ಕಾರಂತ ಲೇಔಟ್ ಭೂ ಸ್ವಾಧೀನ ಕೈಬಿಡಲಾಗಿದೆ
Team Udayavani, Sep 15, 2017, 11:49 AM IST
ಬೆಂಗಳೂರು: ವಿವಾದಿತ ಶಿವರಾಮ್ ಕಾರಂತ ಬಡಾವಣೆಯಲ್ಲಿ ರಾಜ್ಯ ಸರ್ಕಾರವೇ 1300 ಎಕರೆ ಡಿ ನೋಟಿಫೀಕೇಶನ್ ಮಾಡಿದೆ ಎಂಬ ಆರೋಪ ಕೇಳಿ ಬಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ. ಶಿವರಾಮ್ ಕಾರಂತ ಬಡಾವಣೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗಿರುವ ಸರ್ಕಾರ ಯಾವುದೇ ಡಿ ನೊಟಿಫಿಕೇಶನ್ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಡಾ.ಶಿವರಾಮ್ ಕಾರಂತ ಬಡಾವಣೆ ರಚಿಸಲು ಹಿಂದಿನ ಸರ್ಕಾರ 2008 ರಲ್ಲಿ 3546 ಎಕರೆ ಜಮೀನನ್ನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತ್ತು.
ಉದ್ದೇಶಿತ ಭೂ ಸ್ವಾಧೀನದಲ್ಲಿ 257.20 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಹಿಂದಿನ ಸರ್ಕಾರ 2008 ರಿಂದ 2010 ರ ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿತ್ತು. ಅದರಂತೆ 2012ರಿಂದ 2014 ರ ಅವಧಿಯಲ್ಲಿ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಮಾನದಂಡಗಳಿಗೆ ಅನುಗುಣವಾಗಿ ಬಿಡಿಎ ಭೂಸ್ವಾಧೀನಾಧಿಕಾರಿಗಳು 446.07 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಯೋಜನೆ 2015ರಲ್ಲೇ ಅನೂರ್ಜಿತವಾಗಿದೆ: ಭೂ ಸ್ವಾಧೀನ ಕಾನೂನುಗಳ ಪ್ರಕಾರ ಸ್ವಾಧೀನ ಪ್ರಕ್ರಿಯೆಯು ಪ್ರಾಥಮಿಕ ಅಧಿಸೂಚನೆಯಾದ ಐದು ವರ್ಷಗಳಲ್ಲಿ ಪೂರ್ಣಗೊಳ್ಳಬೇಕು. 2008 ರಿಂದ 13 ರ ವರೆಗೂ ಯೋಜನೆಯನ್ನು ಜಾರಿಗೊಳಿಸಲು ಹಿಂದಿನ ಸರ್ಕಾರ ವಿಳಂಬ ಮಾಡಿರುವುದರಿಂದ ಯೋಜನೆ ವಿಫಲವಾಗಲು ಕಾರಣವಾಗಿದೆ. ಡಾ. ಶಿವರಾಮ್ ಕಾರಂತ ಬಡಾವಣೆಗೆ ಭೂಸ್ವಾಧೀನ ಮಾಡಿರುವುದನ್ನು ಹೈ ಕೋರ್ಟ್‌ನಲ್ಲಿ ನಾಗರಿಕರು ಪ್ರಶ್ನಿಸಿರುವುದರಿಂದ,
ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುವ ಮೂಲಕ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿರುವುದರಿಂದ, ಐತೀರ್ಪು ರಚಿಸುವಲ್ಲಿ, ಹಣ ಪಾವತಿಸುವಲ್ಲಿ ಹಾಗೂ ಜಮೀನನ್ನು ವಶಕ್ಕೆ ಪಡೆಯುವಲ್ಲಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಶಿವರಾಮ್ ಕಾರಂತ ಬಡಾವಣೆ ನಿರ್ಮಾಣ ಯೋಜನೆಯನ್ನು 2015 ಸೆ.2 ರಂದು ಹೈಕೋರ್ಟ್ ಅನೂರ್ಜಿತಗೊಳಿಸಿದೆ ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ದ್ವೀಸದಸ್ಯ ಪೀಠವೂ ರಾಜ್ಯ ಸರ್ಕಾರದ ಮನವಿಯನ್ನು 2017 ರ ಏಪ್ರಿಲ್ 28 ರಂದು ವಜಾಗೊಳಿಸಿದೆ. ಹೈಕೋರ್ಟ್‌ನ ಆದೇಶವನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೈ ಕೋರ್ಟ್ ಆದೇಶದಂತೆ ಡಾ. ಶಿವರಾಮ್ ಕಾರಂತ ಬಡಾವಣೆಗೆ ವಶಪಡಿಸಿಕೊಂಡ ಜನೀನನ್ನು ರೈತರಿಗೆ ಹಿಂದಿರುಗಿಸುವ ಕುರಿತು ಹಿಂಬರಹವನ್ನು ನೀಡಿದೆ. ಹೀಗಾಗಿ ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರ್ಕಾರ 1300 ಎಕರೆ ಭೂಮಿಯನ್ನು ಡಿ ನೊಟಿಫಿಕೇಶನ್ ಮಾಡಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.