Bangalore: ಉದ್ಯಾನ ನಗರಿಗೆ ನೀರಿನ ಬರದ ಬರೆ!


Team Udayavani, Dec 3, 2023, 10:00 AM IST

tdy-7

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಳೆಯ ಅಭಾವದಿಂದ ಕಾವೇರಿ ಒಡಲು ಬರಿದಾಗುತ್ತಿದ್ದಂತೆ ಉದ್ಯಾನ ನಗರಿಗೆ ನೀರಿನ ಬರದ ಬರೆ ಬಿದ್ದಿದೆ. ಪರಿಣಾಮ ನಗರದ ಕೆಲವೆಡೆ ದುಪ್ಪಟ್ಟು ಹಣ ತೆತ್ತು ಟ್ಯಾಂಕರ್‌ ನೀರು ಖರೀದಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ವರುಣನ ಅವಕೃಪೆಯಿಂದ ರಾಜ್ಯ ರಾಜಧಾನಿಯಲ್ಲಿ ಅಂತರ್ಜಲಮಟ್ಟ ಕುಸಿದು ಕೆಲವು ಬೋರ್‌ವೆಲ್‌ಗ‌ಳಲ್ಲಿ ನೀರು ಬತ್ತಿದೆ. ತಮಿಳುನಾಡಿಗೂ ಕಾವೇರಿ ಹರಿಯುತ್ತಿರುವುದರಿಂದ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ (ಕೆಆರ್‌ಎಸ್‌) ಬೇಡಿಕೆಗೆ ತಕ್ಕನಾಗಿ ಉದ್ಯಾನ ನಗರಿಗೆ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ 840ಕ್ಕೂ ಹೆಚ್ಚಿನ ಬಡಾವಣೆಗಳಲ್ಲಿ ಈಗಾಗಲೇ ಟ್ಯಾಂಕರ್‌ ನೀರಿಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಮಳೆ ಕೊರತೆ ಮುಂದುವರಿದರೆ 2024 ಜನವರಿಯಲ್ಲೇ ಐಟಿ ಸಿಟಿಯಲ್ಲಿ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂಬುದು ಜಲತಜ್ಞರ ವಾದ.

ಮತ್ತೂಂದೆಡೆ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಯು 2024 ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಇದಕ್ಕೆ ತಗುಲುವ 10 ಟಿಎಂಸಿ ನೀರು ಪೂರೈಸುವುದೇ ಸರ್ಕಾರದ ಮುಂದಿರುವ ದೊಡ್ಡ ಸವಾಲು.

110 ಹಳ್ಳಿಗೆ ನೀರು ಪೂರೈಕೆಯೇ ಡೌಟ್‌: ಕಾವೇರಿ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಟಿ.ಕೆ.ಹಳ್ಳಿ, ಹಾರೋಹಳ್ಳಿ, ತಾತಗುಣಿಯಲ್ಲಿ ನೀರು ಸಂಗ್ರಹಕ್ಕೆ ಅಗತ್ಯವಿರುವ ಹೊಸ ಪಂಪಿಂಗ್‌ ಸ್ಟೇಷನ್‌ ಕಾರ್ಯ ಭರದಿಂದ ಸಾಗಿದೆ. ಈ ಪಂಪಿಗ್‌ ಸ್ಟೇಷನ್‌ಗೆ ಪೈಪ್‌ಲೈನ್‌ ಅಳವಡಿಕೆ ಕೆಲಸ ನಡೆಯುತ್ತಿದೆ. ತಮಿಳುನಾಡಿಗೆ ಕಾವೇರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಜನರ ಬೇಡಿಕೆಯಷ್ಟು ನೀರು ಪೂರೈಕೆ ಆಗುತ್ತಿಲ್ಲ. ಮಹಾಲಕ್ಷ್ಮೀ ಲೇಔಟ್‌, ಮಲ್ಲೇಶ್ವರ, ಎಚ್‌ಎಸ್‌ಆರ್‌ ಲೇಔಟ್‌, ಜೆಪಿನಗರ ಸೇರಿ ನಗರದ ಹಲವು ಕಡೆ ವಾರಕ್ಕೆ ಮೂರು ಬಾರಿ ಜಲಮಂಡಳಿ ಕಾವೇರಿ ನೀರು ಪೂರೈಸುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನೀರು ಪೂರೈಸುವಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಜನರಿಂದ ಒತ್ತಾಯಗಳು ಬರಲಾರಂಭಿಸಿವೆ. ಹೀಗಿರುವಾಗ ಸದ್ಯದ ಪರಿಸ್ಥಿತಿಯಲ್ಲಿ 110 ಹಳ್ಳಿಗಳಿಗೆ ಬೇಕಾಗುವ ನೀರು ಪೂರೈಸುವುದು ಕಷ್ಟಸಾಧ್ಯ ಎಂದು ಜಲತಜ್ಞರು, ಜಲಮಂಡಳಿ ಮೂಲಗಳು ತಿಳಿಸಿವೆ.

