ದೃಷ್ಟಿ ವಿಕಲಚೇತನರಿಗೆ ಮಾತನಾಡುವ ಲ್ಯಾಪ್‌ಟಾಪ್
Team Udayavani, Jan 5, 2018, 11:30 AM IST
ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆ ಅಂಗವಾಗಿ ಬಾಲಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ದೃಷ್ಟಿ ವಿಕಲಚೇತನರಿಗೆ ರಾಜ್ಯ ಸರ್ಕಾರದಿಂದ “ಟಾಕಿಂಗ್ ಲ್ಯಾಪ್‌ಟಾಪ್’ ವಿತರಿಸಲಾಯಿತು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನಾನಾ ಸ್ವಯಂ ಸೇವಾಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬ್ರೈಲ್ ದಿನಾಚರಣೆ ಸಮಾರಂಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಸಾಂಕೇತಿಕವಾಗಿ 50 ಮಂದಿ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಿದರು.
ಈ ಮೂಲಕ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ಕೆ ಚಾಲನೆ ದೊರೆಯಿತು. ಸಮಾರಂಭದಲ್ಲಿ ಮಾತನಾಡಿದ ಇಲಾಖೆ ನಿರ್ದೇಶಕ ಡಾ.ಸಿದ್ದರಾಜು, ವಿಕಲಚೇತನರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದೆ.
ಮಾಸಾಶನ, ವಿದ್ಯಾರ್ಥಿ ವೇತನ, ಪ್ರೋತ್ಸಾಹಧನದ ಜತೆಗೆ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಅವಕಾಶ ಕಲ್ಪಿಸುತ್ತಿದೆ.
ದೃಷ್ಟಿ ವಿಕಲಚೇತನ ತಾಯಂದಿರ ಬಾಣಂತನಕ್ಕೆ ಅನುಕೂಲವಾಗಲೆಂದು ಹೆರಿಗೆ ಬಳಿಕ ಎರಡು ವರ್ಷದವರೆಗೆ ಸಹಾಯಕರ ಸೇವೆ ಬಳಸಿಕೊಳ್ಳಲು ಶಿಶುಪಾಲನಾ ಭತ್ಯೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.
ದೃಷ್ಟಿ ವಿಕಲಚೇತನರು ತಮ್ಮಲ್ಲಿ ನ್ಯೂನತೆ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು. ಭೌತಿಕ ದೃಷ್ಟಿಯಿಲ್ಲದಿದ್ದರೂ ಅಂತಃದೃಷ್ಟಿಯಿಂದಲೇ ಆತ್ಮವಿಶ್ವಾಸದಿಂದ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಸರ್ಕಾರವು ವಿಕಲಚೇತನರನ್ನೂ ರಾಷ್ಟ್ರದ ಸಂಪತ್ತು ಎಂದು ಪರಿಗಣಿಸಿ, ಅಗತ್ಯ ಸೌಲಭ್ಯ ಕಲ್ಪಿಸುತ್ತಿದೆ. ಸೌಲಭ್ಯ ಬಳಸಿಕೊಂಡು ಮುಂದೆ ದೇಶಕ್ಕೆ ಕೊಡುಗೆ ನೀಡುವಷ್ಟರ ಮಟ್ಟಿಗೆ ಸಬಲರಾಗಬೇಕು ಎಂದು ಹೇಳಿದರು.
ಇದೇ ವೇಳೆ ದೃಷ್ಟಿ ವಿಕಲಚೇತನರು ನಡೆಸಿಕೊಟ್ಟ ಗೀತ ಗಾಯನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಧಾರವಾಡದ ಮನಗುಂದಿಯ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮಿ, ಮಾತೃಛಾಯಾ ಸಂಸ್ಥೆಯ ರಾಜ್ಯಶ್ರೀ ಸತೀಶ್, ಪರಶಿವಮೂರ್ತಿ, ಅಮರನಾಥ್ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದಲ್ಲೂ ವಿತರಣೆ: ರಾಜ್ಯದಲ್ಲಿ 1000ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನರು ಎಸ್‌ಎಸ್‌ಎಲ್‌ಸಿ ನಂತರದ ಪದವಿಪೂರ್ವ, ಪದವಿ ಮತ್ತು ಇತರ ಶಿಕ್ಷಣ ಪಡೆಯುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಇಲಾಖೆಯಿಂದ 2016-17ನೇ ಸಾಲಿಗೆ ಸಂಬಂಧಿಸಿದಂತೆ ಉಚಿತವಾಗಿ ಟಾಕಿಂಗ್ ಲ್ಯಾಪ್‌ಟಾಪ್ ನೀಡಲಾಗುತ್ತಿದೆ.
ಟಾಕಿಂಗ್ ಲ್ಯಾಪ್‌ಟಾಪ್ ವಿತರಣೆಗೆ ಇಲಾಖೆಯು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ಮುಂದೆ ಜಿಲ್ಲಾ ಮಟ್ಟದಲ್ಲೂ ವಿತರಿಸಲಿದೆ. ಸುಮಾರು 45,000 ರೂ. ಮೌಲ್ಯದ ಟಾಕಿಂಗ್ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ವಿಶೇಷ ಸಾಫ್ಟ್ವೇರ್: ದೃಷ್ಟಿ ವಿಕಲಚೇತನರು ಸುಲಭವಾಗಿ ಬಳಸಲು ಅನುಕೂಲವಾಗುವಂತೆ ಟಾಕಿಂಗ್ ಲ್ಯಾಪ್‌ಟಾಪ್‌ನಲ್ಲಿ ವಿಶೇಷ ಸಾಫ್ಟ್ವೇರ್ ಅಳವಡಿಸಲಾಗಿದೆ. ಇದರಿಂದ ಇ-ಮೇಲ್ ಸೇರಿದಂತೆ ಇತರೆ ಸಂದೇಶಗಳು ರವಾನೆಯಾದಾಗ ಅಲರ್ಟ್ ಸಂದೇಶ ಮೊಳಗಲಿದೆ.
ಅಲ್ಲದೆ, ಧ್ವನಿ ಸಂಕೇತಗಳ ಮೂಲಕ ಸುಲಭವಾಗಿ ಬಳಸಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯಬಿದ್ದರೆ ದೃಷ್ಟಿ ವಿಕಲಚೇತನರಿಗೆ ಟಾಕಿಂಗ್ ಲ್ಯಾಪ್‌ಟಾಪ್ ಬಳಕೆ ಬಗ್ಗೆಯೂ ತಿಳಿಸಿಕೊಡಲಾಗುವುದು ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.