ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನ: ತೊಡಕು

Team Udayavani, May 8, 2019, 3:06 AM IST

SHIVRAM-KARANTH-LAYOUT

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನಿಂದ ಜಮೀನು ಕಳೆದುಕೊಳ್ಳಲಿರುವ ಭೂಮಾಲೀಕರು ಮತ್ತು ರೈತರು ಮತ್ತೂಮ್ಮೆ “ಕಾನೂನು ಅಡಕತ್ತರಿ’ಯಲ್ಲಿ ಸಿಕ್ಕಿಕೊಂಡಂತಾಗಿದೆ.

ಸುಪ್ರೀಂ ತೀರ್ಪು ಭೂಮಾಲೀಕರು, ರೈತರು, ಈಗಾಗಲೇ ಮನೆ, ಕಟ್ಟಡಗಳನ್ನು ನಿರ್ಮಿಸಿಕೊಂಡ ನೂರಾರು ಜನರ ಸೇರಿದಂತೆ ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನ ವ್ಯಾಪ್ತಿಯ ಸುಮಾರು 17ಕ್ಕೂ ಹೆಚ್ಚು ಹಳ್ಳಿಗಳಿಗೆ ಸೇರಿದ ಜಮೀನು ಕಳೆದುಕೊಳ್ಳಲಿರುವ ಕುಟುಂಬಗಳು ಮತ್ತೂಂದು ಸುತ್ತಿನ ಕಾನೂನು ಹೋರಾಟ ನಡೆಸುವ ಅನಿವಾರ್ಯತೆಯನ್ನು ತಂದೊಡ್ಡಿದೆ. ಜೊತೆಗೆ ಬೀದಿ ಹೋರಾಟಕ್ಕೆ ಸಜ್ಜಾಗುವಂತೆ ಮಾಡಿದೆ.

ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದ ಸುಪ್ರೀಂಕೋರ್ಟ್‌, ಭೂಸ್ವಾಧೀನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾ. ಕೆ.ಎನ್‌. ಕೇಶವನಾರಾಯಣ ಅವರನ್ನು ನೇಮಿಸಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಈ ಮಧ್ಯೆ ಸುಪ್ರೀಂ ತೀರ್ಪು ಪ್ರಶ್ನಿಸಿ “ಪರಿಹಾರಕ ಅರ್ಜಿ’ (ಕ್ಯುರೇಟಿವ್‌ ಅರ್ಜಿ) ಸಲ್ಲಿಸಲು ಶಿವರಾಮ ಕಾರಂತ ಬಡಾವಣೆ ಸಂತ್ರಸ್ತರ ಹಿತಾರಕ್ಷಣಾ ಸಮಿತಿ ಮುಂದಾಗಿದೆ. ಆದರೆ, ಸುಪ್ರೀಂ ಆದೇಶ ಪಾಲಿಸದೇ ವಿಧಿಯಿಲ್ಲ ಎಂದು ಬಿಡಿಎ ಹೇಳುತ್ತಿದ್ದರೆ, ಭೂಸ್ವಾಧೀನ ವಿರೋಧಿಸಿ ರೈತರ ಪರ ಹೋರಾಟ ಮಾಡಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಕಾನೂನು ಹೋರಾಟದ ಜತೆಗೆ ಬೀದಿ ಹೋರಾಟ ಮಾಡುವ ಎಚ್ಚರಿಕೆ ನೀಡಿದೆ. ಇದರಿಂದಾಗಿ ಭೂಸ್ವಾಧೀನ ಪ್ರಕ್ರಿಯೆ ಮತ್ತೂಂದು ಸುತ್ತಿನ ಕಾನೂನು ಸಂಘರ್ಷಕ್ಕೆ ಮಾಡಿಕೊಟ್ಟಂತಾಗಿದೆ.

ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಕಾಳತಮ್ಮನಹಳ್ಳಿ, ಗುಣೇನ ಅಗ್ರಹಾರ, ಬ್ಯಾಂಕೇರಿ, ಬಿ.ಅಗ್ರಹಾರ, ಸೋಮಶೆಟ್ಟಿ ಹಳ್ಳಿ, ವಡೇರಹಳ್ಳಿ, ರಾಮಗೊಂಡನಹಳ್ಳಿ, ಕೆಂಪಾಪುರ, ದೊಡ್ಡ ಬೆಟ್ಟಹಳ್ಳಿ, ವೀರಸಾಗರ, ಚಿಕ್ಕಬ್ಯಾಲೇಕೆರೆ, ಅವಲಹಳ್ಳಿ, ಜಾರು ಬಂಡೆ ಸೇರಿದಂತೆ ಸುಮಾರು 17 ಹಳ್ಳಿಗಳ ಸಾವಿರಾರು ಜನ ಆತಂಕದಲ್ಲಿದ್ದಾರೆ.