ಬೋರ್‌ವೆಲ್‌ಗ‌ಳಲ್ಲಿ ನೀರು ಬತ್ತುತ್ತಿರುವ ನಗರಗಳು ಇವು: ಬೆಂಗಳೂರಿನ ಶೇ.79 ಮಂದಿ ಬೋರ್‌ವೆಲ್‌ ನೀರನ್ನೇ ಆಶ್ರಯಿಸಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಅಭಾವದಿಂದ ರಾಜಾಜಿನಗರ, ಯಲಹಂಕ, ಪೀಣ್ಯ, ಯಶವಂತಪುರ, ವೈಟ್‌ಫೀಲ್ಡ್‌, ಎಲೆಕ್ಟ್ರಾನಿಕ್‌ ಸಿಟಿ, ಮಾರತ್ತ್ಹಳ್ಳಿ, ವಿಜಯನಗರ, ಜೆ.ಪಿ.ನಗರ ಸೇರಿ ಬೆಂಗಳೂರಿನ ಪ್ರಮುಖ ಪ್ರದೇಶಗಳ ಬಡಾವಣೆಗಳಲ್ಲಿರುವ ಬೋರ್‌ವೆಲ್‌ಗ‌ಳ ನೀರು ಬತ್ತಿವೆ. ಹೆಚ್ಚಿನ ಬಡಾವಣೆಗಳಲ್ಲಿ ಅಂತರ್ಜಲ ಕುಸಿದು ಒಂದೆರಡು ತಿಂಗಳಲ್ಲಿ ಇಲ್ಲೂ ನೀರು ಬತ್ತುವ ಲಕ್ಷಣ ಗೋಚರಿಸಿದೆ. ಆಗ ನೀರಿನ ಅಭಾವ ಮತ್ತಷ್ಟು ಹೆಚ್ಚಲಿದೆ. ಬತ್ತಿರುವ ಬೋರ್‌ವೆಲ್‌ಗ‌ಳಿಗೆ ರೀ ಬೋರಿಂಗ್‌ ಮಾಡಿಸುವ ಅನಿವಾರ್ಯತೆ ಎದುರಾಗಿದೆ.

ದಿನ ಬಳಕೆಯ ಅಗತ್ಯಗಳಿಗೆ ನೀರು ಪೂರೈಸುವ ಸಂಬಂಧ ಬಿಬಿಎಂಪಿಯು ನಗರದ ಪ್ರಮುಖ ಸ್ಥಳಗಳಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬೋರ್‌ ವೆಲ್‌ಗ‌ಳಲ್ಲಿ ನೀರಿದ್ದರೂ ನಿರ್ವಹಣೆ ಇಲ್ಲದೇ ಕೆಟ್ಟು ಹೋಗಿವೆ ಎಂದು ವಿವಿಧ ಬಡಾವಣೆಗಳ ನಿವಾಸಿಗಳು ಆರೋಪಿಸಿದ್ದಾರೆ.

ಬೆಂಗಳೂರಿಗೆ ಕುಡಿಯಲು ಅಗತ್ಯವಿರುವ ನೀರನ್ನು ಕೆಆರ್‌ಎಸ್‌ನಲ್ಲಿ ಸಂಗ್ರಹಿಸಿ ಮುಂದೆಯೂ ಪೂರೈಕೆ ಮಾಡಲಿದ್ದಾರೆ. 5ನೇ ಹಂತದ ಕಾವೇರಿ ಯೋಜನೆ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಸದ್ಯ ಬೆಂಗಳೂರಿಗರಿಗೆ ಬೇಕಾಗುವಷ್ಟು ನೀರು ಪೂರೈಸಲಾಗುತ್ತಿದೆ. ನೀರಿನ ಸಮಸ್ಯೆಗಳಿದ್ದರೆ ಜಲಮಂಡಳಿ ಗಮನಕ್ಕೆ ತರಬಹುದು. ●ಎನ್‌.ಜಯರಾಮ್‌, ಅಧ್ಯಕ್ಷ, ಜಲಮಂಡಳಿ.

-ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.