತು ಅಸೂಯೆ ಹೆಚ್ಚಾಗುತ್ತಿದೆ. ನಾವೆಲ್ಲ ಬದುಕಿನಲ್ಲಿ ಸಂತೋಷ ಪಡುವ ಮನೋಭಾವವನ್ನು ಕಳೆದುಕೊಂಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿ ಜಾಣಗೆರೆ ವೆಂಟಕರಾಮಯ್ಯ ಅವರಿಗೆ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಪ್ರೊ.ಎಲ್.ಎಸ್.ಶೇಷಗಿರಿರಾವ್ ವಿಮಶಾ ಪ್ರಶಸ್ತಿ ಮತ್ತು ಸಾಹಿತಿ ಸುರೇಖಾ ಕುಲಕರ್ಣಿ ಅವರಿಗೆ ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ದತ್ತಿ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.