ಸುದೀರ್ಘ‌ ಕಾನೂನು ಹೋರಾಟ: ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಭೂಸ್ವಾಧೀನಕ್ಕೆ ಬಿಡಿಎ 2008ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆದಾದ 10 ವರ್ಷಗಳ ಬಳಿಕ 3,546 ಎಕರೆ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಈ ಮಧ್ಯೆ ರೈತರ ಆಕ್ಷೇಪಣೆ ಹಿನ್ನೆಲೆಯಲ್ಲಿ 257 ಎಕರೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಸರ್ಕಾರ ಬಿಡಿಎಗೆ ಸೂಚಿಸಿತ್ತು.

ಮತ್ತೇ 446 ಎಕರೆ ಜಮೀನು ಭೂಸ್ವಾಧೀನದಿಂದ ಕೈಬಿಡುವಂತೆ ಒತ್ತಾಯ ಕೇಳಿ ಬಂದಿತ್ತು. ಇದರಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. 2012ರಲ್ಲಿ ಈ ವಿಚಾರ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಗೆ ಬಂದು, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿತ್ತು.

ಈ ಮಧ್ಯೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ 5 ವರ್ಷಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿಲ್ಲ ಎಂದು ಆಕ್ಷೇಪಿಸಿ ಕೆಲವು ರೈತರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕಸದಸ್ಯ ಪೀಠ ಹಾಗೂ ವಿಭಾಗೀಯ ಪೀಠ ರೈತರ ಪರ ತೀರ್ಪು ಕೊಟ್ಟಿತ್ತು.

ಇದನ್ನು ಬಿಡಿಎ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ 2018ರಲ್ಲಿ ಸುಪ್ರೀಂ ಹೇಳಿತ್ತು. ಇದನ್ನು ಪ್ರಶ್ನಿಸಿ ಕೆಲವರು ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠ ಮೇಲ್ಮನವಿಗಳನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದೆ.

ಡಾ.ಶಿವರಾಮ ಕಾರಂತ ಬಡಾವಣೆಯ ಜಮೀನು ಸ್ವಾಧೀನ ಪ್ರಕ್ರಿಯೆ ಸಂಬಂಧ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಪಾಲನೆ ಮಾಡಲಾಗುವುದು.
-ರಾಕೇಶ್‌ ಸಿಂಗ್‌, ಬಿಡಿಎ ಆಯುಕ್ತರು.

ಶಿವರಾಮ ಕಾಂರತ ಬಡಾವಣೆಯಲ್ಲಿ 3,542 ಎಕರೆ ಭೂಮಿ ಇದ್ದು, ಆ ಜಾಗದಲ್ಲಿ ಈಗಾಗಲೇ ಸುಮಾರು 15 ರಿಂದ 20 ಸಾವಿರ ಮುಂದಿ ಮನೆ ಕಟ್ಟಿಕೊಂಡಿದ್ದಾರೆ. ಇದರಲ್ಲಿ ಸಣ್ಣ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನ್ಯಾಯಾಲಯದ ಆದೇಶದಿಂದ ಇವರೆಲ್ಲರೂ ಬೀದಿಗೆ ಬರುವ ಆತಂಕದಲ್ಲಿದ್ದು, ಸುಪ್ರೀಂ ಆದೇಶ ಪ್ರಶ್ನಿಸಿ “ಪರಿಹಾರಕ ಅರ್ಜಿ’ ಸಲ್ಲಿಸಲಾಗುವುದು’
-ಬಿ.ಆರ್‌. ನಂಜುಂಡಪ್ಪ, ಅಧ್ಯಕ್ಷರು, ಎಸ್‌ಕೆ ಬಡಾವಣೆ ಸಂತ್ರಸ್ತರ ಹಿತಾರಕ್ಷಣಾ ಸಮಿತಿ.

ಸರ್ಕಾರ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಬಿಡಿಎ ಕಚೇರಿ ಎದುರು ಮತ್ತೆ ಹೋರಾಟ ನಡೆಸಲಾಗುವುದು. ಈ ಪ್ರಕರಣದಲ್ಲಿ ಬಿಡಿಎ ಸುಪ್ರೀಂಕೋರ್ಟ್‌ಗೆ ವಾಸ್ತವ ಸ್ಥಿತಿಯನ್ನು ಮುಚ್ಚಿಟ್ಟು, ತನಗೆ ಅನುಕೂಲವಾಗುವಂತೆ ಮಾಹಿತಿ ನೀಡಿದೆ. ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.
-ಕೋಡಿಹಳ್ಳಿ ಚಂದ್ರಶೇಖರ್‌, ರೈತ ಮುಖಂಡ.

ಟಾಪ್ ನ್ಯೂಸ್

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.