ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Team Udayavani, Jul 7, 2019, 3:05 AM IST
ಬೆಂಗಳೂರು: ದೇಶಾದ್ಯಂತ ಆರಂಭಗೊಂಡ ಬಿಜೆಪಿಯ ಸದಸ್ಯತ್ವ ಅಭಿಯಾನಕ್ಕೆ ರಾಜ್ಯದಲ್ಲೂ ಶನಿವಾರ ಚಾಲನೆ ದೊರೆಯಿತು. ಆಗಸ್ಟ್ 11ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ 50 ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ.
ಜಯನಗರದ ವಾಣಿಜ್ಯ ಸಂಕೀರ್ಣದಲ್ಲಿ ಬಿಜೆಪಿ ನಗರ ಘಟಕ ಶನಿವಾರ ಹಮ್ಮಿಕೊಂಡಿದ್ದ “ಸಂಘಟನಾ ಪರ್ವ-ಸದಸ್ಯತಾ ಅಭಿಯಾನ’ದಲ್ಲಿ ಆಟೋ ಚಾಲಕರು, ಪೌರಕಾರ್ಮಿಕರು, ಸೆಕ್ಯುರಿಟಿ ಗಾರ್ಡ್‌ನಿಂದ ಹಿಡಿದು ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಸಾಧಕರಿಗೆ ಬಿಜೆಪಿಯ ಸದಸ್ಯತ್ವ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ವಿ.ಮುರಳೀಧರನ್, “ರಾಜ್ಯದಲ್ಲಿ ಈಗಾಗಲೇ 83 ಲಕ್ಷ ಜನ ಸದಸ್ಯತ್ವಕ್ಕೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈಗ ಇನ್ನೂ 50 ಲಕ್ಷ ಜನರ ನೋಂದಣಿ ಗುರಿಯನ್ನು ಬಿಜೆಪಿ ಹೊಂದಿದ್ದು, ಸಮಾಜದ ಪ್ರತಿಯೊಂದು ಕ್ಷೇತ್ರದ ಜನರನ್ನು ಈ ಅಭಿಯಾನದ ಮೂಲಕ ತಲುಪಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರ ಶ್ರಮ ತುಂಬಾ ಮುಖ್ಯ ಎಂದರು.
“ಸ್ವಚ್ಛ ಭಾರತ ನಮ್ಮ ಮುಖ್ಯ ಗುರಿ. ಈ ದಿಸೆಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದನ್ನು ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸ ಆಗಬೇಕು. ದಕ್ಷಿಣ ಭಾರತ, ಅದರಲ್ಲೂ ಕರ್ನಾಟಕದಿಂದ ಹೆಚ್ಚು ಸದಸ್ಯತ್ವದ ನಿರೀಕ್ಷೆ ಇದೆ. ಲೋಕಸಭಾ ಚುನಾವಣೆ ವೇಳೆ ದಕ್ಷಿಣ ಭಾರತದಲ್ಲಿ ಬಿಜೆಪಿ ತುಂಬಾ ದುರ್ಬಲ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 26 ಸ್ಥಾನಗಳನ್ನು ಬಿಜೆಪಿ ಬಾಚಿಕೊಳ್ಳುವ ಮೂಲಕ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಮಾಜಿ ಪ್ರಧಾನಿ ಕೂಡ ಸೋಲನ್ನು ಅನುಭವಿಸಬೇಕಾಯಿತು ಎಂದು ಹೇಳಿದರು.
ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಎತ್ತಿ ಹಿಡಿದ ಏಕೈಕ ಪಕ್ಷ ಬಿಜೆಪಿ. ಕಾಂಗ್ರೆಸ್, ಜೆಡಿಎಸ್, ಆರ್‌ಜೆಡಿ, ಬಿಎಸ್‌ಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲೂ ವಂಶಪಾರಂಪರ್ಯ ಕಾಣಬಹುದು. ಆದರೆ, ಬಿಜೆಪಿ ಮಾತ್ರ ನಿಜವಾದ ಪ್ರಜಾಪ್ರಭುತ್ವ ಪಾಲಿಸುತ್ತಿದೆ. ಜಾತಿ, ಕೋಮುವಾದ ಇಲ್ಲಿಲ್ಲ. ಭಾರತವನ್ನು ಪ್ರೀತಿಸುವವರೆಲ್ಲರೂ ಬಿಜೆಪಿ ಇಷ್ಟಪಡುತ್ತಾರೆ ಎಂದರು.
