ಭಾನುವಾರದ ಆಂಗ್ಲ ತರಗತಿಗೆ ಉಪನ್ಯಾಸಕರ ಅಸಮಾಧಾನ
Team Udayavani, Aug 6, 2017, 11:48 AM IST
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇಂದಿನಿಂದ (ಆ. 6) ಸುಮಾರು 25 ಭಾನುವಾರಗಳ ಕಾಲ ಆಂಗ್ಲ ಭಾಷಾ ವಿಷಯದಲ್ಲಿ ವ್ಯಾಕರಣ ಮತ್ತು ಮಾತನಾಡುವ ಕೌಶಲ್ಯ ಉತ್ತಮ ಗೊಳಿಸಲು ವಿಶೇಷ ತರಗತಿ ನಡೆಸಲು ಮುಂದಾಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ಧಾರವು ಉಪನ್ಯಾಸಕರ ಅಸಮಧಾನಕ್ಕೆ ಕಾರಣವಾಗಿದೆ.
ಸರ್ಕಾರದ ಈ ಯೋಜನೆ ಚೆನ್ನಾಗಿದೆ. ಆದರೆ, ಭಾನುವಾರವೂ 3 ಗಂಟೆ ತರಗತಿ ನಡೆಸಬೇಕು ಎಂಬ ನಿಯಮ ಸರಿಯಲ್ಲ. ವಾರದಲ್ಲಿ ಸಿಗುವ ಒಂದು ರಜೆಯೂ ಹೀಗೆ ಕಳೆದು ಹೋದರೆ, ಕುಟುಂಬ ಹಾಗೂ ನಮ್ಮ ಆರೋಗ್ಯದ ಬಗ್ಗೆ ಗಮನ ನೀಡುವುದು ಬೇಡವೇ? ಒಂದೆರೆಡು ವಾರವಾದರೆ ಪರವಾಗಿಲ್ಲ. ಸುಮಾರು 25 ಭಾನುವಾರ ನಿರಂತರ ತರಗತಿ ನಡೆಸುವುದು ಸುಲಭವಲ್ಲ. ಹೀಗಾಗಿ ಈ ವಿಚಾರವಾಗಿ ಯಾವೊಬ್ಬ ಉಪನ್ಯಾಸಕರನ್ನು ಇಲಾಖೆ ಒತ್ತಾಯ ಮಾಡಬಾರದು ಎಂದು ಉಪನ್ಯಾಸಕರು ಆಗ್ರಹಿಸಿದ್ದಾರೆ.
ಸರ್ಕಾರದ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಭಾನುವಾರ ನಡೆಸುವ ಬದಲು ನಿತ್ಯದ ತರಗತಿಯಲ್ಲೇ ಅದನ್ನು ಸರಿದೂಗಿಸಬೇಕು. ಬೆಳಗ್ಗೆ ಮತ್ತು ಸಂಜೆ ಒಂದೊಂದು ಗಂಟೆ ಹೆಚ್ಚುವರಿಯಾಗಿ ತೆಗೆದುಕೊಂಡು ಈ ತರಬೇತಿ ಮಾಡಬಹುದಲ್ಲವೇ ಎಂದು ಉಪನ್ಯಾಸಕರು ಪ್ರಶ್ನಿಸಿದ್ದಾರೆ. ತರಬೇತಿಗೆ ಉಪನ್ಯಾಸಕರನ್ನು ಒತ್ತಾಯಿಸಬಾರದು ಎಂದು 30 ಜಿಲ್ಲೆಯಿಂದಲೂ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ.
