ವೈಟ್ ಟಾಪಿಂಗ್‌ಗೆ ಸಮನ್ವಯ ಕೊರತೆ
Team Udayavani, Apr 5, 2018, 12:53 PM IST
ಬೆಂಗಳೂರು: ಬಿಬಿಎಂಪಿ ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗಿನ ಸಮನ್ವಯದ ಕೊರತೆಯಿಂದ ವೈಟ್‌ಟಾಪಿಂಗ್ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಅರ್ಧಕ್ಕೆ ನಿಂತ ಕಾಮಗಾರಿಯಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪಾಲಿಕೆಯಿಂದ ವೈಟ್‌ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಎಲ್ಲ ರಸ್ತೆಗಳ ಕಾಮಗಾರಿಗೆ ಸಂಚಾರಿ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ, ಕಾಮಗಾರಿಗಳು ಅರ್ಧಕ್ಕೆ ನಿಂತು ಜನರು ತೊಂದರೆ ಅನುಭವಿಸುವಂತಾಗಿದೆ.
10 ಕಿ.ಮೀ ಕಾಮಗಾರಿ ಪೂರ್ಣ: ನಗರದ ಪ್ರಮುಖ 29 ರಸ್ತೆಗಳು ಹಾಗೂ 6 ಜಂಕ್ಷನ್‌ಗಳಲ್ಲಿ 972.69 ಕೋಟಿ ರೂ. ವೆಚ್ಚದಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲು ಪಾಲಿಕೆ ಯೋಜನೆ ರೂಪಿಸಿದೆ. ಅದರಂತೆ ಕಳೆದ ಅಕ್ಟೋಬರ್‌ನಲ್ಲಿಯೇ ನಗರದ
ಪ್ರಮುಖ ರಸ್ತೆಗಳು ಹಾಗೂ ಆರು ಜಂಕ್ಷನ್‌ಗಳಲ್ಲಿ ಗುತ್ತಿಗೆದಾರರು ಕಾಮಗಾರಿ ಆರಂಭಿಸಿದ್ದು, ಈಗಾಗಲೇ ಸುಮಾರು 10 ಕಿ.ಮೀ.ನಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಯಿಂದ ತೀವ್ರ ಸಂಚಾರ ದಟ್ಟಣೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಹಾಗೂ ಮೈಸೂರು ರಸ್ತೆ ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಕಾಮಗಾರಿಗೆ ಅನುಮತಿ ನೀಡಲು ಸಂಚಾರ ಪೊಲೀಸರು ನಿರಾಕರಿಸಿದ್ದಾರೆ. ಹೀಗಾರಿ ಕಾಮಗಾರಿ ಅರ್ಧಕ್ಕೆ ನಿಂತಿದೆ.
ಯಂತ್ರಗಳಿಗೆ ಕೆಲಸವಿಲ್ಲ
ಏಕಕಾಲದಲ್ಲಿ ಐದು ರಸ್ತೆಗಳಲ್ಲಿ ಕಾಮಗಾರಿ ನಡೆಸಲು ಅಗತ್ಯವಾದ ಯಂತ್ರೋಪಕರಣಗಳು ಪಾಲಿಕೆಯ ಬಳಿಯಿವೆ. ಆದರೆ, ಸಂಚಾರ ಪೊಲೀಸರ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ಯಂತ್ರಗಳಿಗೆ ಕೆಲಸವಿಲ್ಲ ದಂತಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 93 ಕಿ.
ಮೀ. ಉದ್ದದ ವೈಟ್‌ಟಾಪಿಂಗ್ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚುವರಿ ಯಂತ್ರಗಳನ್ನು ತರಿಸಿಕೊಳ್ಳುವಂತೆ ಈ ಹಿಂದೆ ಪಾಲಿಕೆಯ ಅಧಿಕಾರಿಗಳು ಸೂಚನೆ ನೀಡಿದ್ದರು. ಆದರೆ ಈಗ ಅದೂ ಪ್ರಯೋಜನವಿಲ್ಲದಂತಾಗಿದೆ
ಪೊಲೀಸರ ವಾದವೇನು?
ನಗರದ ಹಲವು ರಸ್ತೆಗಳಲ್ಲಿ ಏಕಕಾಲದಲ್ಲಿ ಕಾಮಗಾರಿ ಆರಂಭಿಸಿದರೆ ತೀವ್ರ ಸಂಚಾರ ದಟ್ಟಣೆಯಾಗಲಿದ್ದು, ಇದರಿಂದಾಗಿ ಸಾರ್ವಜನಿಕರು ತೀವ್ರ ತೊಂದರೆಯಾಗುತ್ತದೆ. ಹೀಗಾಗಿ ಒಂದು ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ನಂತರ ಮತ್ತೂಂದು ರಸ್ತೆಯಲ್ಲಿ
ಕಾಮಗಾರಿ ನಡೆಸಲು ಅನುಮತಿ ನೀಡಲಾಗುವುದು ಎಂಬುದು ಸಂಚಾರ ಪೊಲೀಸರ ವಾದವಾಗಿದೆ.
ಬಿಬಿಎಂಪಿ ವಾದ ಏನು?
ಸದ್ಯ ಏಕಕಾಲದಲ್ಲಿ ಐದು ರಸ್ತೆಗಳಲ್ಲಿ ಕಾಮಗಾರಿ ನಡೆಸುವಷ್ಟು ಯಂತ್ರೋಪಕರಣಗಳು ಲಭ್ಯವಿದ್ದರೂ, ಸಂಚಾರ ಪೊಲೀಸರು ಒಂದು ರಸ್ತೆಯಲ್ಲಿನ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಮತ್ತೂಂದು ರಸ್ತೆಯಲ್ಲಿ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ. ಹೀಗೆ ಒಂದೊಂದೆ
ರಸ್ತೆಯಲ್ಲಿ ಕಾಮಗಾರಿ ನಡೆಸದಿರೆ 93 ಕಿ.ಮೀ. ಮುಗಿಯಲು ನಾಲ್ಕೈದು ವರ್ಷ ಬೇಕಾಗುತ್ತದೆ ಎನ್ನುವುದು ಪಾಲಿಕೆ ವಾದ.
ಸಂಚಾರ ಪೊಲೀಸರು ಒಂದು ರಸ್ತೆಯ ಕಾಮಗಾರಿ ಮುಗಿದ ನಂತರ ಮತ್ತೂಂದು ರಸ್ತೆಯಲ್ಲಿ ಕೆಲಸ ಮಾಡುವಂತೆ ತಿಳಿಸಿದ್ದು,
ಇದರಿಂದಾಗಿ ಕಾಮಗಾರಿ ವಿಳಂಬವಾಗುತ್ತಿದೆ.
ಕೆ.ಟಿ.ನಾಗರಾಜ್, ಮುಖ್ಯ ಎಂಜಿನಿಯರ್ (ಯೋಜನೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.