ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ
Team Udayavani, Jan 4, 2017, 12:03 PM IST
ಬೆಂಗಳೂರು: ರಾಜ್ಯ ಲಲಿತಕಲಾ ಅಕಾಡೆಮಿಯ 2016ನೇ ಸಾಲಿನ ಸುವರ್ಣ ಗೌರವ ಫೆಲೋಶಿಪ್‌ಗೆ ಹಿರಿಯ ಕಲಾವಿದ ಎಸ್.ಜಿ.ವಾಸುದೇವ್ ಹಾಗೂ ಜೀವಮಾನ ಸಾಧನೆಯ ವಾರ್ಷಿಕ ಗೌರವ ಪ್ರಶಸ್ತಿಗೆ ಮಾರ್ಥ ಝಕಿಮೋವಿಜ್ ಸೇರಿದಂತೆ ಮೂವರನ್ನು ಆಯ್ಕೆ ಮಾಡಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಕಾಡೆಮಿ ಅಧ್ಯಕ್ಷ ಎಂ.ಎಸ್.ಮೂರ್ತಿ, ಜ.23ರಂದು ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಭವನದಲ್ಲಿ ನಡೆಯಲಿರುವ 45ನೇ ವಾರ್ಷಿಕ ಕಲಾ ಪ್ರದರ್ಶನ ಮತ್ತು 2016ನೇ ಸಾಲಿನ “ಗೌರವ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಗೌರವ ಫೆಲೋಶಿಪ್ ನೀಡಲಾಗುವುದು ಎಂದು ಹೇಳಿದರು.
ವಾರ್ಷಿಕ ಗೌರವ ಪ್ರಶಸ್ತಿಗೆ ಹಿರಿಯ ಕಲಾವಿದರಾದ ಮಾರ್ಥ ಝಕಿಮೋವಿಜ್ (ಬೆಂಗಳೂರು), ಬಾಬುರಾವ್ ವಿ.ನಡೋಣಿ (ಬೆಳಗಾವಿ), ಕೆ.ಕೆ.ಮಕಾಳಿ (ಬಳ್ಳಾರಿ) ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ 50 ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.
ಗೌರವ ಫೆಲೋಶಿಪ್‌ಗೆ ಆಯ್ಕೆಯಾದ ಹಿರಿಯ ಕಲಾವಿದರಿಗೆ 2 ಲಕ್ಷ ನಗದು, ಪ್ರಶಸ್ತಿ ಫಲಕ ನೀಡಲಾಗುವುದು. ಆ ಕಲಾವಿದರು 2 ಕಲಾಕೃತಿಗಳನ್ನು ಅಕಾಡೆಮಿಗೆ ಕೊಡುವಂತೆ ಮನವಿ ಮಾಡಿದ್ದು, ಆ ಕಲಾಕೃತಿಗಳನ್ನು ಅಕಾಡೆಮಿಯಲ್ಲಿ ಸಂಗ್ರಹಿಸಿಡಲಾಗುವುದು. ಅಂತೆಯೇ ಫೆಲೋಶಿಪ್ ಪಡೆದ ವಿದ್ಯಾರ್ಥಿಗಳು ಕೂಡ ತಲಾ ಒಂದೊಂದು ಕಲಾಕೃತಿಗಳನ್ನು ಅಕಾಡೆಮಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಕಳೆದ ವರ್ಷ ಕೇವಲ 12 ಕಲಾವಿದರಿಗೆ ಫೆಲೋಶಿಪ್ ನೀಡಲಾಗಿತ್ತು. 2016-17ನೇ ಸಾಲಿನ ಫೆಲೋಶಿಪ್‌ಗಾಗಿ ಈ ಬಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದವರು ಸೇರಿದಂತೆ 22 ಮಂದಿ ಸಂಶೋಧನಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಸಂಶೋಧನಾ ಅಭ್ಯರ್ಥಿಗಳಿಗೆ ಒಂದೇ ಬಾರಿಗೆ ಹಣ ಕೊಡುತ್ತಿದ್ದುದರಿಂದ ದುರ್ಬಳಕೆಯಾ ಗುತ್ತಿತ್ತು. ಈ ಹಿನ್ನೆಲೆಯಲ್ಲಿ ಒಂದು ಲಕ್ಷ ರೂ.