ಪ್ರತಿ ಶಾಲೆಯಲ್ಲೂ ಲ್ಯಾಬ್‌

Team Udayavani, Mar 7, 2021, 11:40 AM IST

Lab in every school

ಬೆಂಗಳೂರು: ಮಕ್ಕಳಲ್ಲಿ ಆವಿಷ್ಕಾರ ಹಾಗೂ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರತಿ ಶಾಲೆಯಲ್ಲೂ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಸ್ಥಾಪನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು. ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿರುವ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶನಿವಾರ ನೂತನವಾಗಿಆರಂಭಿಸಲಾಗಿರುವ ಅಟಲ್‌ ಟಿಂಕರಿಂಗ್‌ ಲ್ಯಾಬ್‌  ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಕಲಿಕೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಮಹತ್ವದ ಪಾತ್ರವಹಿಸುತ್ತದೆ ಮತ್ತು ಆವಿಷ್ಕಾರ ಮನೋಭಾವನೆ ಬೆಳೆಸುತ್ತದೆ ಎಂದರು.

ಪ್ರತಿ ಶಾಲೆಯಲ್ಲೂ ಸ್ಥಾಪನೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಕೆಲ ಶಾಲೆಗಳಲ್ಲಿ ಸ್ಥಳಾಭಾವ ಇದ್ದರೆ ವಿಶಾಲ ಜಾಗವಿರುವ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಅನ್ನು ಕ್ಲಷ್ಟರ್‌ ಮಾದರಿಯಲ್ಲಿ ತೆರೆಯಲಾಗುವುದು ಎಂದು ತಿಳಿಸಿದರು.

ಕಿರಿಯ ಮತ್ತು ಪ್ರಾಥಮಿಕ ಹಂತದ ಶಿಕ್ಷಣದಿಂದಲೇ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ರಾಜ್ಯದ ಶೈಕ್ಷಣಿಕ ಸ್ವರೂಪವೇ ಆಮೂಲಾಗ್ರವಾಗಿ ಬದಲಾಗುತ್ತದೆ. ಬೆಂಗಳೂರು ಜಗತ್ತಿನ ಟಾಪ್‌ ಹತ್ತು ನಗರಗಳ ಸ್ಥಾನದಲ್ಲಿದ್ದು, ಅದಕ್ಕೆ ಪೂರಕವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು ಎಂದು ಹೇಳಿದರು.

ಪ್ರಾಥಮಿಕ ಹಂತದಿಂದಲೇ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಳ್ಳಬೇಕು. ಬಾಲ್ಯದಲ್ಲಿ ಕಲಿಯುವ ಸಾಮರ್ಥ್ಯ ಹೆಚ್ಚಿರುತ್ತದೆ. ಬಹು ವಿಷಯಗಳನ್ನು, ಬಹಭಾಷೆಗಳನ್ನು ಕಲಿಯುವ ಶಕ್ತಿ ಮಕ್ಕಳಿಗೆ ಹೆಚ್ಚಾಗಿರುತ್ತದೆ. ಕೆಲ ದೇಶಗಳಲ್ಲಿ ಪ್ರೌಢ ಶಿಕ್ಷಣ ಹಂತದಲ್ಲಿ ಉಪಗ್ರಹಾಧರಿತ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳ ಕಲಿಕೆ ಹಾಗೂ ಬೋಧನೆಯಲ್ಲಿಉಪಗ್ರಹಗಳ ಪಾತ್ರವಿದೆ. ಶಾಲೆಗಳಲ್ಲೇ  ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ. ಇದೇ ಸುಧಾರಣೆ ನಮ್ಮಲ್ಲೂ ಆಗುತ್ತಿದ್ದು, ರಾಜ್ಯದ ಹಲವು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ ಎಂದು ಹೇಳಿದರು.

ಲ್ಯಾಬ್‌ ರಚಿಸಲು ಡೆಲ್‌ ಟೆಕ್ನಾಲಜೀಸ್‌ ನೆರವು ನೀಡಿದೆ. ಹೀಗೆ ಸರ್ಕಾರದ, ಸಮಾಜದ ಕೆಲಸಗಳಲ್ಲಿ ಖಾಸಗಿ ಸಹಭಾಗಿತ್ವ ಬಹಳ ಮುಖ್ಯವಾಗಿರುತ್ತದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕ್ಷೇತ್ರ ಉದಾರವಾಗಿ ಮುಂದೆ ಬರಬೇಕು ಎಂದು ಕೋರಿದರು.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.