ವಕೀಲೆ ಸಾವು ಪ್ರಕರಣ: ಸಿಬಿಐಗೆ ವಹಿಸಲು ಅರ್ಜಿ
Team Udayavani, Feb 7, 2019, 5:58 AM IST
ಬೆಂಗಳೂರು: ವಕೀಲೆ ಎಸ್.ಧರಣಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ಗೃಹ ಇಲಾಖೆಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ. ಎಲ್.ನಾರಾ ಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ವೈಟ್ಫೀಲ್ಡ್ ಎಸಿಪಿ, ಮಹದೇವಪುರ ಪೊಲೀಸ್ ಠಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೂ ನೋಟಿಸ್ ಜಾರಿ ಗೊಳಿಸುವಂತೆ ನ್ಯಾಯಪೀಠ ಆದೇಶಿಸಿದೆ. ವಕೀಲೆ ಧರಣಿ ಅವರು 2018ರ ಡಿ. 31ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ವಕೀಲೆ ಧರಣಿ ವಾಸವಿದ್ದ ಮನೆ ಕಬಳಿಸಲು ಸ್ಥಳೀಯ ಪಾಲಿಕೆ ಸದಸ್ಯ ಸುರೇಶ್ ಹಾಗೂ ಆತನ ಸಹಚರರು ಕೊಲೆ ಬೆದರಿಕೆ ಹಾಕಿದ್ದರು. ಅವರ ಮನಗೆ ನುಗ್ಗಿ ಹಲ್ಲೆಯನ್ನೂ ನಡೆಸಲಾಗಿತ್ತು. ಇದರಿಂದಾಗಿ ಧರಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಸಂಘದ ಆರೋಪವಾಗಿದೆ.
ಕೋರಿಕೆ ಏನು?: ಧರಣಿ ಪರಿಶಿಷ್ಟ ಜಾತಿಗೆ ಸೇರಿದ ವಕೀಲೆ. ಅವರ ಸಾವಿಗೆ ಸ್ಥಳೀಯ ಪಾಲಿಕೆ ಸದಸ್ಯ ಸುರೇಶ್ ಮೂಲ ಕಾರಣ. ಸುರೇಶ್ ರಾಜಕೀಯ ಪ್ರಭಾವ ಹೊಂದಿದ್ದು ಪೊಲೀಸರು ಅವರ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ. ಸರ್ಕಾರ ಆದ್ಯತೆಯ ಮೇರೆಗೆ ಈ ಪ್ರಕರಣದ ವಿಚಾರಣೆಗೆ ಮುಂದಾಗ ಬೇಕಿತ್ತು. ಆದರೆ, ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಧರಣಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.