ಶಿಕ್ಷಣ, ಕೌಶಲ್ಯ ಕುರಿತ ಸಮ್ಮೇಳನಕ್ಕೆ ಚಾಲನೆ
Team Udayavani, Sep 24, 2019, 3:05 AM IST
ಬೆಂಗಳೂರು: ಶೈಕ್ಷಣಿಕ ಮತ್ತು ಕೌಶಲ್ಯಗಳ ವಿಚಾರ ವಿನಿಮಯಕ್ಕೆ ವೇದಿಕೆಯಾದ ಏಷಿಯನ್ ಸಮಿಟ್ ಆಫ್ ಎಜುಕೇಷನ್ ಆಂಡ್ ಸ್ಕಿಲ್ಸ್ (ಎಎಸ್‌ಇಎಸ್) ಆರನೇ ಆವೃತ್ತಿಗೆ ಸೋಮವಾರ ನಗರದಲ್ಲಿ ಚಾಲನೆ ದೊರೆಯಿತು.
ಮೇಳದಲ್ಲಿ ದೇಶ-ವಿದೇಶಗಳ ಕೌಶಲ್ಯ ಮತ್ತು ಶಿಕ್ಷಣ ತಜ್ಞರು, ಶೈಕ್ಷಣಿಕ ಉಪಕರಣಗಳನ್ನು ತಯಾರಿಸುವ ಉದ್ಯಮಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಒಂದೇ ಸೂರಿನಡಿ ಬಂದು, ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಪ್ರಸ್ತುತ ಇರುವ ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಪಾಡುಗಳು ಅಥವಾ ಉತ್ತಮ ಕ್ರಮಗಳಿದ್ದರೆ ಅವುಗಳನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಶೈಕ್ಷಣಿಕ ಕೊಡುಕೊಳ್ಳುವಿಕೆ ಪ್ರಕ್ರಿಯೆ ನಡೆಯಿತು.
ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸಮ್ಮೇಳನಕ್ಕೆ ಚಾಲನೆ ನೀಡಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿಚಾರ ವಿನಿಮಯಕ್ಕೆ ಈ ಮೇಳವು ಸೂಕ್ತ ವೇದಿಕೆ ಆಗಿದೆ ಎಂದು ವಿಶ್ಲೇಷಿಸಿದರು.
ಮಕ್ಕಳಿಗೆ ಶಿಕ್ಷಣವೊಂದೇ ಮುಖ್ಯವಾಗಬಾರದು. ಭವಿಷ್ಯದ ನಿರ್ಮಾಣವೂ ಮುಖ್ಯವಾಗಬೇಕು. ಶಿಕ್ಷಣದಿಂದಲೇ ಜ್ಞಾನ, ಕೌಶಲ್ಯ, ಸಾಮಾಜಿಕ ಸುಧಾರಣೆ. ಆದರೆ, ಈಗಿನ ಸ್ಥಿತಿ ನೋಡಿದರೆ, ನಿರೀಕ್ಷಿತ ಮಟ್ಟದಲ್ಲಿ ಸುಧಾರಣೆ ತರಲು ಶಿಕ್ಷಣ ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಹಾಗಿದ್ದರೆ, ಆಗಬೇಕಾಗಿರುವ ಮಾರ್ಪಾಡುಗಳ ಬಗ್ಗೆ ಎಲ್ಲರೂ ಒಗ್ಗೂಡಿ ಇಲ್ಲಿ ಚರ್ಚೆ ನಡೆಸಲಿದ್ದಾರೆ ಎಂದರು.
ಉದ್ಯಮಿಗಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರೆಲ್ಲರಿಗೂ ಇದರಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರದ ನೀತಿ ಆಯೋಗ, ಮಾನವ ಸಂಪನ್ಮೂಲ ಇಲಾಖೆ, ಕೌಶಲ್ಯ ಭಾರತ, ರಾಜ್ಯದ ಶಿಕ್ಷಣ ಇಲಾಖೆ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಇದು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಇಂಡಿಯಾ ಡೈಡಾಕ್ಟಿಸ್ ಅಸೋಸಿಯೇಷನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಿತ್ಯ ಗುಪ್ತ ಮತ್ತಿತರರು ಉಪಸ್ಥಿತರಿದ್ದರು.
ಪ್ರದರ್ಶನಕ್ಕೆ ಇಂದು ಸಿಎಂ ಚಾಲನೆ: ಶಿಕ್ಷಣ ಮತ್ತು ತರಬೇತಿ ಸಂಪನ್ಮೂಲಗಳಿಗೆ ಸಂಬಂಧಿಸಿದ ಏಷಿಯಾದ ಬೃಹತ್ ಪ್ರದರ್ಶನ ಮತ್ತು ಸಮ್ಮೇಳನ ನಗರದ ಹೊರವಲಯದಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಸಿಐಸಿ)ದಲ್ಲಿ ಮಂಗಳವಾರ ನಡೆಯಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಇತ್ತೀಚಿನ ಮತ್ತು ವಿನೂತನ ಉತ್ಪನ್ನಗಳು, ಶೈಕ್ಷಣಿಕ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಯತ್ನ ಇದರಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದಕ್ಕೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.