ಮಣಿಪಾಲ್ ಆಸ್ಪತ್ರೆಯಿಂದ ದಾರಿ ಬಿಡಿ, ಜೀವ ಉಳಿಸಿ ಅಭಿಯಾನ
Team Udayavani, Jan 9, 2018, 12:31 PM IST
ಬೆಂಗಳೂರು: ಅಪಘಾತ ಇಲ್ಲವೇ ಆರೋಗ್ಯದಲ್ಲಿ ದಿಢೀರ್ ಏರುಪೇರಾದಾಗ “ಸುವರ್ಣ ಘಳಿಗೆ’ ಅವಧಿಯೊಳಗೆ ತುರ್ತು ಚಿಕಿತ್ಸೆ ಕಲ್ಪಿಸಲು ಆ್ಯಂಬುಲೆನ್ಸ್‌ಗೆ “ದಾರಿ ಬಿಡಿ, ಜೀವ ಉಳಿಸಿ’ ಅಭಿಯಾನಕ್ಕೆ ಮಣಿಪಾಲ್ ಆಸ್ಪತ್ರೆ ಸೋಮವಾರ ಚಾಲನೆ ನೀಡಿದೆ.
ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವಿಶ್ವ ಆ್ಯಂಬುಲೆನ್ಸ್ ದಿನದ ಅಂಗವಾಗಿ ದಿವಂಗತ ನ್ಯಾಯಮೂರ್ತಿ ವಿ.ಎಸ್.ಮಳೀಮs… ಹೆಸರಿನಲ್ಲಿ ಆರಂಭಿಸಿರುವ ತುರ್ತು ಚಿಕಿತ್ಸೆಗಾಗಿ ಉಚಿತ ಆ್ಯಂಬುಲೆನ್ಸ್ ಸೇವೆಗೆ ಹೈಕೋರ್ಟ್ ನ್ಯಾಯಮೂರ್ತಿ ರವಿ ಮಳೀಮs… ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಪಘಾತ ಇಲ್ಲವೇ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದಾಗ ತುರ್ತು ಚಿಕಿತ್ಸೆ ಅತ್ಯವಶ್ಯಕವಾಗಿರುತ್ತದೆ. ಜೀವರಕ್ಷಕ ಅವಧಿಯಲ್ಲಿ ಸೂಕ್ತ ಚಿಕಿತ್ಸೆ ದೊರೆತರೆ ಗಾಯಾಳು, ರೋಗಿ ಬದುಕುಳಿಯುವ ಸಾಧ್ಯತೆ ಪ್ರಮಾಣ ಹೆಚ್ಚು ಇರುತ್ತದೆ. ಪ್ರತಿಯೊಂದು ಅಮೂಲ್ಯ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಅಭಿಯಾನ ಸಹಕಾರಿಯಾಗಲಿದೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ರೋಗಿಯೊಬ್ಬರ ಹೆಸರಿನಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಜತೆಗೆ ಎಲ್ಲ ಹಂತದ ಸೇವೆಯೂ ಪರಿಣಾಮಕಾರಿಯಾಗಿ ಸಿಗುತ್ತಿದೆ. ಇದರಿಂದಾಗಿಯೇ ಮಣಿಪಾಲ್ ಆಸ್ಪತ್ರೆಯು ಉತ್ತಮ ಆಸ್ಪತ್ರೆಗಿಂತ “ಶ್ರೇಷ್ಠ ಆಸ್ಪತ್ರೆ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ತುರ್ತು ಚಿಕಿತ್ಸೆಗಾಗಿ ಉಚಿತ ಆ್ಯಂಬುಲೆನ್ಸ್ ಸೇವೆ ಕಲ್ಪಿಸಿರುವುದು ಆಸ್ಪತ್ರೆಯ ಸೇವಾ ಮನೋಭಾವವನ್ನು ತೋರಿಸುತ್ತದೆ ಎಂದು ತಿಳಿಸಿದರು. ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸುದರ್ಶನ ಬಲ್ಲಾಳ್ ಮಾತನಾಡಿ, ಅಪಘಾತ ಸಂಭವಿಸಿದಾಗ ಇಲ್ಲವೇ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದಾಗ ತುರ್ತು ಚಿಕಿತ್ಸೆ ಅಗತ್ಯವಿರುತ್ತದೆ.
