ಜನಪ್ರಿಯತೆಗಾಗಿ ತರಾತುರಿಯಲ್ಲಿ ಅಕ್ರಮ-ಸಕ್ರಮ


Team Udayavani, Sep 23, 2017, 11:46 AM IST

devegowda.jpg

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪ್ರಿಯತೆಗಾಗಿ ತರಾತುರಿಯಲ್ಲಿ ನಗರದಲ್ಲಿ ಅಕ್ರಮ-ಸಕ್ರಮ ಯೋಜನೆ ಜಾರಿಗೊಳಿಸಲು ಮುಂದಾಗಿದ್ದಾರೆ,’ ಎಂದು ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡ ಆರೋಪಿಸಿದ್ದಾರೆ. ಮಾಗಡಿ ರಸ್ತೆ ಹೇರೋಹಳ್ಳಿಯಲ್ಲಿ ಉದ್ಯಾನ ಜಾಗ ಕಬಳಿಕೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

“ಈಗಿನ ರೂಪದಲ್ಲೇ ಅಕ್ರಮ-ಸಕ್ರಮ ಜಾರಿಗೊಳಿಸಿದರೆ ಸಾಕಷ್ಟು ಜನರಿಗೆ ವಂಚನೆ ಹಾಗೂ ತೊಂದರೆಯಾಗಲಿದೆ,’ ಎಂದು ಹೇಳಿದರು. “ಬೆಂಗಳೂರಿನಲ್ಲಿ ಏನಾಗುತ್ತಿದೆ ಎಂಬುದು ನನಗೆ ಗೊತ್ತಿದೆ. ಕುಮಾರಸ್ವಾಮಿಯವರಿಗೂ ಮಾಹಿತಿಯಿದೆ. ಅಕ್ರಮ-ಸಕ್ರಮದ ತನಿಖಾಧಿಕಾರಿಗಳು ಗಟ್ಟಿಯಾಗಿ ನಿಲ್ಲದಿದ್ದರೆ ಕಷ್ಟ.

ಹೇರೋಹಳ್ಳಿ ವಾರ್ಡ್‌ನ ಲಿಂಗಧೀರನಹಳ್ಳಿಯಲ್ಲಿ ಆಗಿರುವ ಭೂ ಕಬಳಿಕೆ ಇದಕ್ಕೆ ಉದಾರಹಣೆ,’ ಎಂದರು. “ಕುಮಾರಸ್ವಾಮಿ  ಸಿಎಂ ಆಗಿದ್ದಾಗ ಸರ್ಕಾರದ ಡಿ ಗ್ರೂಪ್‌ ನೌಕರರಿಗೆ ನಿವೇಶನ ನೀಡಲು ರೈತರಿಂದ ನೇರವಾಗಿ ಭೂಮಿ ಪಡೆದು ಬಡಾವಣೆ ನಿರ್ಮಿಸಲು ತೀರ್ಮಾನಿಸಿದ್ದರು.

ಆದರೆ, ಅವರು  ಅಧಿಕಾರ ಕಳೆದಿಕೊಂಡ ಮೇಲೆ ಇಲ್ಲಿ ಸಾಕಷ್ಟು ಅಕ್ರಮ ಆಗಿದೆ. ಖುದ್ದು ನನ್ನ ಚಾಲಕ ವಸಂತ್‌ ಅವರು ದುಡ್ಡು ಕಟ್ಟಿದ್ದರೂ ನಿವೇಶನ ಸಿಕ್ಕಿಲ್ಲ. ಡಿ ಗ್ರೂಪ್‌ ನೌಕರರ ಜತೆ  ಬೇರೆಯವರಿಗೂ ನಿವೇಶನ ನೀಡಲಾಗಿದೆ. ಉದ್ಯಾನದ 2.10 ಎಕರೆ ಜಮೀನು ಒತ್ತುವರಿ ಮಾಡಿ ಮನೆ ಕಟ್ಟಲಾಗುತ್ತಿದೆ,’ ಎಂದು ಮಾಜಿ ಪ್ರಧಾನಿ ದೂರಿದರು. 

ಹೋರಾಟದ  ಎಚ್ಚರಿಕೆ: “ಮುಂದೆ ಎಲ್ಲವೂ ಸಕ್ರಮವಾಗಲಿದೆ ಎಂಬ ಧೈರ್ಯದಿಂದ ಇಲ್ಲಿ ಒತ್ತುವರಿ ಜಾಗದಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಸ್ಥಳೀಯ ರಾಜಕಾರಣಿಗಳ ಪ್ರಭಾವ ಇಲ್ಲದೆ ಏನೂ  ನಡೆಯುವುದಿಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಡಿ ಗ್ರೂಪ್‌ ನೌಕರರಿಗೆ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾನು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ,’ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.