ಭೂ ಅಕ್ರಮ: ಪ್ರಭಾಕರ್ ರೆಡ್ಡಿ ಬಂಧನ
Team Udayavani, Feb 22, 2019, 6:22 AM IST
ಬೆಂಗಳೂರು: ನೂರಾರು ಕೋಟಿ ರೂ. ಮೌಲ್ಯದ ಭೂಮಿ ಕಬಳಿಕೆ ಆರೋಪದ ಮೇಲೆ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಆರ್.ಪ್ರಭಾಕರ್ ರೆಡ್ಡಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಗುರ್ತಿಸಿಕೊಂಡಿದ್ದ ಪ್ರಭಾಕರ್ ರೆಡ್ಡಿ, 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಭೂ ಅಕ್ರಮ ಆರೋಪ ಕುರಿತ ದೂರುಗಳ ಹಿನ್ನೆಲೆಯಲ್ಲಿ ಪ್ರಭಾಕರ್ ರೆಡ್ಡಿಗೆ ಸೇರಿದ ಮೈಲಹಳ್ಳಿ, ರಾಜರಾಜೇಶ್ವರಿ ನಗರ, ಎಚ್‌ಎಸ್‌ಆರ್ ಲೇಔಟ್ ನಿವಾಸಗಳು, ಕೋರಮಂಗಲದ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಜತೆಗೆ, ಆರೋಪಿ ಪ್ರಭಾಕರ್ ರೆಡ್ಡಿಯನ್ನು ಬಂಧಿಸಿದೆ.
ಆರೋಪಿ ಪ್ರಭಾಕರ್ ರೆಡ್ಡಿಯ ನಾಲ್ಕು ನಿವಾಸ ಹಾಗೂ ಕಚೇರಿ ಮೇಲೆ ನಡೆಸಿದ ಕಾರ್ಯಾಚರಣೆ ವೇಳೆ 200ಕ್ಕೂ ಅಧಿಕ ದಾಖಲೆಗಳು ದೊರೆತಿವೆ. ಬ್ಯಾಂಕ್ ದಾಖಲೆಗಳು ಲಭ್ಯವಾಗಿವೆ. ಈತ ನೂರಾರು ಜನರಿಗೆ ವಂಚಿಸಿರುವ ಸಾಧ್ಯತೆಯಿದೆ. ವಂಚನೆಗೊಳಗಾದವರು ಎರಡು ದಿನಗಳಲ್ಲಿ ಸಿಸಿಬಿಗೆ ದೂರು ನೀಡಬಹುದು ಎಂದು ಸಿಸಿಬಿ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿ ಪ್ರಭಾಕರ್ ರೆಡ್ಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಗರದ ವಿವಿಧ ಭಾಗಗಳಲ್ಲಿ ಭೂ ಕಬಳಿಕೆ ಮಾಡಿರುವ ಆರೋಪಗಳಿವೆ. ಈ ಕುರಿತು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು. ಸುಮಾರು 40 ಕ್ಕೂ ಹೆಚ್ಚು ಭೂ ಕಬಳಿಕೆ ಆರೋಪ ಪ್ರಕರಣಗಳಿರುವ ಮಾಹಿತಿಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.