ನಗರದಲ್ಲಿ ಜೆಡಿಎಸ್ ವಿಕಾಸಪರ್ವಕ್ಕೆ ಚಾಲನೆ
Team Udayavani, Mar 7, 2018, 12:33 PM IST
ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಬಿಬಿಎಂಪಿಯಲ್ಲಿ ಆಡಳಿತ ನಡೆಸಿದಾಗ ನಡೆದ ಹಗರಣಗಳು, ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಜನಜಾಗೃತಿ ಮೂಡಿಸಿ ಜೆಡಿಎಸ್‌ನ ಸಾಧನೆ ಜನರಿಗೆ ತಲುಪಿಸುವ “ವಿಕಾಸ ಪರ್ವ’ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ನಗರದ 28 ವಿಧಾನಸಭೆ ಕ್ಷೇತ್ರಗಳಲ್ಲಿ ನಿರಂತರವಾಗಿ ನಡೆಯಲಿರುವ ಯಾತ್ರೆಯನ್ನು ಬಸವನಗುಡಿಯ ದೊಡ್ಡ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಆರಂಭಿಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂದ್ಯಾ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕ ಗೋಪಾಲಯ್ಯ, ಮುಖಂಡರಾದ ಬಾಗೇಗೌಡ, ಪ್ರಕಾಶ್, ಚಂದ್ರಶೇಖರ್, ರಮೇಶ್‌ಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿ ಕರಪತ್ರ, ಸಾಧನೆ ಹಾಗೂ ಪ್ರಣಾಳಿಕೆಯ ಘೋಷಣೆಗಳ ಕೈಪಿಡಿ ಹಂಚಿದರು.
ಈ ವೇಳೆ ಮಾತನಾಡಿದ ಪಿ.ಜಿ.ಆರ್.ಸಿಂದ್ಯಾ, ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಕೆಸೆರೆರೆಚಾಟದಲ್ಲಿ ನಿರತವಾಗಿವೆ. ಎರಡೂ ಪಕ್ಷಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿಲ್ಲ. ನಗರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡದೆ ಪರ್ಸಂಟೇಜ್ ಆರೋಪಗಳಲ್ಲಿ ತೊಡಗಿದ್ದಾರೆ ಎಂದು ದೂರಿದರು.
ದೇವೇಗೌಡರು, ಕುಮಾರಸ್ವಾಮಿಯವರು ಬೆಂಗಳೂರು ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು ಹಾಗೂ ಮುಂದೆ ಅಧಿಕಾರಕ್ಕೆ ಬಂದರೆ ಜೆಡಿಎಸ್‌ನ ಕಾರ್ಯಕ್ರಮಗಳೇನು ಎಂಬುದನ್ನು ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.
ರೈತರ ಜಮೀನು ಗುಳುಂ ಮಾಡಿ ಪರಿಹಾರ ಕೊಡದ ಆರೋಪ ಎದುರಿಸುತ್ತಿರುವ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದು ನಾಚೀಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬೆಂಗಳೂರಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆದಿವೆ. ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಬಿಜೆಪಿ ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ಬಿಜೆಪಿ ಹಾಗೂ ಕಾಂಗ್ರೆಸ್‌ನವರು ಬೆಂಗಳೂರು ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.