ಹಾಗಾಗಿ ಆ್ಯಂಬುಲೆನ್ಸ್‌ನಲ್ಲಿ ಸಕಾಲದಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ಕೊಡಿಸಿದರೆ ಅಮೂಲ್ಯ ಜೀವಗಳು ಬದುಕುಳಿಯುವ ಸಾಧ್ಯತೆ ಶೇ.70ರಿಂದ ಶೇ.80ರಷ್ಟಿರುತ್ತದೆ. ಹಾಗಾಗಿ ರೋಗಿಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳನ್ನು ಹಿಂಬಾಲಿಸದೆ ಆ್ಯಂಬುಲೆನ್ಸ್‌ಗೆ “ದಾರಿ ಬಿಡಿ ಜೀವ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಯಾವುದೇ ಆಸ್ಪತ್ರೆಗೆ ತೆರಳಿ: ಈ ಹಿಂದೆ ಅಂದರೆ 2015ರಲ್ಲಿ ಮಣಿಪಾಲ್ ಆ್ಯಂಬುಲೆನ್ಸ್ ರೆಸ್ಪಾನ್ಸ್ ಸರ್ವಿಸ್ (ಎಂಎಆರ್‌ಎಸ್) ಸೇವೆ ಆರಂಭಿಸಲಾಗಿತ್ತು. ಸದ್ಯ ಬೆಂಗಳೂರಿನಲ್ಲಿ ಆಸ್ಪತ್ರೆಯ 26 ಆ್ಯಂಬುಲೆನ್ಸ್‌ಗಳಿದ್ದು, ಇದರಲ್ಲಿ 18 ಮಿನಿ ಐಸಿಯು ಸೌಲಭ್ಯ ಹೊಂದಿದ್ದರೆ ಉಳಿದ 8 ಸಾಧಾರಣ ಆ್ಯಂಬುಲೆನ್ಸ್‌ಗಳಾಗಿವೆ. ಅಪಘಾತ ಇಲ್ಲವೇ ಹೃದಯಾಘಾತ ಇತರೆ ಸಮಸ್ಯೆ ಕಾಣಿಸಿಕೊಂಡಾಗ ಉಚಿತವಾಗಿ ಆ್ಯಂಬುಲೆನ್ಸ್ ಸೇವೆ ಪಡೆಯಬಹುದು. ಮಣಿಪಾಲ್ ಆಸ್ಪತ್ರೆಯಲ್ಲದೆ ಸಮೀಪದ ಯಾವುದೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಆ್ಯಂಬುಲೆನ್ಸ್ ಸೇವೆ ಪಡೆಯಬಹುದು ಎಂದು ಡಾ.ಸುದರ್ಶನ ಬಲ್ಲಾಳ್ ಹೇಳಿದರು.
ಐಸಿಯು ವ್ಯವಸ್ಥೆ: ಗಾಯಾಳು ಇಲ್ಲವೇ ರೋಗಿಗೆ ಆ್ಯಂಬುಲೆನ್ಸ್‌ನಲ್ಲೇ ಐಸಿಯು ವ್ಯವಸ್ಥೆಯಡಿ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯ ಘಟಕದಲ್ಲಿನ ತಜ್ಞರು ನಿರಂತರವಾಗಿ ಆ್ಯಂಬುಲೆನ್ಸ್‌ನಲ್ಲಿರುವ ಅರೆವೈದ್ಯ ಸಿಬ್ಬಂದಿಗೆ ಮಾರ್ಗದರ್ಶನ ನೀಡುತ್ತಿರುತ್ತಾರೆ. ಜತೆಗೆ ನಂತರದ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ರೋಗಿ ಆಸ್ಪತ್ರೆ ತಲುಪುತ್ತಿದ್ದಂತೆ ತುರ್ತು ಚಿಕಿತ್ಸೆ ಕೊಡಲು ನೆರವಾಗಲಿದೆ.
ಆಸ್ಪತ್ರೆಗೆ ಕರೆ ಮಾಡಿ ಉಚಿತ ಆ್ಯಂಬುಲೆನ್ಸ್ ಬಳಸಿಕೊಳ್ಳಬಹುದು. ತುರ್ತು ಚಿಕಿತ್ಸೆಗಷ್ಟೇ ಉಚಿತ ಸೇವೆ ಪಡೆಯಬೇಕೆ ಹೊರತು ದುಬಳìಕೆ ಮಾಡಿಕೊಳ್ಳಬಾರದು. ಬೆಂಗಳೂರು ಮಾತ್ರವಲ್ಲದೇ ಮಂಗಳೂರು, ವಿಜಯವಾಡದಲ್ಲೂ ಈ ಸೇವೆ ಆರಂಭಿಸಲು ಚಿಂತಿಸಲಾಗಿದೆ ಎಂದು ಡಾ.ಸುದರ್ಶನ ಬಲ್ಲಾಳ್ ತಿಳಿಸಿದರು.
ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಸಿಇಒ ದಿಲೀಪ್ ಭೋಸ್ ಮಾತನಾಡಿ, ಸಂಸ್ಥೆಯು ಮೂರು ವರ್ಷದ ಹಿಂದೆಯೇ “ಎಂಎಆರ್‌ಎಸ್’ ಸೇವೆಗೆ ಚಾಲನೆ ನೀಡಿದ್ದು, ಈವರೆಗೆ 12,000ಕ್ಕೂ ಹೆಚ್ಚು ಮಂದಿಗೆ ತುರ್ತು ಚಿಕಿತ್ಸೆಗೆ ಸ್ಪಂದಿಸಲಾಗಿದೆ. ಮುಂದೆಯೂ ಅಮೂಲ್ಯ ಜೀವ ಉಳಿಸುವುದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಮಣಿಪಾಲ್ ಆಸ್ಪತ್ರೆಗಳ ಸಮೂಹ ವೈದ್ಯಕೀಯ ನಿರ್ದೇಶಕ ಡಾ.ನಾಗೇಂದ್ರಸ್ವಾಮಿ ಉಪಸ್ಥಿತರಿದ್ದರು.
ಅಸ್ವಸ್ಥಗೊಂಡವರು, ಗಾಯಾಳುಗಳನ್ನು ಕರೆದೊಯ್ಯುವ ಆ್ಯಂಬುಲೆನ್ಸ್‌ಗೆ ದಾರಿ ಕೊಡುವ ಸಂವೇದನೆಯನ್ನು ಪ್ರತಿಯೊಬ್ಬ ವಾಹನ ಸವಾರರು, ಚಾಲಕರು ಬೆಳೆಸಿಕೊಳ್ಳಬೇಕು. ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಸಂಸ್ಥೆಯು ಈ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನದ ಜತೆಗೆ ಉಚಿತ ಆ್ಯಂಬುಲೆನ್ಸ್ ಸೇವೆ ಆರಂಭಿಸಿರುವುದು ಸ್ವಾಗತಾರ್ಹ.
-ಶ್ರದ್ಧಾ ಶ್ರೀನಾಥ್, ನಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.