ಗಳನ್ನು ಮೂರು ಹಂತಗಳಲ್ಲಿ ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸುವರ್ಣ ಕಲಾ ಸಂಚಾರ್: ರಾಜ್ಯ, ದೇಶದ ಚಾರಿತ್ರಿಕ ಕಲೆಯ ಅಧ್ಯಯನದ ಆಸಕ್ತಿ ಬೆಳೆಸುವ ಸಲುವಾಗಿ ಅಕಾಡೆಮಿಯು ಹೊಸ ಯೋಜನೆ ರೂಪಿಸಿದೆ. “ಸುವರ್ಣ ಕಲಾ ಸಂಚಾರ್’ ಎಂಬ ಈ ವಿಶಿಷ್ಟ ಕಲ್ಪನೆಯಲ್ಲಿ 32 ಯುವ ಕಲಾವಿದರಿಗೆ ತಲಾ 25 ಸಾವಿರ ರೂ. ಧನ ಸಹಾಯ ನೀಡಿ, ಅಜಂತಾ, ಎಲ್ಲೋರಾ, ಖಜುರಾಹೋ, ದಕ್ಷಿಣ ಭಾರತದ ಕಲಾ ದೇಗುಲಗಳು ಮತ್ತು ರಾಜ್ಯದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಹಂಪಿ, ಬಾದಾಮಿ, ಪಟ್ಟದಕಲ್ಲು, ಸನ್ನತಿ (ಚಿತ್ತಾಪುರ), ಸೋಮನಾಥಪುರ ಇತ್ಯಾದಿ ಪ್ರಮುಖ ಕಲಾಕ್ಷೇತ್ರಗಳಿಗೆ ಪ್ರವಾಸ ಮಾಡಿ ಕಲಾಕೃತಿಗಳ ರಚನೆ ಮಾಡುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಜತೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಗ್ರಾಫಿಕ್ ಕಲಾಕೇಂದ್ರವನ್ನು ಸದ್ಯದಲ್ಲೇ ಪ್ರಾರಂಭಿಸುವ ಮೂಲಕ ರಾಜ್ಯದ ಅನೇಕ ಗ್ರಾಫಿಕ್ ಕಲಾವಿದರು ಗ್ರಾಫಿಕ್ ಕೃತಿ ರಚನೆಗೆ ತೊಡಗಲು ಅಕಾಡೆಮಿ ಸಹಕಾರ ನೀಡಲಿದೆ ಎಂದು ಹೇಳಿದರು.
ರಾಷ್ಟ್ರೀಯ ಕಲಾ ಪ್ರದರ್ಶನ
ಅಕಾಡೆಮಿಯು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಕಲಾಪ್ರದರ್ಶನ ಮತ್ತು ಸಂಕ್ರಾಂತಿ ಕಲಾ ಪುರಸ್ಕಾರ-2016 ಕಾರ್ಯ ಕ್ರಮವನ್ನು ಫೆಬ್ರವರಿಯಲ್ಲಿ ಆಯೋಜಿ ಸಲಿದೆ ಎಂದು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಎಂ.ಎಸ್.ಮೂರ್ತಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಾಕೃತಿಗಳನ್ನು ಆಹ್ವಾನಿಸಲಾಗಿದ್ದು, ಜ.25 ಕಲಾಕೃತಿ ಸಲ್ಲಿಕೆಗೆ ಕೊನೆಯ ದಿನ. ಆಯ್ಕೆಯಾದ 16 ಕಲಾಕೃತಿಗಳಿಗೆ ಸುವರ್ಣ ಕಲಾ ಸಂಕ್ರಾಂತಿ ಪುರಸ್ಕಾರ ನೀಡಲಾಗುವುದು.
ರಾಷ್ಟ್ರ ಮಟ್ಟದ ಕಲಾ ಸಾಹಿತ್ಯಕ್ಕೆ ಒಂದು ಲಕ್ಷ ರೂ.ನಗದು ಬಹುಮಾನ ಮತ್ತು ಕನ್ನಡ ಕಲಾ ಸಾಹಿತ್ಯ ಪ್ರೋತ್ಸಾಹಿಸಲು ಅದಕ್ಕೂ ಒಂದು ಲಕ್ಷ ನಗದು ಬಹುಮಾನ ನೀಡಲಾಗುವುದು. ಪ್ರಶಸ್ತಿ ಪಡೆದ ಈ ಸಾಹಿತ್ಯಗಳನ್ನು ಅಕಾಡೆಮಿ ಪ್ರಕಟಿಸಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.