ಸ್ವ ಇಚ್ಛೆಯಿಂದ ತರಬೇತಿಗೆ ಹೋಗುವ ಉಪನ್ಯಾಸಕರಿಗೆ ನಾವು ಯಾವುದೇ ರೀತಿಯಲ್ಲೂ ಅಡ್ಡಿಪಡಿಸುವುದಿಲ್ಲ. ಆದರೆ, ಬರಲೇ ಬೇಕು ಎಂದು ಒತ್ತಡ ಹೇರುವುದು ಸರಿಯಲ್ಲ. ಅನೇಕ ಉಪನ್ಯಾಸಕರಿಗೆ ಅನಿವಾರ್ಯ ಕಾರಣಗಳಿಂದ ಬರಲು ಆಗುವುದಿಲ್ಲ. ವಿಶೇಷ ತರಗತಿಗೆ 500 ರೂ. ನೀಡುತ್ತಾರೆ ಎಂದು ಭಾನುವಾರವೂ ಕಾಲೇಜಿಗೆ ಹೋಗುವುದು ಕಷ್ಟ. ಈ ಕಾರ್ಯಕ್ರಮದಲ್ಲಿ ಸ್ವಲ್ಪ ತಿದ್ದುಪಡಿ ಮಾಡುವಂತೆ ಇಲಾಖೆಯ ನಿರ್ದೇಶಕರಲ್ಲಿ ಮನವಿ ಮಾಡಿದ್ದೇವೆ ಎಂದು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದರು.
ಬದಲಾವಣೆ ಸಾಧ್ಯವಿಲ್ಲ: ಶಿಖಾ
ಈ ತರಬೇತಿಯನ್ನು ಬೇರೆ ದಿನ ಮಾಡಲು ಸಾಧ್ಯವಿಲ್ಲ. ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳ ಇಂಗ್ಲಿಷ್ ವ್ಯಾಕರಣ ಹಾಗೂ ಭಾಷಾ ಕೌಶಲ್ಯ ವೃದ್ಧಿಗೆ ಈ ತರಬೇತಿ ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ಸಂದರ್ಶನದಲ್ಲಿ ಪಾಲ್ಗೊಳ್ಳಲು ಇದು ಪೂರಕವಾಗಲಿದೆ. ತಾಲೂಕು ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ತಜ್ಞರು ಸಿದ್ಧªಪಡಿಸಿದ ಪಠ್ಯಕ್ರಮವನ್ನು ಈಗಾಗಲೇ ನೀಡಿದ್ದೇವೆ. ಅದರ ಆಧಾರದಲ್ಲಿಯೇ ಪ್ರತಿ ಭಾನುವಾರ ತರಬೇತಿ ನಡೆಯಲಿದೆ. ಆ.6ರಂದು ಮೊದಲ ತರಗತಿ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರದಲ್ಲಿ ನಡೆಯಲಿದೆ ಎಂದು ಪಿಯು ಇಲಾಖೆ ನಿರ್ದೇಶಕಿ ಸಿ.ಶಿಖಾ “ಉದಯವಾಣಿ’ಗೆ ತಿಳಿಸಿದರು.
ತರಬೇತಿಗೆ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪಿಯು ಕಾಲೇಜಿನ ಉಪನ್ಯಾಸಕರನ್ನು ಆಹ್ವಾನಿಸಿದ್ದೇವೆ. ವಿದ್ಯಾರ್ಥಿಗಳ ಹಾಜರಾತಿ ಆಧಾರದಲ್ಲಿ ಉಪನ್ಯಾಸಕರ ಆಯ್ಕೆ ನಡೆಯಲಿದೆ. 3 ಗಂಟೆಗಳ ತರಬೇತಿ ಪ್ರತಿ ಭಾನುವಾರ ನಡೆಯಲಿದ್ದು, ನಿವೃತ್ತ ಉಪನ್ಯಾಸಕರನ್ನು ಹಾಗೂ ಪ್ರೌಢಶಾಲೆಯ ಆಂಗ್ಲ ಭಾಷೆಯ ಮೇಲೆ ಉತ್ತಮ ಹಿಡಿತವಿರುವ ಶಿಕ್ಷಕರನ್ನು ಇದಕ್ಕೆ ನೇಮಿಸಿಕೊಳ್ಳಲು ಸೂಚಿಸಿದ್ದೇವೆ. ತರಬೇತಿಯಲ್ಲಿ ಯಾವುದೇ ರೀತಿಯ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.