ಮಾಜಿ ಸಚಿವರಾದ ರಾಮಚಂದ್ರಗೌಡ, ಮುರುಗೇಶ್ ನಿರಾಣಿ, ಸಂಸದರಾದ ತೇಜಸ್ವಿ ಸೂರ್ಯ, ಪ್ರಭಾಕರ ಕೋರೆ, ಶಾಸಕ ರವಿ ಸುಬ್ರಮಣ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧಾ, ಬಿಜೆಪಿ ವಕ್ತಾರೆ ಮಾಳವಿಕ ಅವಿನಾಶ್ ಮತ್ತಿತರರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ನನಗೆ ಬಿಜೆಪಿ ಸದಸ್ಯತ್ವ ನೀಡಿದ್ದು ಆಟೋ ಚಾಲಕ: “ಒಬ್ಬ ಆಟೋ ಚಾಲಕ ನನಗೆ ಬಿಜೆಪಿ ಸದಸ್ಯತ್ವ ನೀಡಿದ್ದ. ಅದರ ಪ್ರತಿಫಲವೇ ಇಂದು ನಾನು ನಿಮ್ಮೆಲ್ಲರ ಮುಂದೆ ನಿಂತು ಮಾತನಾಡುತ್ತಿದ್ದೇನೆ’ ಎಂದು ಮಾಜಿ ಸಚಿವ ಸಿ.ಟಿ.ರವಿ ಮೆಲುಕುಹಾಕಿದರು. 1988ರಲ್ಲಿ ಇಂತಹದ್ದೇ ಸದಸ್ಯತ್ವ ಅಭಿಯಾನವೊಂದರಲ್ಲಿ ಚಂದ್ರು ಎಂಬ ಆಟೋ ಚಾಲಕ ನನಗೆ ಸದಸ್ಯತ್ವ ನೀಡಿದ್ದ. ಈಗಲೂ ಆ ಚಂದ್ರು ಇದ್ದಾನೆ. ಆತ ನೀಡಿದ ಸದಸ್ಯತ್ವದ ಪರಿಣಾಮ ಇಂದು ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಸ್ಮರಿಸಿದರು.
ಬಿಜೆಪಿ ಸದಸ್ಯತ್ವ ಸ್ವೀಕರಿಸಿದ ಅಂಜು ಬಾಬಿ ಜಾರ್ಜ್: ನಗರದಲ್ಲಿ ಸಂಘಟನಾ ಪರ್ವ- ಸದಸ್ಯತಾ ಅಭಿಯಾನದಲ್ಲಿ ಮಾಜಿ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ಬಿಜೆಪಿ ಸದಸ್ಯತ್ವ ಸ್ವೀಕರಿಸಿದರು. ಕೇಂದ್ರ ಸಚಿವ ವಿ.ಮುರಳೀಧರನ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ಅವರಿಗೆ ಪಕ್ಷದ ಶಾಲು ಹೊದಿಸಿ ಸದಸ್ಯತ್ವ ನೀಡಿ ಬರಮಾಡಿಕೊಂಡರು. ಅಂದ ಹಾಗೆ ಅಂಜು ಬಾಬಿ ಜಾರ್ಜ್ ಈ ಹಿಂದೆ ಒಲಿಂಪಿಕ್‌ನಲ್ಲಿ ಉದ್ದ ಜಿಗಿತದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಇದೇ ವೇಳೆ, ನಿವೃತ್ತ ಏರ್ ಮಾರ್ಷಲ್ ಮುರಳಿ ಹಾಗೂ ಇನ್ಫೋಸಿಸ್ ಉಪಾಧ್ಯಕ್ಷ ಪಾರ್ಥಸಾರಥಿ ಸದಸ್ಯತ್ವ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.